News

ನರೇಗಾ ಯೋಜನೆಯಡಿ ವಿವಿಧ ಹುದ್ದೆಗಳ ಭರ್ತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

09 July, 2021 4:20 PM IST By:
job opportunity

ಕಲಬುರಗಿ ಜಿಲ್ಲಾ ಪಂಚಾಯತ್ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ನಗರದ ಎಂ.ಎಸ್.ಕೆ. ಮಿಲ್ ರಸ್ತೆಯಲ್ಲಿರುವ ಮೆ/ ಮನೀಷ ಮ್ಯಾನ್‌ಪವರ್ ಎಜೆನ್ಸಿಯಿಂದ ತಾಲೂಕು ಮಟ್ಟದಲ್ಲಿ ಈ ಕೆಳಕಂಡ ಹುದ್ದೆಗಳಿಗೆ ಸೇವೆ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ್ ಶಶಿ ಅವರು ತಿಳಿಸಿದ್ದಾರೆ.

ತಾಲೂಕು ಎಮ್‌ಐಎಸ್ ಸಂಯೋಜಕರು 3 ಹುದ್ದೆಗಳಿಗೆ, ತಾಲೂಕು ಐಇಸಿ ಸಂಯೋಜಕರು 4 ಹುದ್ದೆಗಳಿಗೆ ಹಾಗೂ ತಾಂತ್ರಿಕ ಸಹಾಯಕರು 25 ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ತಾಲೂಕು ಎಮ್‌ಐಎಸ್ ಸಂಯೋಜಕರು  ಹಾಗೂ ತಾಲೂಕು ಐಇಸಿ ಸಂಯೋಜಕರು ಹುದ್ದೆಗಳಿಗೆ ಗರಿಷ್ಠ ವಯೋಮಿತಿ 45 ವರ್ಷದೊಳಗಿರಬೇಕು.

ಅರ್ಹ ಅಭ್ಯರ್ಥಿಗಳು https://kalaburagi.nic.in ವೆಬ್‌ಸೈಟ್‌ದಲ್ಲಿ ಆನ್‌ಲೈನ್ ಮೂಲಕ 2021ರ ಜುಲೈ 15 ರೊಳಗಾಗಿ ಅರ್ಜಿ ಸಲಿಸಬೇಕು. ಅಭ್ಯರ್ಥಿಗಳು ಹುದ್ದೆಗಳಿಗೆ ನಿಗದಿಪಡಿಸಿದ ವಿದ್ಯಾರ್ಹತೆ, ಮಾಸಿಕ ವೇತನ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಮೇಲ್ಕಂಡ ವೆಬ್‌ಸೈಟ್‌ನ್ನು ಸಂಪರ್ಕಿಸಲು ಕೋರಲಾಗಿದೆ.

ಉದ್ಯಮಶೀಲತಾಭಿವೃದ್ಧಿ ಜಾಗೃತಿ ತರಬೇತಿ ಕಾರ್ಯಕ್ರಮ: ಆಸಕ್ತರಿಂದ ಅರ್ಜಿ ಆಹ್ವಾನ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಪ್ರಾಯೋಜಕತ್ವ ಹಾಗೂ ಧಾರವಾಡದ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್)ದಿಂದ ಸ್ವಯಂ ಉದ್ಯೋಗ ಪ್ರಾರಂಭಿಸಲಿಚ್ಛಿಸುವ ಆಸಕ್ತರಿಗೆ ಕಲಬುರಗಿಯಲ್ಲಿ ಇದೇ ಜುಲೈ 14 ರಂದು ಒಂದು ದಿನದ ಉದ್ಯಮಶೀಲತಾಭಿವೃದ್ಧಿ ಜಾಗೃತಿ ತರಬೇತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಇದಕ್ಕಾಗಿ ಕಲಬುರಗಿ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸಿಡಾಕ್ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

  ಅಭ್ಯರ್ಥಿಗಳು ವಯೋಮಿತಿ 18 ರಿಂದ 40 ವರ್ಷದೊಳಗಿರಬೇಕು. ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಜಂಟಿ ನಿರ್ದೇಶಕರು, ಸಿಡಾಕ್. ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಸರ್ಕಾರಿ ಬಾಲಕರ ಐಟಿಐ ಆವರಣ, ಎಂ.ಎಸ್.ಕೆ. ಮಿಲ್ ರಸ್ತೆ, ಕಲಬುರಗಿ  ವಿಳಾಸಕ್ಕೆ 2021ರ ಜುಲೈ 12 ರೊಳಗಾಗಿ ಸಲ್ಲಿಸಬೇಕು ಅಥವಾ ಮೊಬೈಲ್ ಸಂಖ್ಯೆ 9916006910, 8618797704 ಗಳಿಗೆ ಕರೆ ಮಾಡಿ ತಮ್ಮ ಹೆಸರುವನ್ನು ನೊಂದಾಯಿಸಿಕೊAಡು ಕಾರ್ಯಕ್ರಮಕ್ಕೆ ಹಾಜರಾಗಬಹುದಾಗಿದೆ.

ಈ ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಹಾಗೂ ಉದ್ಯಮ ನಿರ್ವಹಣೆ, ಉದ್ಯಮಶೀಲತೆ, ಉದ್ಯಮ ಪ್ರಾರಂಭದ ಹಂತಗಳು, ಉದ್ಯಮಗಳನ್ನು ಪ್ರಾರಂಭಿಸಲು ಸರ್ಕಾರದ ಯೋಜನೆಗಳು, ಸಾಲ ಸೌಲಭ್ಯಗಳು, ಬ್ಯಾಂಕ್ ಬಗ್ಗೆ, ಉದ್ಯಮ ನಿರ್ವಹಣೆ ಮಾಡುವ ವಿಧಾನಗಳು ಮತ್ತು ಇತ್ಯಾದಿ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ 9916006910, 8618797704 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.