2024ರ ಲೋಕಸಭಾ ಚುನಾವಣೆಗೆ ಮುನ್ನುಡಿ ಎಂದೇ ಪರಿಗಣಿಸಲಾಗಿರುವ ಕರ್ನಾಟಕ ಸಾರ್ವತ್ರಿಕ ಚುನಾವಣೆಯ ದಿನಾಂಕವನ್ನು ಬುಧವಾರ ಚುನಾವಣಾ ಆಯೋಗವು ಪ್ರಕಟಿಸಿದೆ.
ರಾಜ್ಯದಲ್ಲಿ ಮೇ 10ಕ್ಕೆ ಚುನಾವಣೆ ನಡೆಯಲಿದೆ. ಒಂದೇ ಹಂತದಲ್ಲಿ ಕರ್ನಾಟಕ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗವು ಹೇಳಿದೆ.
ಮೇ 13ಕ್ಕೆ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ಭಾರತದ ಈಶಾನ್ಯ ರಾಜ್ಯಗಳಲ್ಲಿ ಚುನಾವಣೆಯನ್ನು ಈಗಾಗಲೇ ಯಶಸ್ವಿಯಾಗಿ ಪೂರೈಸಲಾಗಿದೆ.
ಇದೀಗ ಕರ್ನಾಟಕದಲ್ಲಿ ಚುನಾವಣೆಯನ್ನು ಘೋಷಣೆ ಮಾಡಲಾಗುತ್ತಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಕರ್ನಾಟಕ ವಿಧಾನಸಭೆಯು 224 ಸದಸ್ಯರ ಸಂಖ್ಯಾಬಲವನ್ನು ಹೊಂದಿದೆ.
ಮೇ 23ರ ಒಳಗೆ ಕರ್ನಾಟಕ ವಿಧಾನಸಭೆ ಚುನಾವಣೆ ಅಂತ್ಯವಾಗಬೇಕಿದೆ.
Karnataka Election ಕರ್ನಾಟಕ ಸಾರ್ವತ್ರಿಕ ಚುನಾವಣೆ: ದಿನಾಂಕ ಘೋಷಣೆಗೆ ಕ್ಷಣಗಣನೆ!
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜೀವ್ ಕುಮಾರ್ ಅವರು, ಇತ್ತೀಚಿನ ದಿನಗಳಲ್ಲಿ ಚುನಾವಣೆಯನ್ನು ಭಾರತೀಯ ಚುನಾವಣಾ ಆಯೋಗವು ನೀತಿ ಸಹಿಂತೆಯನ್ನು ಕಟ್ಟು ನಿಟ್ಟಾಗಿ ಜಾರಿ ಮಾಡುತ್ತಿದೆ.
ಸುಗಮ ಮತದಾನಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು,
ದೇಶದಲ್ಲಿ ಸುಗಮ ಚುನಾವಣೆಯನ್ನು ನಡೆಸುತ್ತಿದೆ ಎಂದು ಚುನಾವಣಾ ಆಯೋಗವು ಹೇಳಿದೆ.
ಈ ಬಾರಿಯ ಕರ್ನಾಟಕ ಚುನಾವಣೆಯನ್ನು ಕರ್ನಾಟಕದ ಜನತೆಯಷ್ಟೇ ಅಲ್ಲ ಇಡೀ ಭಾರತವೇ ಎದುರು ನೋಡುತ್ತಿದೆ.
ಇನ್ನೊಂದು ವರ್ಷದಲ್ಲಿ ಅಂದರೆ 2024ರಲ್ಲಿ ಲೋಕಸಭಾ ಚುನಾವಣೆಯು ನಡೆಯಲಿದ್ದು, ಲೋಕಸಭೆ ಚುನಾವಣೆಯ ದೃಷ್ಟಿಯಿಂದ ಈ ಬಾರಿಯ ರಾಜ್ಯ ಚುನಾವಣೆಯು ಅಂತ್ಯಂತ ಮಹತ್ವವನ್ನು ಪಡೆದುಕೊಂಡಿದೆ.
ರಾಜ್ಯದಲ್ಲಿಯೂ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳಿಗೆ ಈ ಚುನಾವಣೆ ಮಹತ್ವದ್ದಾಗಿದೆ.
ಹೀಗಾಗಿ, ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳು ಜಿದ್ದಾಜಿದ್ದಿನ ಮೇಲೆ ಚುನಾವಣೆಗೆ ತಯಾರಿ ನಡೆಸುತ್ತಿದೆ.
ಸಿ.ಎಂ ಕಾರ್ಯಕ್ರಮ ದಿಢೀರ್ ರದ್ದು
ಬುಧವಾರ ಚುನಾವಣೆ ಘೋಷಣೆಗೆ ಕೆಲವೇ ಕ್ಷಣಗಳು ಇದ್ದಂತೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ವಿವಿಧ ಜಿಲ್ಲೆಗಳಲ್ಲಿ ಹಮ್ಮಿಕೊಂಡಿದ್ದ ಚುನಾವಣೆಯನ್ನು ಮುಂದೂಡಲಾಯಿತು.
ಚುನಾವಣಾ ದಿನಾಂಕ ಘೋಷಣೆ ಆಗುವ ಸಾಧ್ಯತೆ ಇದೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೆರವೇರಿಸಬೇಕಾಗಿದ್ದ ವಿವಿಧ ಕಾರ್ಯಕ್ರಮಗಳನ್ನು ಮುಂದೂಡಲಾಯಿತು.
ಚುನಾವಣೆ ಘೋಷಣೆಯಾದರೆ ನೀತಿಸಂಹಿತೆ ಜಾರಿ ಆಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕಾರ್ಯುಕ್ರಮ ಮುಂದೂಡಲಾಗಿದೆ ಎಂದು ಹೇಳಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಬುಧವಾರ ಕೊಳ್ಳಲಾಗಿದ್ದ, ಕೊಪ್ಪಳ್ಳ, ಹಾವೇರಿ ಹಾಗೂ ಧಾರವಾಡ ಜಿಲ್ಲೆಗಳ ಪ್ರವಾಸ ಕಾರ್ಯಕ್ರಮವನ್ನು
ಅನಿವಾರ್ಯ ಕಾರಣಗಳಿಂದ ರದ್ದು ಪಡಿಸಿರುವುದಾಗಿ ಪ್ರಕಟಣೆ ಹೊರಡಿಸಲಾಗಿದ್ದು, ಮುಖ್ಯಮಂತ್ರಿ ಅವರು ಈ ಸ್ಥಳಗಳನ್ನು ತಲುಪುವ ವೇಳೆಗೆ ಚುನಾವಣೆ ಘೋಷಣೆ ಆಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
2024ರ ಲೋಕಸಭಾ ಚುನಾಚಣೆ ಹಿನ್ನೆಲೆಯಲ್ಲಿ ಈ ಬಾರಿ ಚುನಾವಣೆಯು ಮಹತ್ವವನ್ನು ಪಡೆದುಕೊಂಡಿದೆ.
ಈ ಬಾರಿಯ ಕರ್ನಾಟಕದ ಚುನಾವಣೆಯು ದೇಶದ ಮುಂದಿನ ಲೋಕಸಭಾ ಚುನಾವಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದೇ ರಾಜಕೀಯ ತಜ್ಞರು ಅಂದಾಜಿಸಿದ್ದಾರೆ.
ರಾಜ್ಯದಲ್ಲಿ ಆಡಳಿತದಲ್ಲಿರುವ ಬಿಜೆಪಿಯೂ ನಾಯಕತ್ವದ ಸವಾಲು ಸೇರಿದಂತೆ ಹಲವು ಸವಾಲುಗಳನ್ನು ಎದುರಿಸುತ್ತಿದೆ.
ಕಾಂಗ್ರೆಸ್‌ನ ಪ್ರಮುಖ ನಾಯಕರಾದ ರಾಹುಲ್ ಗಾಂಧಿ ಅವರು ಸಹ ಕಾನೂನು ಹೋರಾಟದಲ್ಲಿ ಇದ್ದಾರೆ.
ಒಟ್ಟಾರೆ ಎರಡೂ ರಾಷ್ಟ್ರೀಯ ಪಕ್ಷಗಳು ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಗೆಲ್ಲಲೇ ಬೇಕು ಎನ್ನುವ ಪರಿಸ್ಥಿತಿಯ ಎದುರಾಗಿದೆ.
ಇತ್ತ ಕರ್ನಾಟಕದ ಪ್ರಬಲ ಪ್ರಾದೇಶಿಕ ಪಕ್ಷವಾಗಿರುವ ಜೆಡಿಎಸ್‌ಗೂ ಇದು ಸವಾಲಿನ ಚುನಾವಣೆಯಾಗಿದೆ.
ಜೆಡಿಎಸ್ ವರಿಷ್ಠರಾದ ದೇವೇಗೌಡ ಅವರು ಅನಾರೋಗ್ಯದ ನಡುವೆಯೂ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.
ಮೀಸಲಾತಿ, ಭ್ರಷ್ಟಾಚಾರ, ಕೋಮುವಾದ ಸೇರಿದಂತೆ ಹಲವು ವಿಷಯಗಳು ಈ ಬಾರಿಯ ಚುನಾವಣೆಯ ಮೇಲೆ ಗಂಭೀರವಾದ ಪರಿಣಾಮವನ್ನು ಬೀರುವ ಸಾಧ್ಯತೆ ಇದೆ.