News

Karnataka CM ಮೊತ್ತೊಮ್ಮೆ ಸಿದ್ದರಾಮಯ್ಯ ದರ್ಬಾರ್‌; ಎರಡನೇ ಬಾರಿ ಸಿ.ಎಂ

17 May, 2023 12:36 PM IST By: Hitesh
Karnataka CM Sumomme Siddaramaiah Darbar; Second time CM?!

ರಾಜ್ಯದ (Karnataka CM) ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaiah) ಅವರು ಆಯ್ಕೆಯಾಗಿದ್ದಾರೆ.

ಈ ಮೂಲಕ ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (siddaramaiah) ಅವರು ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ.

ಕರ್ನಾಟಕದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರವು ಪೂರ್ಣ ಬಹುಮತ ಪಡೆದಿದೆ.

ಕರ್ನಾಟಕ ವಿಧಾನಸಭೆಯ ಮ್ಯಾಜಿಕ್‌ ನಂಬರ್‌ 113 ಆಗಿದೆ. ಆದರೆ, ಕಾಂಗ್ರೆಸ್‌ ಸರ್ಕಾರವು ಪೂರ್ಣ ಬಹುಮತವನ್ನೂ

ಪಡೆಯುವುದರ ಜೊತೆಗೆ  ಇದೇ ಮೊದಲ ಬಾರಿ ಕರ್ನಾಟಕದಲ್ಲಿ ಅತ್ಯಂತ ಹೆಚ್ಚು ಸ್ಥಾನಗಳನ್ನು ಪಡೆದ ಪಕ್ಷವಾಗಿ ಹೊರಹೊಮ್ಮಿತ್ತು. 

ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರವು ಈ ಹಿಂದೆ ಎಂದೂ ಪಡೆಯದಷ್ಟು ಪ್ರಮಾಣದಲ್ಲಿ ಸ್ಥಾನಗಳನ್ನು ಗಳಿಸಿದೆ.

ಈ ಬಾರಿ ಕಾಂಗ್ರೆಸ್‌ ಪಕ್ಷಕ್ಕೆ 135 ಸ್ಥಾನಗಳು ಸಿಕ್ಕಿವೆ.

ಕೆಪಿಸಿಸಿ (Kpcc) ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ (Siddaramaiah) ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಅವರ ನಡುವೆ ಭಾರೀ ಪೈಪೋಟಿ ನಡೆದಿತ್ತು.

ರಾಜ್ಯದಲ್ಲಿ ಮೇ 10ಕ್ಕೆ ಕರ್ನಾಟಕ ಸಾರ್ವತ್ರಿಕ ಚುನಾವಣೆ ನಡೆದಿದ್ದು, ಮೇ 13ಕ್ಕೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದರೂ,

ಕಳೆದ ಐದು ದಿನಗಳಿಂದ ಮುಖ್ಯಮಂತ್ರಿ ಆಯ್ಕೆಯ ಕಸರತ್ತು ಜೋರಾಗಿತ್ತು.

ಕಳೆದ ಐದು ದಿನಗಳಿಂದಲೂ ಕರ್ನಾಟಕದ ಮುಖ್ಯಮಂತ್ರಿ ಅವರ ಆಯ್ಕೆಯ ಬಗ್ಗೆ ತೀವ್ರವಾದ ಚರ್ಚೆ ಮತ್ತು ಕಸರತ್ತುಗಳು ನಡೆದಿತ್ತು. 

Karnataka CM Sumomme Siddaramaiah Darbar; Second time CM?!

ಸರಣಿ ಸಭೆಗಳಿಗೆ ಸಾಕ್ಷಿಯಾಗಿದ್ದ ಖರ್ಗೆ ಮನೆ!

ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನವದೆಹಲಿಯ ಮನೆಯಲ್ಲಿ ಕಳೆದ ಐದು

ದಿನಗಳಿಂದಲೂ ರಾಜ್ಯದ ಮುಖ್ಯಮಂತ್ರಿ ಅವರ ಆಯ್ಕೆಗೆ ಸಂಬಂಧಿಸಿದಂತೆ ಕಸರತ್ತುಗಳು ನಡೆದಿತ್ತು.

ಕೆಪಿಸಿಸಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವೆ ತೀವ್ರವಾದ ಪೈಪೋಟಿ ನಡೆದಿತ್ತು.

ಹೀಗಾಗಿ, ಮಲ್ಲಿಕಾರ್ಜುನ ಖರ್ಗೆ ಅವರ ಮನೆಯಲ್ಲಿ ಸರಣಿ ಸಭೆಗಳು ನಡೆದಿದ್ದವು.

ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡುವುದು ಹೈಕಮಾಂಡ್‌ ಮತ್ತು ಹಿರಿಯ ನಾಯಕರಿಗೆ ಸವಾಲಾಗಿ ಪರಿಣಮಿಸಿತ್ತು.

ಕೊನೆಗೂ ಅಂತಿಮವಾಗಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಆಯ್ಕೆಯಾಗಿದ್ದಾರೆ. 

ಅಭಿಮಾನಿಗಳ ಸಂಭ್ರಮಾಚರಣೆ

ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಆಯ್ಕೆಯಾಗಲಿದ್ದಾರೆ ಎನ್ನುವುದು

ಖಚಿತವಾಗುತ್ತಿದ್ದಂತೆಯೇ ರಾಜ್ಯದ ವಿವಿಧ ಭಾಗದಲ್ಲಿ ಸಿದ್ದರಾಮಯ್ಯ ಅವರ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿಸಿಕೊಂಡರು.

ಸಿದ್ದರಾಮಯ್ಯ ಅವರು ಸಿ.ಎಂ ಆಯ್ಕೆಯಾಗಲಿದ್ದಾರೆ ಎನ್ನುವುದು ಖಚಿತವಾಗುತ್ತಿದ್ದಂತೆಯೇ

ಬೆಂಗಳೂರಿನ ಅವರ ಸರ್ಕಾರಿ ಕಚೇರಿಯ ಮುಂದೆ ಜಮಾಯಿಸಿದ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಸಿದ್ದರಾಮಯ್ಯ ನೆಕ್ಸ್ಟ್‌ ಸಿಎಂ ಬಹುತೇಕ ಕನ್ಫರ್ಮ್‌! ಘೋಷಣೆಯೊಂದೇ ಬಾಕಿ