1. ಸುದ್ದಿಗಳು

Karnataka Election ಮನೆಯಿಂದಲೇ ಮತ ಚಲಾಯಿಸಬಹುದು, ಯಾರಿಗೆ ಅನ್ವಯಿಸುತ್ತೆ ಇಲ್ಲಿದೆ ಮಾಹಿತಿ!

Hitesh
Hitesh
Karnataka Election You can vote from home, here is the information for whom it applies!

ಕರ್ನಾಟಕ ಸಾರ್ವತ್ರಿಕ ಚುನಾವಣೆ -2023ರ ದಿನಾಂಕ ಘೋಷಣೆಯಾಗಿದ್ದು, ಈ ಬಾರಿ ಚುನಾವಣೆ ಹಲವು ಕಾರಣಗಳಿಂದ ಮಹತ್ವವನ್ನು ಪಡೆದುಕೊಂಡಿದೆ.

ಮೇ 10ಕ್ಕೆ ಚುನಾವಣೆ ನಡೆಯಲಿದ್ದು, ಮೇ 13ಕ್ಕೆ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.  

ಕರ್ನಾಟಕ ಸಾರ್ವತ್ರಿಕ ಚುನಾವಣೆ – 2023ರ ದಿನಾಂಕ ಘೋಷಣೆ ಹಾಗೂ ರೂಪುರೇಷಗಳನ್ನು

ತಿಳಿಸುವ ಉದ್ದೇಶದಿಂದ ಚುನಾವಣಾ ಆಯೋಗವು ಬುಧವಾರ ಪತ್ರಿಕಾಗೋಷ್ಠಿಯನ್ನು ಕರೆದಿತ್ತು.

ಕೇಂದ್ರ ಚುನಾವಣಾ ಆಯೋಗದ ಆಯುಕ್ತ ರಾಜೀವ್ ಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಮೇ.10ಕ್ಕೆ ಚುನಾವಣೆ ನಡೆಯಲಿದ್ದು, ಮೇ.13ಕ್ಕೆ ಫಲಿತಾಂಶ ಹೊರಬೀಳಲಿದೆ.

ರಾಜ್ಯದಲ್ಲಿ 2,62,42,562 ಪುರುಷ ಮತದಾರರಿದ್ದು , 2,59,26,319 ಮಹಿಳಾ ಮತದಾರರಿದ್ದಾರೆ. 

4699 ತೃತೀಯ ಲಿಂಗಿ ಮತದಾರರಿದ್ದು ,ಒಟ್ಟಾರೆ ರಾಜ್ಯದಲ್ಲಿ 5 ಕೋಟಿ 21 ಲಕ್ಷ ಮತದಾರರಿದ್ದಾರೆ.  

ಈ ಬಾರಿ ಮನೆಯಿಂದಲೇ ಮತದಾನವನ್ನು ಮಾಡುವ ಅವಕಾಶವನ್ನು ನೀಡಲಾಗಿದ್ದು ಈ ಅವಕಾಶ ಕೇವಲ 80 ವರ್ಷ ಮೇಲ್ಪಟ್ಟ ಹಿರಿಯರಿಗೆ ಮಾತ್ರ ಅನ್ವಯವಾಗಲಿದೆ.

ಇನ್ನು ರಾಜ್ಯದಲ್ಲಿ ಒಟ್ಟು 58,282 ಮತಗಟ್ಟೆಗಳಿದ್ದು ,ಗ್ರಾಮೀಣ ಪ್ರದೇಶದಲ್ಲಿ 34,219 ಹಾಗು ನಗರ ಪ್ರದೇಶದಲ್ಲಿ 24,063 ಮತಗಟ್ಟೆಗಳಿವೆ .

ಮತದಾನದ ಜಾಗೃತಿಗಾಗಿ ಚುನಾವಣಾ ಆಯೋಗವು ಯೋಜನೆ ಜಾರಿಗೆ ತರಲಾಗುತ್ತಿದ್ದು ಜೊತೆಗೆ ಇಂದಿನಿಂದ ನೀತಿ ಸಂಹಿತೆಯನ್ನು ಜಾರಿಗೊಳಿಸಲಾಗುತ್ತದೆ ಎಂದು ಹೇಳಿದರು.

2024ರ ಲೋಕಸಭಾ ಚುನಾವಣೆಗೆ ಮುನ್ನುಡಿ ಎಂದೇ ಪರಿಗಣಿಸಲಾಗಿರುವ ಕರ್ನಾಟಕ ಸಾರ್ವತ್ರಿಕ ಚುನಾವಣೆಯ ದಿನಾಂಕವನ್ನು ಬುಧವಾರ ಚುನಾವಣಾ ಆಯೋಗವು ಪ್ರಕಟಿಸಿದೆ.

ಚುನಾವಣಾ ಪ್ರಕ್ರಿಯೆ ವಿವರಗಳು ಈ ರೀತಿ ಇವೆ

  • ರಾಜ್ಯದಲ್ಲಿ ಈ ಬಾರಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ
  • ಮೇ 10ಕ್ಕೆ ಕರ್ನಾಟಕದಲ್ಲಿ 224 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ
  • ಮೇ 13ಕ್ಕೆ ಮತ ಎಣಿಕೆ ಹಾಗೂ ಅದೇ ದಿನ ಚುನಾವಣಾ ಫಲಿತಾಂಶ  ಪ್ರಕಟವಾಗಲಿದೆ.  
  • ಏಪ್ರಿಲ್ 13ಕ್ಕೆ ಚುನಾವಣಾ ಅಧಿಸೂಚನೆ
  • ಬುಧವಾರದಿಂದಲೇ ರಾಜ್ಯದಲ್ಲಿ ನೀತಿಸಂಹಿತೆ ಜಾರಿ
  • ಏಪ್ರಿಲ್ 20ರಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನ
  • ಏಪ್ರಿಲ್‌ 21ಕ್ಕೆ ನಾಮಪತ್ರ ಪರಿಶೀಲನೆ
  • ಅಭ್ಯರ್ಥಿಗಳು ನಾಮಪತ್ರವನ್ನು ಹಿಂಪಡೆಯಲು ಏಪ್ರಿಲ್ 24 ಕೊನೆಯ ದಿನ   
  • 52,282 ಮತಗಟ್ಟೆಗಳ ಸ್ಥಾಪನೆ
  • 12 ಸಾವಿರ ಸೂಕ್ಷ್ಮ ಮತಗಟ್ಟೆಗಳು
  • 24,063 ನಗರ ಪ್ರದೇಶದಲ್ಲಿ, 34,219 ಗ್ರಾಮೀಣ ಮತಗಟ್ಟೆಗಳು ಸೂಕ್ಷ್ಮ ಮತಗಟ್ಟೆಗಳು ಎಂದು ಗುರುತಿಸಲಾಗಿದೆ.

Karnataka Election ಕರ್ನಾಟಕ ಚುನಾವಣೆ ದಿನಾಂಕ ಘೋಷಣೆ, ಮೇ 10ಕ್ಕೆ ಕರ್ನಾಟಕ ಚುನಾವಣೆ!

Karnataka Election You can vote from home, here is the information for whom it applies!

ಯುವಕರಿಗೆ ಪ್ರತ್ಯೇಕ ಮತಗಟ್ಟೆ ಸ್ಥಾಪನೆ

ಈ ಬಾರಿ ಯುವಕರಿಗಾಗಿಯೇ ಪ್ರತ್ಯೇಕ ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ.

ಈ ಬಾರಿ ಯುವಕರಿಗಾಗಿ 224 ಪ್ರತ್ಯೇಕ ಮತಗಟ್ಟೆ, ಮಹಿಳೆಯರಿಗಾಗಿ 1320 ಮತಗಟ್ಟೆಗಳು ನಿರ್ಮಿಸಲು ಉದ್ದೇಶಿಸಲಾಗಿದೆ.   

ಸರಾಸರಿ 883 ಮತದಾರರಿಗೆ ಒಂದರಂತೆ ಮತಗಟ್ಟೆ ನಿರ್ಮಾಣ ಮಾಡಲಾಗುವುದು ಎಂದು ಚುನಾವಣಾ ಆಯೋಗ ಹೇಳಿದೆ.     

ಈ ಬಾರಿಯ ಕರ್ನಾಟಕದ ಚುನಾವಣೆಯು ದೇಶದ ಮುಂದಿನ ಲೋಕಸಭಾ ಚುನಾವಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದೇ ರಾಜಕೀಯ ತಜ್ಞರು ಅಂದಾಜಿಸಿದ್ದಾರೆ.

ರಾಜ್ಯದಲ್ಲಿ ಆಡಳಿತದಲ್ಲಿರುವ ಬಿಜೆಪಿಯೂ ನಾಯಕತ್ವದ ಸವಾಲು ಸೇರಿದಂತೆ ಹಲವು ಸವಾಲುಗಳನ್ನು ಎದುರಿಸುತ್ತಿದೆ.

ಕಾಂಗ್ರೆಸ್‌ನ ಪ್ರಮುಖ ನಾಯಕರಾದ ರಾಹುಲ್‌ ಗಾಂಧಿ ಅವರು ಸಹ ಕಾನೂನು ಹೋರಾಟದಲ್ಲಿ ಇದ್ದಾರೆ.

ಒಟ್ಟಾರೆ ಎರಡೂ ರಾಷ್ಟ್ರೀಯ ಪಕ್ಷಗಳು ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಗೆಲ್ಲಲೇ ಬೇಕು ಎನ್ನುವ ಪರಿಸ್ಥಿತಿಯ ಎದುರಾಗಿದೆ.

ಇತ್ತ ಕರ್ನಾಟಕದ ಪ್ರಬಲ ಪ್ರಾದೇಶಿಕ ಪಕ್ಷವಾಗಿರುವ ಜೆಡಿಎಸ್‌ಗೂ ಇದು ಸವಾಲಿನ ಚುನಾವಣೆಯಾಗಿದೆ.

ಜೆಡಿಎಸ್‌ ವರಿಷ್ಠರಾದ ದೇವೇಗೌಡ ಅವರು ಅನಾರೋಗ್ಯದ ನಡುವೆಯೂ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.

ಮೀಸಲಾತಿ, ಭ್ರಷ್ಟಾಚಾರ, ಕೋಮುವಾದ ಸೇರಿದಂತೆ ಹಲವು ವಿಷಯಗಳು ಈ ಬಾರಿಯ ಚುನಾವಣೆಯ ಮೇಲೆ ಗಂಭೀರವಾದ ಪರಿಣಾಮವನ್ನು ಬೀರುವ ಸಾಧ್ಯತೆ ಇದೆ. 

Karnataka Election ಕರ್ನಾಟಕ ಸಾರ್ವತ್ರಿಕ ಚುನಾವಣೆ: ದಿನಾಂಕ ಘೋಷಣೆಗೆ ಕ್ಷಣಗಣನೆ!

Published On: 29 March 2023, 02:18 PM English Summary: Karnataka Election You can vote from home, here is the information for whom it applies!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.