News

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ 115 ಹುದ್ದೆಗಳಿಗೆ ಅರ್ಜಿ ಆಹ್ವಾನ

05 July, 2021 9:13 PM IST By:

ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಸಂತಸದ ಸುದ್ದಿ ಇಲ್ಲಿದೆ. ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಡಿ ಕಲ್ಯಾಣ-ಕರ್ನಾಟಕ ಪ್ರದೇಶದ ಸ್ಥಳೀಯ ವೃಂದದ 32 ಪಶುವೈದ್ಯಕೀಯ ಪರೀಕ್ಷಕರ ಹಾಗೂ 83 ಪಶುವೈದ್ಯಕೀಯ ಸಹಾಯಕ ಸೇರಿದಂತೆ ಒಟ್ಟು 115 ಹುದ್ದೆಗಳನ್ನು ತುಂಬಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಆಗಸ್ಟ್ 16,2021ರೊಳಗೆ ಅರ್ಜಿ ಸಲ್ಲಿಸಬಹುದು.

ಶೈಕ್ಷಣಿಕ ವಿದ್ಯಾರ್ಹತೆ:

ಆಗಸ್ಟ್ 16,2021ರ ಅನ್ವಯ ಪಶುವೈದ್ಯಕೀಯ ಪರೀಕ್ಷಕರ ಹುದ್ದೆಗೆ ಅಭ್ಯರ್ಥಿಯು ಕಾನೂನಿನ ಮೂಲಕ ಸ್ಥಾಪಿಸಲಾದ ವಿಶ್ವವಿದ್ಯಾಲಯದಲ್ಲಿ ಬಿ.ಎಸ್ಸಿ ಪದವಿಯಲ್ಲಿ ಪ್ರಾಣಿಶಾಸ್ತ್ರವನ್ನು ಐಚ್ಛಿಕ ವಿಷಯವಾಗಿ ಹೊಂದಿರುವ ಪದವಿಯನ್ನು ಹೊಂದಿರಬೇಕು. ಪಶುವೈದ್ಯಕೀಯ ಸಹಾಯಕರ ಹುದ್ದೆಗಳಿಗೆ ಅಭ್ಯರ್ಥಿಯು ಕಾನೂನಿನ ಮೂಲಕ ಸ್ಥಾಪಿಸಲಾದ ಕರ್ನಾಟಕ ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಅಥವಾ ಯಾವುದೇ ಇತರ ವಿಶ್ವ ವಿದ್ಯಾಲಯವು ನಡೆಸಲಾದ ಪಶು ಆರೋಗ್ಯ ಡಿಪ್ಲೋಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಅಭ್ಯರ್ಥಿಯು ನಿರ್ದೇಶಕರು, ವೃತ್ತಿ ಶಿಕ್ಷಣ ಕರ್ನಾಟಕ ಸರ್ಕಾರವು ನಡೆಸಲಾದ ಡೈರಿಗೆ ಸಂಬಂಧಿಸಿದ 2 ವರ್ಷಗಳ ಉದ್ಯೋಗ ಆಧಾರಿತ ಕೋರ್ಸ್ ನಲ್ಲಿ ಉತ್ತೀರ್ಣರಾಗಿರಬೇಕು.

ಅರ್ಜಿ ಶುಲ್ಕ: ಸಾಮಾನ್ಯ ಅರ್ಹತೆ, ಪ್ರವರ್ಗ-2ಎ, 2ಬಿ, 3ಎ, 3ಬಿಗೆ ಸೇರಿದ ಅಭ್ಯರ್ಥಿಗಳಿಗೆ 520/-ರೂ (ಅರ್ಜಿ ಶುಲ್ಕ 500/-ರೂ ಹಾಗೂ ಅಂಚೆ ಸೇವಾ ಶುಲ್ಕ 20/-ರೂ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಕೊ ಸೈನಿಕ ಮತ್ತು ವಿಶೇಷ ಚೇತನ ಅಭ್ಯರ್ಥಿಗಳು 270/-ರೂ (ಅರ್ಜಿ ಶುಲ್ಕ 250/-ರೂ ಹಾಗೂ ಅಂಚೆ ಸೇವಾ ಶುಲ್ಕ 20/-ರೂ) ಅರ್ಜಿ ಶುಲ್ಕವನ್ನು ಆಗಸ್ಟ್ 20,2021ರೊಳಗೆ (ಅಂಚೆ ಕಚೇರಿ ಕರ್ತವ್ಯದ ವೇಳೆಗೆ) ಕರ್ನಾಟಕ ರಾಜ್ಯದ ಯಾವುದೇ ಇ-ಅಂಚೆ ಕಚೇರಿಗಳಲ್ಲಿ ಪಾವತಿಸಬಹುದು. ಅರ್ಜಿ ಸಲ್ಲಿಕೆ: ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಅಧಿಕೃತ ವೆಬ್‌ಸೈಟ್‌ http://www.ahvs.kar.nic.in/en-home.html ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 16,2021ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಪಶು ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ ವರೆಗೆ ಕಾಲಾವಕಾಶ

 ಕೋವಿಡ್ ಹಿನ್ನೇಲೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಪಶುಸಂಗೋಪನೆ ಇಲಾಖೆಯ ಪಶುವೈದ್ಯಕೀಯ ಸಹಾಯಕ ಮತ್ತು ಪರೀಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಆಗಸ್ಟ್ 18 ರವರೆಗ ಕಾಲಾವಕಾಶ ನೀಡಲಾಗಿದೆ ಎಂದು ಸಚಿವ ಪ್ರಭು ಚವ್ಹಾಣ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋವಿಡ್ ಹಿನ್ನೆಲೆಯಲ್ಲಿ ಅನೇಕ ಅಭ್ಯರ್ಥಿಗಳಿಗೆ ಪಶುವೈದ್ಯಕೀಯ ಸಹಾಯಕ ಮತ್ತು ಪಶುವೈದ್ಯಕೀಯ ಪರೀಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸಲು ತೊಂದರೆ ಆಗಿರುವ ಕುರಿತು ಕಲ್ಯಾಣ ಕರ್ನಾಟಕ ಭಾಗದ ಅನೇಕ ಉದ್ಯೋಗಾಕಾಂಕ್ಷಿಗಳು ಕರೆ ಮಾಡಿ ತಮ್ಮ ಅಸಾಹಾಯಕತೆಯನ್ನು ತೋಡಿಕೊಂಡಿದ್ದರು. ಈ ಕುರಿತಾಗಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಅರ್ಜಿ ಸಲ್ಲಿಸಲು 2 ತಿಂಗಳ ಕಾಲಾವಕಾಶ ನೀಡಲಾಗಿದೆ.

ಪಶುವೈದ್ಯಕೀಯ ಸಹಾಯಕ 83 ಹುದ್ದೆಗಳು ಮತ್ತು ಪಶುವೈದ್ಯಕೀಯ ಪರೀಕ್ಷಕ 32 ಹುದ್ದೆಗಳಿಗೆ ದಿನಾಂಕ 16.06.2021 ರಿಂದ ದಿನಾಂಕ 18.08.2021ರ ವರೆಗೆ ಕಾಲಾವಕಾಶ ನೀಡಲಾಗಿದೆ  ಒಟ್ಟು 115 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಪಶುಸಂಗೋಪನೆ ಇಲಾಖೆಯಲ್ಲಿ ಹಲವಾರು ವರ್ಷಗಳಿಂದ ಸುಮಾರು ಹುದ್ದೆಗಳು ಖಾಲಿಯಿದ್ದು ಈ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಕ್ರಮೇಣ ಪಶುಸಂಗೋಪನೆ ಇಲಾಖೆಯಲ್ಲಿ ನೆಮಕಾತಿಗೆ ಕ್ರಮವಹಿಸಲಾಗುತ್ತಿದೆ. ಸದ್ಯ ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು ಮುಂದಿನ ದಿನಗಳಲ್ಲಿ ಈ ಭಾಗದ ಪಶು ವೈದ್ಯಕೀಯ ಸೇವೆಯನ್ನು ಹೆಚ್ಚು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಬೇಕಾದ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.