News

ಮತಬೇಟೆಗೆ ಸಜ್ಜಾದ ಹೆಬ್ಬುಲಿ..ಕಿಚ್ಚ ಎಲ್ಲೆಲ್ಲಿ ಕ್ಯಾಂಪೇನ್‌ ಮಾಡ್ತಾರೆ ಗೊತ್ತಾ..?

26 April, 2023 10:38 AM IST By: Maltesh
Karnataka Election Do you know where Kichcha is campaigning..?

ಕರ್ನಾಟಕ ವಿಧಾನಸಭೆ ಚುನಾವಣೆಗಾಗಿ ವಿವಿಧ ರಾಜಕೀಯ ಪಕ್ಷಗಳ ನಾಯಕರಿಂದ ಪ್ರಚಾರ ಬಿರುಸುಗೊಂಡಿದೆ. ಯಾದಗಿರಿಯಲ್ಲಿ ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಜೆಪಿ ಅಭ್ಯರ್ಥಿಗಳ ಪರವಾಗಿ ರೋಡ್ ಶೋ ನಡೆಸಿದರು. ಇದಕ್ಕೂ ಮುನ್ನ ಅವರು, ಬಾಗಲಕೋಟೆ ಜಿಲ್ಲೆಯ ತೇರದಾಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚಿಸಿದರು. ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಕೇಂದ್ರ ಸಚಿವ ಕಿಶನ್ ಪಾಲ್ ಗುರ್ಜರ್, ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿವಿಧ ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ರೋಡ್ ಶೋ ಮೂಲಕ ಮತ ಯಾಚಿಸಿದರು.

ಕೇಂದ್ರದ 98 ಹಾಗೂ ರಾಜ್ಯದ 150 ಪ್ರಮುಖ ನಾಯಕರು ಇಂದು ಮತ್ತು ನಾಳೆ ಪ್ರಚಾರದಲ್ಲಿ ಬಿಜೆಪಿ ಮುಖಂಡರು ಭಾಗಿಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಇದೇ ೨೮ರ ನಂತರ ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ವಿವಿಧ ಜಿಲ್ಲೆಗಳಲ್ಲಿ ಮತಯಾಚನೆ ಮಾಡಲಿದ್ದಾರೆ ಎಂದು ಅವರು ಹೇಳಿದರು. ಇದೇ 27 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯದ 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ವರ್ಚುವಲ್ ಮಾದರಿಯಲ್ಲಿ ನೇರ ಸಂವಾದ ನಡೆಸಲಿದ್ದಾರೆ ಎಂದು ರಾಜ್ಯ ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬೆಂಗಳೂರಿನಲ್ಲಿ ತಿಳಿಸಿದ್ದಾರೆ.

ಸ್ಮಾರ್ಟ್‌ ಫೋನ್‌  ಕಳೆದುಹೋದ್ರೆ ತಕ್ಷಣ ಈ ಕೆಲಸ ಮಾಡಿ ಸಾಕು!

ಇಂದು ಮಂಡ್ಯ ಜಿಲ್ಲೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಪಕ್ಷದ ಪರವಾಗಿ ಪ್ರಚಾರ ಮಾಡಲಿದ್ದಾರೆ. ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ರಾಜನಾಥ್ ಸಿಂಗ್ ನಾಳೆ ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದರು. ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು ಪಕ್ಷದ ಅಭ್ಯರ್ಥಿಗಳ ಪರ ಮತಯಾಚಿಸಿದರು. ಜೆಡಿಎಸ್ ವರಿಷ್ಠ ನಾಯಕರಾದ ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ. ಕುಮಾರಸ್ವಾಮಿ, ಮೈಸೂರು ಜಿಲ್ಲೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಮತಯಾಚಿಸಿದರು.

ಜಿದ್ದಾಜಿದ್ದಿನ ಕಣಕ್ಕೆ ಕೋಟಿಗೊಬ್ಬ ಎಂಟ್ರಿ

ಯೆಸ್‌ ಸ್ಯಾಂಡಲ್‌ವುಡ್‌ ಸ್ಟಾರ್‌ ನಟ ಕಿಚ್ಚ ಸುದೀಪ್‌ ಅವರು ಕೂಡ ಇದೀಗ ಜಿದ್ದಾಜಿದ್ದಿನ ಕಣಕ್ಕೆ ಎಂಟ್ರಿ ಕೊಡಲಿದ್ದಾರೆ. ಇತ್ತೀಚಿಗೆ ಸಿಎಂ ಬಸವರಾಜ್‌ ಬೊಮ್ಮಾಯಿ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದ ಕಿಚ್ಚ ಇಂದಿನಿಂದ ಮತ್ತೇ ಬಿಜೆಪಿ ಅಭ್ಯರ್ಥಿಗಳ ಪರ ಮತ ಬೇಟೆಗೆ ಇಳಿಯಲಿದ್ದಾರೆ. ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ಎಲ್ಲಿ ಹೇಳುತ್ತಾರೋ, ಯಾವ ಅಭ್ಯರ್ಥಿಯ ಪರ ಹೇಳುತ್ತಾರೋ ಅವರ ಪರ ಪ್ರಚಾರ ಮಾಡುತ್ತೇನೆ ಎಂದು ಕಿಚ್ಚ ಹೇಳಿದ್ದರು. ಇದೀಗ ಕೊಟ್ಟ ಮಾತಿನಂತೆ ಸುದೀಪ್‌ ಹಲವು ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವುದಾಗಿ ತಿಳಿಸಿದ್ದಾರೆ. ಹಾಗಾದ್ರೆ ಹೆಬ್ಬುಲಿ ಎಲ್ಲೆಲ್ಲಿ ಮತ ಬೇಟೆಗೆ ಇಳಿಯುತ್ತೆ ಎಂಬುದನ್ನು ನೋಡುವುದಾದರೆ..

ಸಂಡೂರು: ಹೌದು ಸಂಡೂರಿನಲ್ಲಿ ಬಿಜೆಪಿ ಅಭ್ಯರ್ಥಿ ಶಿಲ್ಪಾ ರಾಘವೇಂದ್ರ ಅವರ ಪರ ಸುದೀಪ್‌ ಕ್ಯಾಂಪೇನ್‌ ಮಾಡಲಿದ್ದಾರೆ.

ಜಗಳೂರು ಅಭ್ಯರ್ಥಿ S ರಾಮಚಂದ್ರ ಪರ ಪ್ರಚಾರ. ದಾವಣಗೆರೆ ಲೋಕಿಕೆರೆ ನಾಗರಾಜ್‌, ಮಾಯಕೊಂಡದಲ್ಲಿ  M ಬಸವರಾಜ್‌ ಪರ ಅಭಿನಯ ಚಕ್ರವರ್ತಿ ಪ್ರಚಾರದ ರಣಕಃಳೆ ಮೊಳಗಿಸಲಿದ್ದಾರೆ.

ಕರ್ನಾಟಕ ವಿಧಾನಸಭೆಗೆ ಮುಂದಿನ ತಿಂಗಳ 10 ರಂದು ನಡೆಯಲಿರುವ ಚುನಾವಣೆಯಲ್ಲಿ ಅಂತಿಮವಾಗಿ ಕಣದಲ್ಲಿ 2616 ಅಭ್ಯರ್ಥಿಗಳಿದ್ದಾರೆ.   ಬಿಜೆಪಿಯಿಂದ 224 ಅಭ್ಯರ್ಥಿಗಳು, ಕಾಂಗ್ರೆಸ್ - 223, ಜೆಡಿಎಸ್-207,  ಎಎಪಿ-209, ಬಿಎಸ್‌ಪಿ-133, ಸಿಪಿಐಎಂ-4, ಜೆಡಿಯು-8, ಎನ್‌ಪಿಪಿ ಯಿಂದ ಇಬ್ಬರು, ನೋಂದಾಯಿತ ರಾಜಕೀಯ ಪಕ್ಷಗಳ - 685 ಅಭ್ಯರ್ಥಿಗಳು ಹಾಗೂ ಪಕ್ಷೇತರಾಗಿ-918 ಅಭ್ಯರ್ಥಿಗಳು ಸೇರಿದಂತೆ ಅಂತಿಮ ಕಣದಲ್ಲಿ 2613 ಅಭ್ಯರ್ಥಿಗಳಿದ್ದಾರೆ. ಇವರ ಪೈಕಿ 2427 ಪುರುಷ, 184 ಮಹಿಳೆಯರು ಹಾಗೂ ಇತರೆ ಇಬ್ಬರು ಅಭ್ಯರ್ಥಿಗಳಿದ್ದಾರೆ ಎಂದು ಆಯೋಗದ ಮೂಲಗಳು ತಿಳಿಸಿವೆ.

PM Kisan: ಪಿಎಂ ಕಿಸಾನ್ 14 ನೇ ಕಂತಿನ ಮಹತ್ವದ ಅಪ್‌ಡೇಟ್‌..14 ಕೋಟಿ ರೈತರಲ್ಲಿ ಹೊಸ ನೀರಿಕ್ಷೆ!

ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು 24 ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದಾರೆ. ಯಮಕನ ಮರಡಿ, ದೇವದುರ್ಗ, ತೀರ್ಥಹಳ್ಳಿ, ಕುಂದಾಪುರ, ಕಾಪು, ಮಂಗಳೂರು, ಭಂಟ್ವಾಳ ಮತಕ್ಷೇತ್ರಗಳಲ್ಲಿ ಅತಿ ಕಡಿಮೆ ಐವರು  ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದಿಂದ ಬಿಜೆಪಿ ಹಿರಿಯ ಮುಖಂಡ ಬಸವರಾಜ ಬೊಮ್ಮಾಯಿ, ಮೈಸೂರು ಜಿಲ್ಲೆಯ ವರುಣ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಕನಕಪುರ ಕ್ಷೇತ್ರದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಚನ್ನಪಟ್ಟಣದಿಂದ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ, ಸ್ಪರ್ಧೆಗಿಳಿದಿರುವ ಅಭ್ಯರ್ಥಿಗಳಲ್ಲಿ ಪ್ರಮುಖರು. ಉಮೇದುವಾರಿಕೆ ಹಿಂಪಡೆಯುವ ಪ್ರಕ್ರಿಯೆ ನಿನ್ನೆ ಮುಗಿದಿದ್ದು,  ಕೊನೆಯ ದಿನ- 517 ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ.

Image Cource @ pixels and facebook.com/kichchasudeepa