1. ಸುದ್ದಿಗಳು

ಫೆ. 20 ರಂದು ವಿಜಯಪುರದಲ್ಲಿ ಉದ್ಯೋಗ ಮೇಳ

job fair

ಕೊರೋನಾ ಲಾಕ್ಡೌನ್ ನಿಂದಾಗಿ ಉದ್ಯೋಗ ಕಳೆದುಕೊಂಡವರಿಗೆ ಹಾಗೂ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಈ ಉದ್ಯೋಗ ಮೇಳ ಸಹಕಾರಿಯಾಗಲಿದೆ. ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಉದ್ಯೋಗ ಮೇಳ ನಡೆಯುತ್ತಿದೆ. ಈಗ ವಿಜಯಪುರ ಜಿಲ್ಲೆಯಲ್ಲಿಯೂ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಬಾಗಲಕೋಟೆ ರಸ್ತೆಯಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಫೆ.20ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 4ರ ವರೆಗೆ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇ ರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಎಂಜಿನಿಯರಿಂಗ್ ಸೇರಿದಂತೆ ಯಾವುದೇ ಪದವಿ, ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಉದ್ಯೋಗ ಮೇಳವನ್ನು ಆಯೋಜಿ ಸಲಾಗಿದೆ. ಈ ಮೇಳದಲ್ಲಿ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಲಿವೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು https://www.sites.google.com/view/vijaypura ವೆಬ್‍ಸೈಟ್‍ನಲ್ಲಿ ನೋಂದಾಯಿಸಬಹುದಾಗಿದೆ. ಹೆಚ್ತಚಿನ ಮಾಹಿತಿಗೆ 08352-250383 ಸಂಪರ್ಕಿಸಸಬಹುದು.

991 ಅಭ್ಯರ್ಥಿಗಳಿಗೆ ಉದ್ಯೋಗ ಭಾಗ್ಯ

ಬೆಂಗಳೂರು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ನಗರದ ಮಹಾರಾಣಿ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಉದ್ಯೋಗಮೇಳದಲ್ಲಿ 991 ಅಭ್ಯರ್ಥಿಗಳು ಉದ್ಯೋಗ ಗಿಟ್ಟಿಸಿಕೊಂಡಿದ್ದಾರೆ. ಈ ಮೇಳದಲ್ಲಿ 2,158 ಅಭ್ಯರ್ಥಿಗಳು ಪಾಲ್ಗೊಂಡಿದ್ದರು. 45 ಕಂಪನಿಗಳು ಸಂದರ್ಶನ ನಡೆಸಿ, ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡವು.

ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಡಿಪ್ಲೊಮಾ ಪೂರೈಸಿದವರಿಗೆ ಕೆಲಸ ಪಡೆಯುವ ಅವಕಾಶ ಕಲ್ಪಿಸಲಾಗಿತ್ತು. ಮೇಳದಲ್ಲಿ ಪಾಲ್ಗೊಂಡಿದ್ದ ಅಭ್ಯರ್ಥಿಗಳಲ್ಲಿ 991 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.

Published On: 14 February 2021, 10:10 AM English Summary: job fair in vijaypura

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.