Karnataka Budget 2023 : ಭರ್ಜರಿ ಬಹುಮತದೊಂದಿಗೆ ರಾಜ್ಯ ರಾಜಕಾರಣದ ಗದ್ದುಗೆ ಏರಿದ ಕಾಂಗ್ರೆಸ್ ಇದೀಗ ತನ್ನ 14ನೇ ಬಜೆಟ್ ಮಂಡನೆ ಮಾಡಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಮಧ್ಯಾಹ್ನ 12 ಗಂಟೆಗೆ ಬಜೆಟ್ ಮಂಡನೆ ಮಾಡಲಿದ್ದು, ಸಾಕಷ್ಟು ನಿರೀಕ್ಷೆ ಹೊಂದಿರುವ ಬಜೆಟ್ ಇದಾಗಿದೆ.
Karnataka 14th budget 2023 : ನೇ ಹಣಕಾಸು ವರ್ಷದ 2ನೇ ಬಜೆಟ್ ಇದಾಗಿದ್ದು, ಕಾಂಗ್ರೆಸ್‌ನ 5 ಚುನಾವಣಾ ಪೂರ್ವ ಗ್ಯಾರಂಟಿಗಳನ್ನು ಪೂರೈಸಲು ಬೇಕಾಗುವ ಹಂಚಿಕೆಯನ್ನು ಈ ಬಜೆಟ್ ಮಂಡನೆಯಲ್ಲಿ ಘೋಷಿಸುವ ನಿರೀಕ್ಷೆ ಸಾಕಷ್ಟು ಇದೆ. ಇಂದು ಮಂಡಿಸಲಿರುವ ಬಜೆಟ್‌ನಲ್ಲಿ ಜನಪರ ಯೋಜನೆಗಳ ಹೊರತಾಗಿ ಸರ್ಕಾರ ಅಸ್ತಿತ್ವದಲ್ಲಿರುವ ಯೋಜನೆಗಳಿಗೆ ಎಷ್ಟು ಅನುದಾನ ನೀಡಲದೆ ಎನ್ನುವ ಕುರಿತಾದ ನಿರೀಕ್ಷೆ ಹೆಚ್ಚಿದೆ.
ಬಜೆಟ್ ಮಂಡನೆ ಮುನ್ನ ಸಿಎಂ ಟ್ವೀಟ್
“ನನ್ನ ಪ್ರೀತಿಯ ಕನ್ನಡಿಗ ಬಂಧುಗಳೇ, ಜನತೆಯೇ ನನ್ನ ಪಾಲಿನ ಜನಾರ್ಧನರು. ಇನ್ನು ಕೆಲವೇ ಹೊತ್ತಿನಲ್ಲಿ ನನ್ನ ಹದಿನಾಲ್ಕನೇ ಬಜೆಟ್ ಮಂಡಿಸಲಿದ್ದೇನೆ. ನನ್ನ ಮತ್ತು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ. ನನ್ನ ಹಿಂದಿನ ಎಲ್ಲ ಬಜೆಟ್ ಗಳಲ್ಲಿ ‘ಸರ್ವರಿಗೂ ಸಮಪಾಲು, ಸಮಬಾಳು’ ಎಂಬ ಮೂಲಮಂತ್ರದ ‘ಕರ್ನಾಟಕ ಮಾದರಿ’ಯ ಆಡಳಿತವನ್ನು ನೀಡುವ ಪ್ರಯತ್ನ ಮಾಡುತ್ತಾ ಬಂದಿದ್ದೆ.
ಪ್ರಸ್ತುತ ಮಂಡಿಸುತ್ತಿರುವ ಆಯವ್ಯಯ ಪತ್ರದಲ್ಲಿ ಈ ಮಾದರಿಯನ್ನು ಇನ್ನಷ್ಟು ಆಳವಾಗಿಸುವ, ವಿಸ್ತಾರವಾಗಿಸುವ ಪ್ರಯತ್ನ ಮಾಡುತ್ತೇನೆ. ರಾಜಕೀಯ ಪ್ರೇರಿತ ಟೀಕೆ-ಟಿಪ್ಪಣಿಗಳಿಗೆ ಕಿವಿಗೊಡಬೇಡಿ.
ನುಡಿದಂತೆಯೇ ನಡೆದಿದ್ದೇನೆ, ಮುಂದೆಯೂ ನಡೆಯುತ್ತೇನೆ. ನಿಮ್ಮ ನಂಬಿಕೆ-ವಿಶ್ವಾಸಗಳನ್ನು ಹುಸಿಗೊಳಿಸುವುದಿಲ್ಲ. ಇದು ನಾನು ನೀಡುವ ಅತ್ಯುನ್ನತ ಗ್ಯಾರಂಟಿ” ಎಂದು ಅವರು ಟ್ವೀಟ್ ಮಾಡಿದ್ದಾರೆ.
14ನೇ ಬಜೆಟ್ ಮಂಡನೆ ಮಾಡಲಿರುವ ಸಿಎಂ ಸಿದ್ದರಾಮಯ್ಯ
“ಕುರಿ ಲೆಕ್ಕ ಬಾರದ ಸಿದ್ದರಾಮಯ್ಯನವರಿಗೆ ಬಜೆಟ್ ಮಂಡನೆ ಸಾಧ್ಯವೇ” ಎಂದು ವ್ಯಂಗ್ಯವಾಡಿದ್ದ ವಿಪಕ್ಷ ನಾಕಯರ ಮಾತಿಗೆ ಅತ್ಯುತ್ತಮ ಬಜೆಟ್ ಮಂಡನೆಯ ಮೆಚ್ಚುಗೆ ಗಳಿಸುವ ಮೂಲಕ ತಿರುಗೇಟು ನೀಡಿದ್ದ ಸಿದ್ದರಾಮಯ್ಯನವರು ಇಂದು 14ನೇ ಬಜೆಟ್ ಮಂಡನೆ ಮಾಡಲಿದ್ದಾರೆ.
ಈಗಾಗಲೇ ಆಯವ್ಯಯ ಮಂಡನೆಯಲ್ಲಿ ತಮ್ಮ ದಾಖಲೆಯನ್ನು ಸಿಎಂ ಸಿದ್ದರಾಮಯ್ಯ ಇಂದು ಸ್ವತಃ ತಾವೇ ಮುರಿಯಲಿದ್ದು, ಮಧ್ಯಾಹ್ನ 12 ಗಂಟೆಗೆ 14ನೇ ಬಜೆಟ್‌ನ್ನು ಮಂಡಿಸಲಿದ್ದಾರೆ.
ಇಂದು ಮಂಡಿಸಲಿರುವ ಬಜೆಟ್‌ನಲ್ಲಿ ಜನಪರ ಯೋಜನೆಗಳ ಹೊರತಾಗಿ ಸರ್ಕಾರ ಅಸ್ತಿತ್ವದಲ್ಲಿರುವ ಯೋಜನೆಗಳಿಗೆ ಎಷ್ಟು ಅನುದಾನ ನೀಡಲದೆ ಎನ್ನುವ ಕುರಿತು ಸಾಕಷ್ಟು ಕುತೂಹಲಗಳು ಇವೆ. ಮೇ 2024 ರ ಲೋಕಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಇಂದಿನ ಬಜೆಟ್ ಮಂಡನೆಯಾಗುವ ಸಾಧ್ಯತೆಯಿದೆ.