1. ಸುದ್ದಿಗಳು

Karnataka Election 2023 ಜನಪ್ರತಿನಿಧಿಗಳ ಭಾವಚಿತ್ರ ತೆರವಿಗೆ ಸಿದ್ಧತೆ!

Hitesh
Hitesh
Karnataka Election 2023 Preparing to clear the portraits of the people's representatives!

ಕರ್ನಾಟಕದಕಲ್ಲಿ ಮೇ 10ಕ್ಕೆ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದ್ದು, ಇದಕ್ಕೆ ಭರದ ಸಿದ್ಧತೆ ಪ್ರಾರಂಭವಾಗಿದೆ. 

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಜನಪ್ರತಿನಿಧಿಳ ಹೆಸರು, ಭಾವಚಿತ್ರಗಳನ್ನು ತೆಗೆಯಲು ಸೂಚನೆ ನೀಡಲಾಗಿದೆ.  

ಸಾರ್ವತ್ರಿಕ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದು, ಸರ್ಕಾರಿ ಕಚೇರಿ, ಸರ್ಕಾರಿ ಆಸ್ತಿಗಳು ಸೇರಿದಂತೆ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ಜನಪ್ರತಿನಿಧಿಗಳ

ಹೆಸರು ಹಾಗೂ ಭಾವಚಿತ್ರಗಳನ್ನು ತೆಗೆಯಲು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  

ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆ ವಲಯ ಜಂಟಿ ಆಯುಕ್ತರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಜೊತೆ ನಡೆಸಿದ

ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರಿ ಕಚೇರಿ, ಸರ್ಕಾರಿ ಆಸ್ತಿಗಳು ಸೇರಿದಂತೆ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಫ್ಲೆಕ್ಸ್, ಪೋಸ್ಟರ್, ಬ್ಯಾನರ್, ಬಿತ್ತಿಪತ್ರಗಳು, ಗೋಡೆ ಬರಹಗಳು ಇರುವಂತಿಲ್ಲ.

ಯಾರಾದರು ಪೋಸ್ಟರ್, ಬ್ಯಾನರ್ ಹಾಕಿದರೆ ಸಂಬಂಧಪಟ್ಟವರಿಗೆ ಕೇಸ್ ಬುಕ್ ಮಾಡಿ ಎಂದು ಸೂಚನೆ ನೀಡಿದರು.

ಪಾಲಿಕೆಯ ಆಯಾ ವಲಯ ವ್ಯಾಪ್ತಿಯಲ್ಲಿ ಯಾವುದಾದರು ಕಾರ್ಯಕ್ರಮ ಆಯೋಜಿಸಿದ್ದಲ್ಲಿ ತತ್‌ಕ್ಷಣ ಅದನ್ನು ರದ್ದುಪಡಿಸಬೇಕು.

ಚುನಾವಣೆ ಮುಗಿಯುವವರೆಗೆ ಯಾವುದೇ ಕಾರ್ಯಕ್ರಮ ಆಯೋಜಿಸುವಂತಿಲ್ಲ.

ಶುದ್ಧ ಕುಡಿಯುವ ನೀರಿನ ಘಟಕ, ಉದ್ಯಾನವನ ಸೇರಿದಂತೆ ಇನ್ನಿತರೆ ಸ್ಥಳಗಳಲ್ಲಿ ಅಳವಡಿಸಿರುವ ನಾಮಫಲಕಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರಗಳು ಇರುವಂತಿಲ್ಲ.

ಇದ್ದರೆ ಕೂಡಲೇ ಅದನ್ನು ತೆಗೆಯುವುದು ಅಥವಾ ಬಟ್ಟೆಯ ಮೂಲಕ ಕಾಣದಂತೆ ಮುಚ್ಚಬೇಕೆಂದು ಸೂಚನೆ ನೀಡಿದರು.

ರಸ್ತೆ ಬದಿಯಿರುವ ನಾಮಫಲಕಗಳಲ್ಲಿರುವ ಜನಪ್ರತಿನಿಧಿಗಳ ಹೆಸರುಗಳನ್ನು ತೆಗೆಯಬೇಕು.

ಎಲ್ಲೂ ಜನಪ್ರತಿನಿಧಿಗಳ ಹೆಸರಾಗಲಿ, ಸಂಪರ್ಕ ಸಂಖ್ಯೆಯಾಗಲಿ ಇರುವಂತಿಲ್ಲ ಎಂದು ತಿಳಿಸಿದರು.

Karnataka Election 2023 Preparing to clear the portraits of the people's representatives!

ಪ್ರಗತಿಯಲ್ಲಿ ಕಾಮಗಾರಿಗಳ ಪಟ್ಟಿ ನೀಡಲು ಸೂಚನೆ

ಈಗಾಗಲೇ ಬೆಂಗಳೂರಿನಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳ ವಿವರ ನೀಡುವಂತೆ ಮುಖ್ಯ ಆಯುಕ್ತರು ನಿರ್ದೇಶನ ನೀಡಿದ್ದಾರೆ.  

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ 8 ವಲಯಗಳ ವ್ಯಾಪ್ತಿಯಲ್ಲಿ ಯೋಜನಾ ವಿಭಾಗ, ಕೆರೆಗಳ ವಿಭಾಗ,

ರಾಜಕಾಲುವೆ ವಿಭಾಗ ಸೇರಿದಂತೆ ಇನ್ನಿತರೆ ವಿಭಾಗಗಳಿಗೆ ಸಂಬಂಧಿಸಿದಂತೆ ಪ್ರಗತಿಯಲ್ಲಿರುವ ಕಾಮಗಾರಿಗಳ ಪಟ್ಟಿಯನ್ನು ಕೂಡಲೇ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನು ಈಗಾಗಲೇ ಕಾರ್ಯಾದೇಶ ನೀಡಿ ಕೆಲಸ ಪ್ರಾರಂಭಿಸಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಹೊರತುಪಡಿಸಿ,

ಬೇರೆ ಯಾವುದೇ ಹೊಸ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬಾರದು. ಹೊಸದಾಗಿ ಟೆಂಡರ್ ಕರೆಯುವುದಾಗಲಿ, ಹೊಸದಾಗಿ ಕಾರ್ಯಾದೇಶ ನೀಡುವುದಾಗಲಿ ಮಾಡುವಂತಿಲ್ಲ.

ಚುನಾವಣಾ ನೀತಿ ಸಂಹಿತೆ ನಿಯಮ ಉಲ್ಲಂಘಿಸುವುದು ಕಂಡಬಂದರೆ ಚುನಾವಣಾ ಆಯೋಗದಿಂದ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಸಭೆಯಲ್ಲಿ ವಿಶೇಷ ಆಯುಕ್ತ ಉಜ್ವಲ್ ಕುಮಾರ್ ಘೋಷ್, ಜಯರಾಮ ರಾಯಪುರ, ಎಲ್ಲಾ ಜಂಟಿ ಆಯುಕ್ತರು, ಮುಖ್ಯ ಅಭಿಯಂತರರು, ಕಾರ್ಯಫಾಲಕ ಅಭಿಯಂತರರು ಹಾಗೂ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು. 

ಇದನ್ನೂ ಓದಿರಿ:  Dahi controversy in South ನಂದಿನಿ ಉತ್ಪನ್ನ ನಮ್ಮದು ಎಂದ ಕನ್ನಡಿಗರು, ದಹಿನಹಿ ಪೋಡಾ ಎಂದ ತಮಿಳಿಗರು!

Dahi controversy ನಂದಿನಿ ಉತ್ಪನ್ನದ ಮೇಲೆ ದಹಿ ಪದ ಬಳಕೆ ಏನಿದು ವಿವಾದ?

ನಂದಿನಿ ಉತ್ಪನ್ನದ ಮೇಲೆ ಹಿಂದಿ ಹೆಸರು, ಸಾಮಾಜಿಕ ಮಾಧ್ಯಮದಲ್ಲಿ ವಿರೋಧ

Published On: 30 March 2023, 03:32 PM English Summary: Karnataka Election 2023 Preparing to clear the portraits of the people's representatives!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.