News

ಆಸಿಡ್‌ ದಾಳಿಗೆ ಒಳಗಾಗಿದ್ದ ಸಂತ್ರಸ್ಥೆಗೆ ಸಿ.ಎಂ ಸಚಿವಾಲಯದಲ್ಲಿ ಉದ್ಯೋಗ: ಸಿದ್ದರಾಮಯ್ಯ

30 June, 2023 4:27 PM IST By: Hitesh
Job in CM ministry for acid attack victim: Siddaramaiah

ಆಸಿಡ್‌ ದಾಳಿ ಸಂತ್ರಸ್ಥೆಗೆ ಸಿ.ಎಂ ಸಚಿವಾಲಯದಲ್ಲಿ ಮುಖ್ಯಮಂತ್ರಿ (Siddaramaiah) ಸಿದ್ದರಾಮಯ್ಯ ಅವರು ಉದ್ಯೋಗ ಕಲ್ಪಿಸಿದ್ದಾರೆ.

ಆಸಿಡ್ ದಾಳಿಯಿಂದ ಸಂಕಷ್ಟಕ್ಕೆ ಒಳಗಾಗಿದ್ದ ಸಂತ್ರಸ್ಥೆಗೆ ಮುಖ್ಯಮಂತ್ರಿ ಅವರ (Siddaramaiah) ಸಚಿವಾಲಯದಲ್ಲಿ ಉದ್ಯೋಗ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ದೇಶನ ನೀಡಿದ್ದಾರೆ.   

ಮುಖ್ಯಮಂತ್ರಿ  ಸಿದ್ದರಾಮಯ್ಯ (Siddaramaiah) ಅವರು ತಮ್ಮ ನಿವಾಸದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಸ್ನಾತಕೋತ್ತರ ಪದವೀಧರೆಯೂ ಆಗಿರುವ

ಆಸಿಡ್‌ ದಾಳಿ ಸಂತ್ರಸ್ಥೆ ಅವರಿಗೆ ಉದ್ಯೋಗ ನೀಡುವಂತೆ ಮನವಿ ಮಾಡಿದ್ದರು.

ಸಂತ್ರಸ್ಥೆಯ ಅಹವಾಲನ್ನು ಕೇಳಿ ಸ್ಥಳದಲ್ಲೇ ಮುಖ್ಯಮಂತ್ರಿ (Siddaramaiah) ಸಿದ್ದರಾಮಯ್ಯ ಅವರು ಉದ್ಯೋಗ ನೀಡುವುದಾಗಿ  ಭರವಸೆ ನೀಡಿದರು.

2022ರ ಏಪ್ರಿಲ್ 28ರಂದು ಆಸಿಡ್ (acid attack) ದಾಳಿಗೆ ತುತ್ತಾಗಿದ್ದ ಸಂತ್ರಸ್ಥೆಯು ಎಂ.ಕಾಂ ಪದವೀಧರೆ ಆಗಿದ್ದಾರೆ.

ಯುವತಿಯು ಅವರ ಪೋಷಕರೊಂದಿಗೆ  ಜನತಾ ದರ್ಶನಕ್ಕೆ ಬಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದರು.

ಈ ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರಲ್ಲೂ ಉದ್ಯೋಗದ ಮನವಿ ಮಾಡಿದ್ದೆವು. ಅವರು ಭರವಸೆ ನೀಡಿದ್ದರು.

ಆದರೆ ಉದ್ಯೋಗ ಮಾತ್ರ ಕೊಡಲಿಲ್ಲ ಎಂದು ಅಳಲು ತೋಡಿಕೊಂಡರು.

 ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿಗಳು ತಮ್ಮ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.  

ರೋಚಕ ತನಿಖೆ; ಸ್ವಾಮಿ ವೇಷದಲ್ಲಿ ಆರೋಪಿ, ಭಕ್ತರ ವೇಷದಲ್ಲಿ ಪೊಲೀಸರು!

ಯುವತಿಯ ಮೇಲೆ ಆಸಿಡ್‌ ದಾಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ  ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿಯನ್ನು ಪತ್ತೆ ಮಾಡುವುದಕ್ಕೆ ಪೊಲೀಸರು ತೀವ್ರವಾದ ಬಲೆ ಬೀಸಿದ್ದರು. ಈ ಸಂದರ್ಭದಲ್ಲಿಯೇ ಪೊಲೀಸರಿಗೆ ಆರೋಪಿಯು ಸ್ವಾಮಿ ವೇಷದಲ್ಲಿ

ತಿರುವಣ್ಣಾಮಲೈ ಆಶ್ರಮದಲ್ಲಿ ತಲೆ ಮರೆಸಿಕೊಂಡಿರುದು ತಿಳಿದು ಬಂದಿತ್ತು. ಇದಾದ ನಂತರದಲ್ಲಿ ಭಕ್ತರ ವೇಷದಲ್ಲಿ ಹೋಗಿ ಆರೋಪಿಯನ್ನು ಬಂಧಿಸಲಾಗಿತ್ತು.  

ಇದೀಗ ಆಸಿಡ್‌ ದಾಳಿಯ ಆರೋಪಿಯು ಬೆಂಗಳೂರು ಜೈಲಿನಲ್ಲಿದ್ದಾನೆ. ಸಂತ್ರಸ್ಥೆ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.

ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ನೆರವು ನೀಡಲಾಗಿದೆ.