1. ಸುದ್ದಿಗಳು

ಶ್ರಮಜೀವಿ ಎತ್ತುಗಳಿಗೆ ಕೃತಜ್ಞತೆ ಸಲ್ಲಿಸುವ ಹಬ್ಬವೇ “ಕಾರಹುಣ್ಣಿಮೆ”..! ಏನಿದರ ವಿಶೇಷತೆ ?

Kalmesh T
Kalmesh T
ಶ್ರಮಜೀವಿ ಎತ್ತುಗಳಿಗೆ ಕೃತಜ್ಞತೆ ಸಲ್ಲಿಸುವ ಹಬ್ಬವೇ “ಕಾರಹುಣ್ಣಿಮೆ”..! ಏನಿದರ ವಿಶೇಷತೆ ?

ಕರ್ನಾಟಕದ ಹಬ್ಬಗಳಲ್ಲೇ ಅತಿ ವಿಶೇಷವಾದ ಹಬ್ಬಗಳೆಂದರೆ ಮಣ್ಣೆತ್ತಿನ ಅಮವಾಸೆ ಮತ್ತು ಕಾರಹುಣ್ಣಿಮೆ. ಏಕೆಂದರೆ ಈ ಎರಡು ಹಬ್ಬಗಳಲ್ಲಿ ರೈತರ ಮಿತ್ರ, ಜೀವನಾಡಿ ಎತ್ತುಗಳನ್ನು ಪೂಜಿಸುವ ಮೂಲಕ ವರ್ಷವಿಡಿ ಹೆಗಲಿಗೆ ಹೆಗಲು ಕೊಟ್ಟು ಅನ್ನ ನೀಡುವ ಎತ್ತು, ಹಸುಗಳಿಗೆ ಕೃತಜ್ಞತೆಯನ್ನು ಸಲ್ಲಿಸಲಾಗುತ್ತದೆ.

ಇದನ್ನೂ ಓದಿರಿ: ₹23 ಲಕ್ಷಕ್ಕೆ ಬೇಡಿಕೆ ಗಿಟ್ಟಿಸಿಕೊಂಡ ಅಪರೂಪದ ಮೇಕೆ! ಏನಿದರ ವಿಶೇಷತೆ ಗೊತ್ತೆ?

Rain Alert: ನಾಳೆಯಿಂದ ದೇಶಾದ್ಯಂತ ಹವಾಮಾನ ಬದಲಾವಣೆ, ಮಳೆ ಸಾಧ್ಯತೆ ! ಕರ್ನಾಟಕದಲ್ಲಿ ಎಲ್ಲೆಲ್ಲಿ ಹೇಗಿರಲಿದೆ ಹವಾಮಾನ?

ಕಾರ ಹುಣ್ಣಿಮೆ, ಕರುನಾಡ ರೈತರ ಮನೆ ಮನೆಯ ಹಬ್ಬ. ಕೃಷಿ ಚಟುವಟಿಕೆಯಲ್ಲಿ ತಮ್ಮ ಹೆಗಲಿಗೆ ಹೆಗಲು ಕೊಟ್ಟು ಸಾಗುವ ಎತ್ತುಗಳಿಗೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದಲೇ ಈ ಹಬ್ಬವನ್ನು ಆಚರಿಸಲಾಗುತ್ತದೆ. ಅದರಲ್ಲೂ ಉತ್ತರ ಕರ್ನಾಟಕದ ರೈತ ಕುಟುಂಬಗಳಲ್ಲಿ, ಯುಗಾದಿ, ದೀಪಾವಳಿಯಂತೆ ಇದನ್ನೂ ಕೂಡ ಒಂದು ದೊಡ್ಡ ಹಬ್ಬದಂತೆಯೇ ಸಂಭ್ರಮಿಸುತ್ತಾರೆ.

ಇನ್ನು ಮುಂಗಾರು ಬೆಳೆ ಬಿತ್ತನೆಯಾದ ಬಳಿಕ ಬರುವ ಮೊದಲ ಹಬ್ಬವೂ ಕಾರ ಹುಣ್ಣಿಮೆಯೇ ಆಗಿದೆ. ಜೇಷ್ಠ ಮಾಸದಲ್ಲಿ ಬರುವ ಕಾರ ಹುಣ್ಣಿಮೆ ರೈತರ ಸಂಭ್ರಮ ಇಮ್ಮಡಿಗೊಳಿಸುತ್ತದೆ.

ಹಬ್ಬದ ದಿನ ರೈತರು ಎತ್ತು, ಹಸುಗಳ ಕೊಂಬುಗಳಿಗೆ ಬಣ್ಣ ಹಚ್ಚಿ, ಕೊರಳಿಗೆ ಘಂಟೆ, ಹಣೆಪಟ್ಟಿ, ಬಲೂನು, ಟೇಪು, ರಿಬ್ಬನ್ನು ಬಣ್ಣದ ಪರಿಪರಿ ಮತ್ತಿತರ ಅಲಂಕಾರಿಕ ಸಾಮಗ್ರಿಗಳನ್ನು ಕಟ್ಟಿ, ಮೈಮೇಲೆ ಚಿತ್ರ ಬರೆದು, ರಂಗುರಂಗಿನ ಬಟ್ಟೆಯ (ಗಲೀಪಾ) ಹೊದಿಸಿ ಅಂದವಾಗಿ ಅಲಂಕರಿಸುತ್ತಾರೆ.

PM ಉಚಿತ ಹೊಲಿಗೆ ಯಂತ್ರ ಯೋಜನೆ; ಒಂದು ಅರ್ಜಿ ಸಲ್ಲಿಸಿ ಉಚಿತ ಹೊಲಿಗೆ ಯಂತ್ರ ಪಡೆಯಿರಿ..! ಈಗಲೇ ಅರ್ಜಿ ಸಲ್ಲಿಸಿ

ರೈತರಿಗೆ ಗುಡ್ ನ್ಯೂಸ್: ಸರ್ಕಾರಿ ಭೂಮಿಯಲ್ಲಿ ಕೃಷಿ: ಕೃಷಿ ಆಕಾಂಕ್ಷಿಗಳಿಗೆ ವರದಾನ ಈ ಯೋಜನೆ

ಜೊತೆಗೆ ತಮಗಾಗಿ ಮಾಡಿಕೊಂಡ ವಿವಿಧ, ರುಚಿಯಾದ ಸಿಹಿ ಭಕ್ಷ ಭೋಜ್ಯಗಳನ್ನು ಎತ್ತುಗಳಿಗೆ ಉಣಬಡಿಸಿ ಸಂಭ್ರಮಿಸುತ್ತಾರೆ.

ಈ ವೇಳೆ ಪುಟ್ಟ ಮಕ್ಕಳು, ತಮ್ಮಷ್ಟೇ ಪುಟ್ಟದಾಗಿರುವ ಕರುಗಳನ್ನು ತೊಳೆದು, ಸಿಂಗಾರ ಮಾಡಿ, ಊರಿನ ಓಣಿಗಳಲ್ಲಿ ಓಡಾಡಿಸುವುದೂ ಉಂಟು. ಕೆಲವು ಗ್ರಾಮಗಳಲ್ಲಿ ಕಾರ ಹುಣ್ಣಿಮೆಯ ದಿನ ಸಂಜೆ ಹೊತ್ತಿಲ್ಲಿ ಎತ್ತುಗಳನ್ನು ಊರಿನ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ಮಾಡಿ ಇಡೀ ಊರಿಗೆ ಊರೇ ಸಂಭ್ರಮದಲ್ಲಿ ಮುಳುತ್ತದೆ.

ಇದರೊಂದಿಗೆ ಎತ್ತುಗಳನ್ನು ಬೆಂಕಿಯಲ್ಲಿ ಹಾಯಿಸಿ (ಕಿಚ್ಚು ಹಾಯಿಸಿ), ಕರಿ ಹರಿಯುವ ಮೂಲಕ ಅವುಗಳ ಸಾಮರ್ಥ್ಯ ಅಳೆಯುವ ಆಚರಣೆ ಕೂಡ ಕೆಲವೆಡೆ ಜಾರಿಯಲ್ಲಿದೆ.

Published On: 14 June 2022, 12:53 PM English Summary: KARAHUNNIME - A Celebration of Thanksgiving for Livestock ox

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2023 Krishi Jagran Media Group. All Rights Reserved.