
Identity card
ಸರ್ಕಾರಿ, ಖಾಸಗಿ ಹಾಗೂ ಐಟಿಬಿಟಿ ಕಚೇರಿಗಳಲ್ಲಿ ಕೆಲಸಮಾಡುವ ಸಿಬ್ಬಂದಿಗಳಿಗಿರುವ ಗುರುತಿನ ಚೀಟಿಯಂತೆ ಇನ್ಮುಂದೆ ರೈತನೂ ಗುರುತಿನ ಚೀಟಿ ಇರಲಿದೆ. ಹೌದು, ಕೃಷಿ ಇಲಾಖೆಯ ಮಹತ್ವಾಕಾಂಕ್ಷಿಯ ರೈತರಿಗೆ ಗುರುತಿನ ಚೀಟಿ ನೀಡುವ ಸ್ವಾಭಿಮಾನಿ ರೈತರ ಕಾರ್ಡ್ ವಿತರಣೆಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಈಗಾಗಲೇ ಚಾಲನೆ ನೀಡಿದ್ದಾರೆ.
ದೇಶದಲ್ಲೇ ಮೊದಲ ಬಾರಿಗೆ ಇಂಥ ಐಡಿ ಕಾರ್ಡ್ ಅನ್ನು ಕೊಪ್ಪಳದಲ್ಲಿ ವಿತರಣೆ ಮಾಡಲಾಯಿತು.ಸ್ವಾಭಿಮಾನಿ ರೈತರ ಗುರುತಿನ ಚೀಟಿ ರೈತರಿಗೆ ನೀಡುವ ಡಿಜಿಟಲ್ ಐಡಿ ಕಾರ್ಡ್ ಆಗಿದ್ದು, ಕೃಷಿ ಸಾಲ ಸೇರಿದಂತೆ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗಲಿದೆ. ಈ ಯೋಜನೆಯನ್ನು ರಾಜ್ಯಾದ್ಯಾಂತ ವಿಸ್ತರಿಸುವ ಉದ್ದೇಶವನ್ನು ಹೊಂದಲಾಗಿದೆ. ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಲ್ಪಟ್ಟಿರುವ ರೈತರಿಗೆ ಸ್ವಾಭಿಮಾನಿ ರೈತರ ಗುರುತಿನ ಚೀಟಿ ನೀಡಲಾಗುವುದು.
ಸ್ವಾಭಿಮಾನಿ ರೈತ" ಗುರುತಿನ ಚೀಟಿ ಎಂದರೇನು?
ರಾಜ್ಯದ ಇ - ಆಡಳಿತ ಇಲಾಖೆಯು ಎನ್.ಐ.ಸಿ ಮೂಲಕ ರಾಜ್ಯದ ರೈತರ ವಿವರಗಳನ್ನು ದಾಖಲಿಸಲು FRUITS ತಂತ್ರಾಂಶವನ್ನು ಅಭಿವೃದ್ಧಿ ಪಡಿಸಲಾಗಿದೆ. ಪ್ರತಿಯೊಬ್ಬ ರೈತರಿಗೆ ಒಂದು ಪ್ರತ್ಯೇಕ ಗುರುತಿನ ಸಂಖ್ಯೆಯನ್ನು ನೀಡುವುದು FRUITS ತಂತ್ರಾಂಶದಲ್ಲಿ ರೈತರ ನೋಂದಣಿಯ ಉದ್ದೇಶವಾಗಿರುತ್ತದೆ. ಸದರಿ ಗುರುತಿನ ಸಂಖ್ಯೆಯ ಆಧಾರದಲ್ಲಿ ರೈತರು ಈ ತಂತ್ರಾಂಶ ಬಳಸುವ ಎಲ್ಲಾ ಇಲಾಖೆಗಳ ಸೌಲಭ್ಯಗಳನ್ನು ಪಡೆಯಬಹುದಾಗಿರುತ್ತದೆ . FRUITS ತಂತ್ರಾಂಶದಲ್ಲಿ ರೈತರ ನೋಂದಣಿಯು ಜೂನ್ 2018 ರಿಂದ ಪ್ರಾರಂಭವಾಗಿದೆ . ಕೃಷಿ ತೋಟಗಾರಿಕೆ , ರೇಷ್ಮೆ , ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಗಳಲ್ಲಿ ರೈತರನ್ನು FRUITS ತಂತ್ರಾಂಶದಲ್ಲಿ ನೋಂದಾಯಿಸಲಾಗುತ್ತಿದೆ .
ಈ ತಂತ್ರಾಂಶದಲ್ಲಿ ರೈತರ ನೋಂದಾಣಿಗಾಗಿ ರೈತರ ಗುರುತು , ವಿಳಾಸ , ಭೂ ಹಿಡುವಳಿ , ಆಧಾರ್ ಗುರುತಿನ ಸಂಖ್ಯೆಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ . ಈ ಎಲ್ಲಾ ಮಾಹಿತಿಯನ್ನಯ FRUITS ನೋಂದಾಣಿ ಸಂಖ್ಯೆ ಆಧಾರಿತ ಗುರುತಿನ ಚೀಟಿಯನ್ನು ನೀಡಲು ಪ್ರಸ್ತಾಪಿಸಲಾಗಿದೆ .ಈ ತಂತ್ರಾಂಶವನ್ನು ಕೃಷಿ ಹಾಗೂ ಕೃಷಿ ಸಂಬಂಧಿತ ಇಲಾಖೆಗಳಲ್ಲಿ ಒಂದು ಬಾರಿ ಮಾತ್ರ ರೈತರ ನೋಂದಣಿ ಮಾಡಲು ಅಭಿವೃದ್ಧಿ ಪಡಿಸಲಾಗಿದೆ.
ತಂತ್ರಾಂಶದಲ್ಲಿ ಆಧಾರ್ ಕಾರ್ಡ್ , ಪಹಣಿ ( RTC ) , ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ರೈತರ ಜಾತಿ ಪ್ರಮಾಣ ಪತ್ರ , ಬ್ಯಾಂಕ್ ವಿವರ , ಫೋಟೊ , ಇತ್ಯಾದಿ ದಾಖಲಾತಿಗಳನ್ನು ಪರಿಶೀಲಿಸಿ ರೈತರ ನೋಂದಣಿ ಮಾಡಲಾಗುತ್ತದೆ.
ಗುರುತಿನ ಚೀಟಿ ಲಾಭ: ಇದರಿಂದ ರೈತರು ಬೆಳೆ ಸಾಲ, ಪಿಎಂ ಕಿಸಾನ್ ಮುಂತಾದ ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ಕಚೇರಿಗಳಲ್ಲಿ ವ್ಯಯಿಸಬೇಕಾದ ಸಮಯವನ್ನು ಉಳಿಸಬಹುದು. ಹಾಗೂರೈತರಿಗೆ ಇದು ಒಂದು ವ್ಯವಹಾರಿಕ ಗುರುತಿನಚೀಟಿಯಾಗುತ್ತದೆ
Share your comments