ಕರ್ನಾಟಕದ ನಂದಿನಿ ಉತ್ಪನ್ನವು ಸೇರಿದಂತೆ ದಕ್ಷಿಣ ಭಾರತದ ಮೊಸರಿನ ಉತ್ಪನ್ನದ ಮೇಲೆ ದಹಿ ಎಂದು ಬಳಸುವುದಕ್ಕೆ ದಕ್ಷಿಣ ಭಾರತದ ರಾಜ್ಯಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ದಹಿ ಎಂದು ಬಳಸಲು ಆಗುವುದಿಲ್ಲ. ಕರ್ನಾಟಕದಲ್ಲಿ ಕನ್ನಡವೇ ಪ್ರಥಮ ಎಂದು ಕನ್ನಡಿಗರು ಹೇಳಿದ್ದರೆ. ತಮಿಳುನಾಡಿನಲ್ಲಿ ದಹಿನಹಿ ಪೋಡಾ ಎನ್ನುವುದು ಟ್ರೆಂಡ್ ಆಗಿದೆ.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇದನ್ನು ತೀವ್ರವಾಗಿ ವಿರೋಧಿಸಿದ್ದಾರೆ.
ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು, ಈ ಆದೇಶ ತಪ್ಪು ಇದನ್ನು ನಾವು ಒಪ್ಪಲು ಸಾಧ್ಯವಿಲ್ಲ ಎಂದಿದ್ದಾರೆ.
ಈ ಹಿಂದೆ ಹಿಂದಿಯನ್ನು ಬಳಸಬೇಕು ಎಂದಾಗಲು ಸ್ಟಾಲಿನ್ ಈ ಕ್ರಮವನ್ನು "ಅಸಾಧ್ಯ" ಮತ್ತು "ವಿಭಜಕ" ಎಂದು ಕರೆದಿದ್ದರು.
ಹಿಂದಿ ಮಾತನಾಡದ ರಾಜ್ಯಗಳ ಜನರನ್ನು ಅನನುಕೂಲಕ್ಕೆ ಒಳಪಡಿಸುತ್ತದೆ ಮತ್ತು ಒಕ್ಕೂಟ-ರಾಜ್ಯ ಸಂಬಂಧಗಳ "ಭಾವನೆಯನ್ನು ಪ್ರಭಾವಿಸುತ್ತದೆ" ಎಂದು ಹೇಳಿದರು.
Dahi controversy ನಂದಿನಿ ಉತ್ಪನ್ನದ ಮೇಲೆ ದಹಿ ಪದ ಬಳಕೆ ಏನಿದು ವಿವಾದ?
ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರು ಬುಧವಾರ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (ಎಫ್‌ಎಸ್‌ಎಸ್‌ಎಐ) ಅಧ್ಯಕ್ಷರಿಗೆ ಪತ್ರ ಬರೆದಿದ್ದು,
ಸರ್ಕಾರಿ ಸ್ವಾಮ್ಯದ ಸಹಕಾರಿ ಸಂಸ್ಥೆಗಳು ತಯಾರಿಸುವ ಮೊಸರು ಸಾಕೆಟ್‌ಗಳಲ್ಲಿ “ದಹಿ” ಅನ್ನು ಬಳಸುವ ಅಧಿಸೂಚನೆಯನ್ನು ಹಿಂಪಡೆಯುವಂತೆ ಕೇಳಿದ್ದಾರೆ.
ಈ ಅಧಿಸೂಚನೆಯು ಪ್ರಧಾನಿ ನರೇಂದ್ರ ಮೋದಿಯವರ ಪ್ರಾದೇಶಿಕ ಭಾಷೆಗಳ ಪ್ರಚಾರಕ್ಕೆ ಅನುಗುಣವಾಗಿಲ್ಲ
ಎಂದು ಹೇಳಿದ ಅಣ್ಣಾಮಲೈ, ಆಯೋಗವು ಹೊರಡಿಸಿದ ಅಧಿಸೂಚನೆಯನ್ನು ತಕ್ಷಣವೇ ಹಿಂತೆಗೆದುಕೊಳ್ಳುವಂತೆ ಎಫ್‌ಎಸ್‌ಎಸ್‌ಎಐ ಮುಖ್ಯಸ್ಥರನ್ನು ಕೇಳಿದರು.
ನಂದಿನಿ ಉತ್ಪನ್ನದ ಮೇಲೆ ಹಿಂದಿ ಹೆಸರು, ಸಾಮಾಜಿಕ ಮಾಧ್ಯಮದಲ್ಲಿ ವಿರೋಧ
ಮೊಸರು ಪ್ಯಾಕೆಟ್‌ಗಳ ಮೇಲೆ ಪ್ರಾದೇಶಿಕ ಭಾಷೆ ಮತ್ತು "ರಾಜ್ಯ-ಚಾಲಿತ ಸಹಕಾರಿ ಹಾಲು ಸಂಘಗಳು ತಮ್ಮ ಪ್ರಾದೇಶಿಕ ಭಾಷೆಯನ್ನು ಬಳಸಲು ಅನುಮತಿಸಿ ಎಂದಿದ್ದಾರೆ.
ಹಿಂದಿ ಹೇರಿಕೆಗೆ ಕನ್ನಡಿಗರ ವಿರೋಧವಿದೆ ಎಂದು ಗೊತ್ತಿದ್ದರೂ ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ 'ದಹಿ' ಎಂದು ಮುದ್ರಿಸಿರುವುದು,
ಅದನ್ನು ಕಡ್ಡಾಯವಾಗಿ ಮುದ್ರಿಸುವಂತೆ ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರವು ಕೆಎಂಎಫ್ ಗೆ ಆದೇಶ ನೀಡಿರುವುದು ತಪ್ಪು.ಇದನ್ನು ಒಪ್ಪಲು ಸಾಧ್ಯವಿಲ್ಲ.
ಅಪರೂಪದ ಕಾಯಿಲೆ: ಔಷಧಿ, ಉಪಕರಣ ಖರೀದಿಗೆ ಸುಂಕ ವಿನಾಯಿತಿ
ನಂದಿನಿ ನಮ್ಮ ಕನ್ನಡಿಗರ ಆಸ್ತಿ: ಕುಮಾರಸ್ವಾಮಿ
ನಂದಿನಿ ಕನ್ನಡಿಗರ ಆಸ್ತಿ, ಕನ್ನಡಿಗರ ಅಸ್ಮಿತೆ ಹಾಗೂ ಕನ್ನಡಿಗರ ಜೀವನಾಡಿ. ಇದು ಗೊತ್ತಿದ್ದರೂ ಹಿಂದಿ ಹೇರಿಕೆಯ ಅಹಂ ತೋರಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವರು ಈ ರೀತಿ ಹೇಳಿದ್ದಾರೆ, “
ಈ ಹಿಂದೆ ಕೇಂದ್ರ ಗೃಹ ಸಚಿವ ಶ್ರೀ Amit Shah ಅವರು ಮಂಡ್ಯದ ಸಭೆಯೊಂದರಲ್ಲಿ, ಗುಜರಾತಿನ ಅಮುಲ್ ಜತೆ ನಂದಿನಿಯನ್ನು
ವಿಲೀನ ಮಾಡುವುದಾಗಿ ಹೇಳಿದ್ದರು. ಹಿಂದಿ ಪದ ಮುದ್ರಣ ನಂದಿನಿ ಹೈಜಾಕಿನ ಅರಂಭವಾ
ಶಾ ಅವರ ಹೇಳಿಕೆಯನ್ನು ಕನ್ನಡಿಗರು ಖಂಡಿಸಿದ್ದರು. ನಾನೂ ವಿರೋಧಿಸಿದ್ದೆ. ಆಮೇಲೆ ಸುಮ್ಮನಾಗಿದ್ದ Bharatiya Janata Party (BJP) ಸರಕಾರ,
ಈಗ ಆಹಾರ ಸುರಕ್ಷತಾ ಪ್ರಾಧಿಕಾರದ ಮೂಲಕ ಹಿಂಬಾಗಿಲಿನಿಂದ ಮೊಸರಿನ ಪಕ್ಕ ದಹಿ ಸೇರಿಸಿ ಕನ್ನಡಿಗರ ಸ್ವಾಭಿಮಾನಕ್ಕೆ ಸಡ್ಡು ಹೊಡೆದಿದೆ.
ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ಕನ್ನಡಕ್ಕೆ ಕೊಕ್ಕೆ ಹಾಕಿ ಹಿಂದಿಯನ್ನು ಮೆಲ್ಲಗೆ ಹೇರಿ ಇಡೀ ನಂದಿನಿ ಪದಾರ್ಥಗಳನ್ನು ಹಳ್ಳ ಹಿಡಿಸುವುದು ಇದರ ಹಿಂದಿರುವ ಘೋರ ಷಡ್ಯಂತ್ರ.
ಆಮೇಲೆ, ನಂದಿನಿ ಉತ್ಪನ್ನಗಳು ಮಾರಾಟವಾಗುತ್ತಿಲ್ಲ ಎಂದು ಕಥೆ ಕಟ್ಟಿ, ಅದನ್ನು ಉಳಿಸುವ ನಾಟಕವಾಡಿ ನಂದಿನಿಯನ್ನು ಸಲೀಸಾಗಿ ಅಮುಲ್ ಜತೆಗೆ ವಿಲೀನ ಮಾಡುವ ಹುನ್ನಾರವಷ್ಟೇ ಇದು.
ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿದ್ದೇವೆ ಎಂದರೆ ಇಷ್ಟ ಬಂದಹಾಗೆ ಒಳ ನುಸುಳುವುದಲ್ಲ, ಸೌಮ್ಯವಾಗಿದ್ದೇವೆ ಎಂದರೆ ಸುಮ್ಮನಿದ್ದೇವೆ ಎಂದಲ್ಲ.
ನಂದಿನಿ ಕನ್ನಡಿಗರ ಸ್ವಾಭಿಮಾನವೇ ಹೊರತು ಅಮುಲ್ ಅಡಿಯಾಳಲ್ಲ. ಕರ್ನಾಟಕ ಭಾರತ ಗಣರಾಜ್ಯದ ಒಂದು ಭಾಗವೇ ಹೊರತು ಗುಜರಾತಿನ ವಸಾಹತುವಲ್ಲ.
ಈಚೆಗೆ ಪ್ರಧಾನಿ ಶ್ರೀ Narendra Modi ಹಾಗೂ ಗೃಹ ಸಚಿವ ಶ್ರೀ ಅಮಿತ್ ಶಾ ಅವರಿಬ್ಬರೂ ಕರ್ನಾಟಕಕ್ಕೆ ಬಲು ಬಿಡುವಾಗಿ ಬಂದರು ಎಂದರೆ, ಕೇವಲ ಚುನಾವಣೆ ಉದ್ದೇಶಕ್ಕೇ ಎಂದುಕೊಂಡಿದ್ದೆ.
ಆದರೆ, ಕರ್ನಾಟಕದಲ್ಲಿ ನಡೆದ ಅವರಿಬ್ಬರ ಶೋಗಳ ಸವಾರಿ ನಮ್ಮ ನಂದಿನಿಯ ಹೆಸರಿಗೇ ಕುತ್ತು ತರುತ್ತದೆ ಎಂದು ಭಾವಿಸಿರಲಿಲ್ಲ.
ಆರೂವರೆ ಕೋಟಿ ಕನ್ನಡಿಗರ ಮನೋಭಾವಕ್ಕೆ ವಿರುದ್ಧವಾಗಿ ದಹಿ ಎನ್ನುವ ಪದವನ್ನು ಮುದ್ರಿಸಿದ್ದೇ ಕೆಎಂಎಫ್ ಮಾಡಿರುವ ದೊಡ್ದ ತಪ್ಪು.
ಇದು ರಾಜ್ಯ BJP Karnataka ಸರಕಾರದ ಗಮನಕ್ಕೆ ಬಾರದೆ ಆಗಿರುವ ಕೃತ್ಯವಲ್ಲ. ಕಾಣದ ಕೈಗಳ ಕಳ್ಳಾಟ ಇಲ್ಲಿ ಸ್ಪಷ್ಟ.
ಇಲ್ಲಿ ಹಿಂಬಾಗಿಲಿನಿಂದ ಅಲ್ಲ, ನೇರವಾಗಿಯೇ ಹಿಂದಿ ಹೇರಿಕೆ ಆಗಿದೆ.
ಅದನ್ನು ಡಬಲ್ ಎಂಜಿನ್ ಬಿಜೆಪಿ ಸರಕಾರ ಹಾಗೂ ಅದರ ಕೀಲುಗೊಂಬೆ ಕೆಎಂಎಫ್ ಸದ್ದಿಲ್ಲದೆ ಒಪ್ಪಿಕೊಂಡಿವೆ.
ಇದು ಕನ್ನಡ ವಿರೋಧಿ ಕೆಲಸ. ತಕ್ಷಣವೇ ದಹಿ ಪದ ಮುದ್ರಿಸುವುದನ್ನು ನಿಲ್ಲಿಸಬೇಕು.
ಯಶವಂತಪುರದಲ್ಲಿ ಪಂಚರತ್ನ ರಥಯಾತ್ರೆ ನಡೆಯುವ ವೇಳೆ ಅಭಿಮಾನಿಗಳು, Janata Dal Secular ಪಕ್ಷದ ಕಾರ್ಯಕರ್ತರು ' ನಂದಿನಿ ಉಳಿಸಿ ' ಎಂದು ಮೊಸರು,
ಹಾಲಿನ ಹಾರ ಹಾಕಿ ನನ್ನ ಗಮನ ಸೆಳೆದಿದ್ದರು. ನಂದಿನಿಗೆ ಕುಣಿಕೆ ಬಿಗಿಯುವ ಯಾವುದೇ ದುಷ್ಕೃತ್ಯ ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಅವರು ಹೇಳಿದ್ದಾರೆ.