1. ಸುದ್ದಿಗಳು

ತುಮಕೂರಿನಲ್ಲಿ ಫೆ. 5 ರಂದು ಬೃಹತ್ ಉದ್ಯೋಗ ಮೇಳ

ಕೊರೋನಾದಿಂದಾಗಿ ಉದ್ಯೋಗ ಕಳೆದುಕೊಂಡಿದ್ದರೆ, ಅಥವಾ ಉದ್ಯೋಗದ ನಿರೀಕ್ಷೆಯಲ್ಲಿದ್ದರೆ ನಿಮಗೊಂದು ಸಂತಸದ ಸುದ್ದಿ ಇಲ್ಲಿದೆ. ಹೌದು ತುಮಕೂರು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಮಾದರಿ ವೃತ್ತಿ ಕೇಂದ್ರದಿಂದ ಫೆ. 5ರಂದು ಉದ್ಯೋಗ ಮೇಳ ನಡೆಯಲಿದೆ.

ಫೆ. 5ರಂದು ಬೆಳಿಗ್ಗೆ 9.30ಕ್ಕೆ ಸಿದ್ಧಾರ್ಥ ಇನ್‌ಸ್ಟಿಟ್ಯೂಟ್ ಆಫ್‌ ಬ್ಯುಸಿನೆಸ್ ಮ್ಯಾನೇಜ್‍ಮೆಂಟ್, ಎಸ್‌ಎಸ್ಐಟಿ ಕ್ಯಾಂಪಸ್ ತುಮಕೂರು– ಇಲ್ಲಿ ಮೇಳ ನಡೆಯಲಿದೆ.ಈ ಉದ್ಯೋಗಮೇಳದಲ್ಲಿ ಬೆಂಗಳೂರು ಹಾಗೂ ತುಮಕೂರಿನ ಹೆಸರಾಂತ ಕಂಪನಿಗಳು ಭಾಗವಹಿಸಲಿವೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಡಿಪ್ಲೊಮಾ, ಎಂಜಿನಿಯರಿಂಗ್ ಶಿಕ್ಷಣದಲ್ಲಿ ಉತ್ತೀರ್ಣರಾದವರು ವ್ಯಕ್ತಿಗತ ವಿವರ ಹಾಗೂ ಶಾಲಾ ದಾಖಲಾತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು.

0816-2278488, 6360700086, 9108986118ಕ್ಕೆ ಕರೆ ಮಾಡಿ ನೋಂದಾಯಿಸಿಕೊಳ್ಳಬಹುದು. 

Share your comments

Latest feeds

More News
Krishi Jagran Kannada Magazine Subscription Online Subscription
Krishi Jagran Kannada Subscription

CopyRight - 2021 Krishi Jagran Media Group. All Rights Reserved.