1. ಸುದ್ದಿಗಳು

Karnataka Budget 2023 : ರಾಜ್ಯದ ಜನತೆಗೆ "ಅತ್ಯುನ್ನತ ಗ್ಯಾರಂಟಿʼʼ ನೀಡಿದ ಸಿಎಂ ಸಿದ್ದರಾಮಯ್ಯ

Maltesh
Maltesh
Karnataka Budget 2023 : another guarantee for people

ಸಿಎಂ ಸಿದ್ದರಾಮಯ್ಯ ಅವರು ಇಂದು  2023-24ನೇ ಸಾಲಿನ ಬಜೆಟ್ ಅನ್ನು ಮಂಡನೆ ಮಾಡಲಿದ್ದಾರೆ. ಚುನಾವಣೆ ಮುನ್ನ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಪ್ರಮುಖ ಗ್ಯಾರಂಟಿಗಳಾದ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮೀ ಸೇರಿದಂತೆ 5 ಗ್ಯಾರಂಟಿ ಕಾರ್ಯಕ್ರಮಗಳ ಜಾರಿಗೆ ಸರಕಾರ ಸಕಲ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ.

ಈ ಹಿನ್ನೆಲೆಯಲ್ಲಿ ಇಂದಿನ ಬಜೆಟ್‌ ಸಾಕಷ್ಟು ಕುತೂಹಲ ಮೂಡಿಸಿದೆ. ಕಾಗ್ರೆಸ್‌ ಸರ್ಕಾರದ ಬಗ್ಗೆ ರಾಜ್ಯದ ಜನರಲ್ಲಿ ಸಾಕಷ್ಟು ನೀರೀಕ್ಷೆ ಗರಿಗೆದರಿದ್ದರಿಂದ ಇದನ್ನು ಪೂರ್ಣಗೊಳಿಸಲು  ಸಿಎಂ ಯಾವ ರೀತಿಯ ಬಜೆಟ್‌ ಅನ್ನು ಮಂಡಿಸಲಿದ್ದಾರೆ ಎಂಬುದಕ್ಕೆ ಕ್ಷಣಗಣನೆ ಆರಂಭಗೊಂಡಿದೆ.

ಇನ್ನೊಂದು ಗ್ಯಾರಂಟಿ ನೀಡಿದ ಸಿಎಂ

ಇನ್ನು ಕೆಲವೇ ಕ್ಷಣಗಳಲ್ಲಿ ಮಂಡಿಸುವ ಬಜೆಟ್‌ ಕುಟಿತು ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು ಕನ್ನಡಿಗರಿಗೆ ಇನ್ನೊಂದು ಗ್ಯಾರಟಿ ನೀಡಿದ್ದಾರೆ. ಹೌದು ಈ ಕುರಿತು ಫೇಸ್‌ ಬುಕ್‌ನಲ್ಲಿ ಬರೆದ ಅವರು ʻʻ ನನ್ನ ಪ್ರೀತಿಯ ಕನ್ನಡಿಗ ಬಂಧುಗಳೇ, ಜನತೆಯೇ ನನ್ನ ಪಾಲಿನ ಜನಾರ್ಧನರು. ಇನ್ನು ಕೆಲವೇ ಹೊತ್ತಿನಲ್ಲಿ ನನ್ನ ಹದಿನಾಲ್ಕನೇ ಬಜೆಟ್ ಮಂಡಿಸಲಿದ್ದೇನೆ.

ನನ್ನ ಮತ್ತು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ. ನನ್ನ ಹಿಂದಿನ ಎಲ್ಲ ಬಜೆಟ್ ಗಳಲ್ಲಿ ‘ಸರ್ವರಿಗೂ ಸಮಪಾಲು, ಸಮಬಾಳು’ ಎಂಬ ಮೂಲಮಂತ್ರದ ‘ಕರ್ನಾಟಕ ಮಾದರಿ’ಯ ಆಡಳಿತವನ್ನು ನೀಡುವ ಪ್ರಯತ್ನ ಮಾಡುತ್ತಾ ಬಂದಿದ್ದೆ. ಪ್ರಸ್ತುತ ಮಂಡಿಸುತ್ತಿರುವ ಆಯವ್ಯಯ ಪತ್ರದಲ್ಲಿ ಈ ಮಾದರಿಯನ್ನು ಇನ್ನಷ್ಟು ಆಳವಾಗಿಸುವ, ವಿಸ್ತಾರವಾಗಿಸುವ ಪ್ರಯತ್ನ ಮಾಡುತ್ತೇನೆ. ರಾಜಕೀಯ ಪ್ರೇರಿತ ಟೀಕೆ-ಟಿಪ್ಪಣಿಗಳಿಗೆ ಕಿವಿಗೊಡಬೇಡಿ. ನುಡಿದಂತೆಯೇ ನಡೆದಿದ್ದೇನೆ, ಮುಂದೆಯೂ ನಡೆಯುತ್ತೇನೆ. ನಿಮ್ಮ ನಂಬಿಕೆ-ವಿಶ್ವಾಸಗಳನ್ನು ಹುಸಿಗೊಳಿಸುವುದಿಲ್ಲ. ಇದು ನಾನು ನೀಡುವ ಅತ್ಯುನ್ನತ ಗ್ಯಾರಂಟಿʼʼ ಎಂದು ಸಿಎಂ ರಾಜಗ್ಯದ ಜನತೆಗೆ ಹೇಳಿದ್ದಾರೆ.

ಚುನಾವಣೆಯಲ್ಲಿ ನೀಡಿದ ಗ್ಯಾರಂಟಿಗಳ ಈಡೇರಿಕೆಗಾಗಿ ಈ ಬಾರಿ  ರಾಜ್ಯದ ಬೊಕ್ಕಸಕ್ಕೆ ವಾರ್ಷಿಕ ಅಂದಾಜು 60,000 ಕೋಟಿ ರೂ. ಬೇಕು. ಹೀಗಾಗಿ ಈ ವರ್ಷದ ಬಜೆಟ್ ಗಾತ್ರ ಸುಮಾರು 3.35 ಲಕ್ಷ ಕೋಟಿ ಆಗಬಹುದು ಎಂದು ಅವರು ಸುಳಿವು ನೀಡಿದ್ದಾರೆ.

Published On: 07 July 2023, 12:03 PM English Summary: Karnataka Budget 2023 : another guarantee for people

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.