News

ರೇಷ್ಮೆ ಬೆಳೆಗಾರರಿಗೆ ಗುಡ್‌ನ್ಯೂಸ್‌: 75 ಕೋಟಿ ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆ ಅಭಿವೃದ್ಧಿ!

07 July, 2023 1:47 PM IST By: Kalmesh T
Karnataka Budget 2023: High-tech sericulture market development at a cost of 75 crores!

Good news for sericulture farmers:75 ಕೋಟಿ ರೂ. ವೆಚ್ಚದಲ್ಲಿ ಅತಿದೊಡ್ಡ ಹೈಟೆಕ್‌ ಮಾರುಕಟ್ಟೆಯನ್ನು ನಿರ್ಮಿಸಲಾಗುತ್ತಿದ್ದು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಸುತ್ತಮುತ್ತಲಿನ ರೈತರಿಗೆ ಅನುಕೂಲವಾಗುವಂತೆ ಶಿಡ್ಲಘಟ್ಟದಲ್ಲಿನ ಮಾರುಕಟ್ಟೆಯನ್ನು 75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆಯಾಗಿ ಅಭಿವೃದ್ಧಿಪಡಿಸಲಾಗುವುದು.

ರಾಮನಗರ ಮತ್ತು ಶಿಡ್ಲಘಟ್ಟದ ರೇಷ್ಮೆಗೂಡಿನ ಮಾರುಕಟ್ಟೆಗಳಲ್ಲಿ ಏಶಿಯಾದಲ್ಲಿಯೇ ಅತಿ ಹೆಚ್ಚಿನ ವಹಿವಾಟು ನಡೆಯುತ್ತದೆ.  ರಾಮನಗರ ಜಿಲ್ಲೆಯಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಅತಿದೊಡ್ಡ ಹೈಟೆಕ್‌ ಮಾರುಕಟ್ಟೆಯನ್ನು ನಿರ್ಮಿಸಲಾಗುತ್ತಿದ್ದು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಸುತ್ತಮುತ್ತಲಿನ ರೈತರಿಗೆ ಅನುಕೂಲವಾಗುವಂತೆ ಶಿಡ್ಲಘಟ್ಟದಲ್ಲಿನ ಮಾರುಕಟ್ಟೆಯನ್ನು 75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆಯಾಗಿ ಅಭಿವೃದ್ಧಿಪಡಿಸಲಾಗುವುದು.

ಮೈಸೂರು ಬಿತ್ತನೆ ಪ್ರದೇಶದಲ್ಲಿ ಮೂಲಭೂತ ಸೌಕರ್ಯವನ್ನು ಬಲಪಡಿಸಲಾಗುವುದು. ಇದರಿಂದ ಉತ್ತಮ ಗುಣಮಟ್ಟದ ರೋಗರಹಿತವಾದ ಮೈಸೂರು ಬಿತ್ತನೆ ಗೂಡುಗಳನ್ನು ಉತ್ಪಾದಿಸಿ, ವಾಣಿಜ್ಯ ರೇಷ್ಮೆ ಬೆಳೆಗಾರರಿಗೆ ವಿತರಿಸಲು ಮತ್ತು ಉತ್ತಮ ಗುಣಮಟ್ಟದ ಮಿಶ್ರತಳಿ ಕಚ್ಚಾ ರೇಷ್ಮೆಯನ್ನು ಉತ್ಪಾದಿಸಲು ಅನುಕೂಲವಾಗಲಿದೆ.

ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ ಸುಲಭವಾಗಿ ದುಡಿಯುವ ಬಂಡವಾಳವನ್ನು ಒದಗಿಸಲು ಮತ್ತು ರೇಷ್ಮೆಗೂಡಿನ ಖರೀದಿಯಲ್ಲಿ ಸಕ್ರಿಯವಾಗಿ ಭಾಗವಹಿಸಲು ಐದು ಲಕ್ಷ ರೂಪಾಯೊವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗುವುದು.

ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಇನ್ನಿತರೆ ಯೋಜನೆಗಳಲು 

* ಕೃಷಿ ಭಾಗ್ಯ ಯೋಜನೆಗೆ ಮನ್ರೇಗಾ ಯೋಜನೆಯಡಿಯಲ್ಲಿ ₹100 ಕೋಟಿ

* 20 ಲಕ್ಷದವರೆಗಿನ ಸಾಲಕ್ಕೆ ಶೇಕಡ 4 ರ ಬಡ್ಡಿ ದರದಲ್ಲಿ ಸಹಾಯಧನ

* ಕೃಷಿ ಉದ್ಯಮ ಉತ್ತೇಜಿಸಲು ನವೋದ್ಯಮ ಯೋಜನೆಗೆ ₹10 ಕೋಟಿ

* ನಂದಿನಿ ಮಾದರಿಯ ಏಕೀಕೃತ ಬ್ಯಾಂಡಿಂಗ್‌ಗೆ ₹10 ಕೋಟಿ

* ಕಿರು ಆಹಾರ ಸಂಸ್ಕರಣಾ ಉದ್ದಿಮೆದಾರರಿಗೆ ₹5 ಕೋಟಿ

ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಕೈಗೆತ್ತಿಕೊಂಡಿದ್ದ ಕೆ.ಸಿ. ವ್ಯಾಲಿ ಮತ್ತು ಹೆಚ್.ಎನ್. ವ್ಯಾಲಿ ಯೋಜನೆಗಳಿಂದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಏತ ನೀರಾವರಿ ಯೋಜನೆಯ ಮೂಲಕ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿ ಈ ಜಿಲ್ಲೆಗಳ ಪ್ರದೇಶಗಳಲ್ಲಿ ಅಂತರ್ಜಲ ಮಟ್ಟ ವೃದ್ಧಿಗೊಂಡು ರೈತರು ಸಂತಸಗೊಂಡಿದ್ದಾರೆ.

ಪ್ರಸ್ತುತ ಎರಡನೇ ಹಂತದಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ 296 ಕೆರೆಗಳನ್ನು ತುಂಬಿಸುವ ಯೋಜನೆಯನ್ನು 529 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು.

85. ಕೆರೆಗಳ ಸುತ್ತ ಜೀವಪರಿಸರವನ್ನು ಉಳಿಸಿಕೊಂಡು, ಅವುಗಳ ಪುನರುಜ್ಜೀವನಗೊಳಿಸುವುದಕ್ಕಾಗಿ ಕೆರೆಗಳ ಬಳಕೆದಾರರ ಸಂಘಗಳನ್ನು ಬಲಿಷ್ಠಗೊಳಿಸಿ ಕೆರೆ ಅಭಿವೃದ್ಧಿಗೆ ಪಾಲುದಾರರನ್ನಾಗಿ ಮಾಡಿ ಜಲಬಳಕೆ ಮಾಡಲು ಅರ್ಥಪೂರ್ಣ ಕ್ರಿಯಾಯೋಜನೆ ಸಿದ್ಧಪಡಿಸಲಾಗುವುದು.