1. ಸುದ್ದಿಗಳು

ಮಾರ್ಚ್ 6 ರಂದು ದಾವಣಗೆರೆ ಮತ್ತು ಕೋಲಾರದಲ್ಲಿ ಉದ್ಯೋಗ ಮೇಳ

Ramlinganna
Ramlinganna
job fair

ದಾವಣಗೆರೆ ಜಿಲ್ಲಾ ಉದ್ಯೋಗ ಮತ್ತು ವಿನಿಮಯ ಕೇಂದ್ರ ದಾವಣಗೆರೆ ಹಾಗೂ ಹೊನ್ನಾಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ಮಾ. 6ರಂದು ಬೆಳಿಗ್ಗೆ 10 ಗಂಟೆಗೆ ಹೊನ್ನಾಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಉದ್ಯೋಗ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸುತ್ತಿವೆ. ಎಸ್ಸೆಸ್ಸೆಲ್ಸಿ, ಪಿ.ಯು.ಸಿ, ಐಟಿಐ, ಡಿಪ್ಲೊಮಾ, ಬಿಎ, ಬಿ.ಕಾಂ, ಬಿಎಸ್ಸಿ, ಬಿಬಿಎ/ ಬಿಬಿಎಂ, ಬಿಸಿಎ ಹಾಗೂ ಸ್ನಾತಕೋತ್ತರ ಪದವಿ ಹೊಂದಿದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಆಸಕ್ತ ಅಭ್ಯರ್ಥಿಗಳು ಮಾ. 6ರ ಬೆಳಿಗ್ಗೆ 10 ಗಂಟೆಗೆ ಕನಿಷ್ಠ 10 ಬಯೋಡಾಟಾ, ಆಧಾರ್‌ ಕಾರ್ಡ್‌ನೊಂದಿಗೆ ಭಾಗವಹಿಸಬೇಕು.

ಮಾಹಿತಿಗಾಗಿ 08192-259446, 6361550016, 9743636369, 7406323294 ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಗಿರೀಶ್ ಕೆ.ಎನ್. ತಿಳಿಸಿದ್ದಾರೆ

6 ರಂದು ಕೋಲಾರದಲ್ಲಿ ಉದ್ಯೋಗ ಮೇಳ

ಕೋಲಾರ ಜಿಲ್ಲೆಯ ರಾಜ್ಯ ಕೌಶಲಾಭಿವೃದ್ಧಿ ನಿಗಮ, ಜಿಲ್ಲಾ ಕೌಶಲ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರದ (ಎಚ್‌ಆರ್‌ಡಿಸಿ) ಸಹಯೋಗದಲ್ಲಿ ಜಿಲ್ಲಾ ಕೇಂದ್ರದಲ್ಲಿ ಮಾರ್ಚ್‌ 6ರಂದು ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.

ಪ್ರತಿಷ್ಠಿತ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಕೆಲಸಕ್ಕೆ ನೇಮಿಸಿಕೊಳ್ಳಲಿವೆ. ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ ವಿದ್ಯಾರ್ಹತೆಯ ಅಭ್ಯರ್ಥಿಗಳು ಶೈಕ್ಷಣಿಕ ದಾಖಲೆಪತ್ರಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು ಎಂದು ಎಚ್‌ಆರ್‌ಡಿಸಿ ವ್ಯವಸ್ಥಾಪಕ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

;

ಜಿಲ್ಲಾ ಕೇಂದ್ರದ ಅಂತರಗಂಗೆ ರಸ್ತೆಯ ಎಚ್‌ಆರ್‌ಡಿಸಿ ಕೇಂದ್ರದಲ್ಲಿ ಸಂದರ್ಶನ ನಡೆಯಲಿದೆ. ಆಸಕ್ತರು ಹೆಚ್ಚಿನ ಮಾಹಿತಿಗೆ 9606695770 ಅಥವಾ 8884461667 ಮೊಬೈಲ್‌ ಸಂಖ್ಯೆ ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.

Share your comments

Latest feeds

More News
Krishi Jagran Kannada Magazine Subscription Online Subscription
Krishi Jagran Kannada Subscription

CopyRight - 2021 Krishi Jagran Media Group. All Rights Reserved.