1. ಸುದ್ದಿಗಳು

Forest Department logo release : ಕರ್ನಾಟಕ ಅರಣ್ಯ ಇಲಾಖೆಯ ಲಾಂಛನ ಬಿಡುಗಡೆ

Kalmesh T
Kalmesh T
Karnataka Forest Department logo release

Karnataka Forest Department logo release : ವಿಧಾನಸೌಧದಲ್ಲಿಂದು ಕರ್ನಾಟಕ ಅರಣ್ಯ ಇಲಾಖೆಯ ಲಾಂಛನ ಬಿಡುಗಡೆಯನ್ನು ಸಚಿವ ಈಶ್ವರ ಖಂಡ್ರೆ ಮಾಡಿದರು.

ರಾಜ್ಯದಲ್ಲಿ 1 ಲಕ್ಷ ಹೆಕ್ಟೇರ್ ಹಸಿರು ವ್ಯಾಪ್ತಿ ಹೆಚ್ಚಳ, ಕರ್ತವ್ಯ ನಿರ್ಲಕ್ಷ್ಯಕ್ಕೆ ಕಠಿಣ ಕ್ರಮದ ಎಚ್ಚರಿಕೆ. ಅರಣ್ಯ, ಸಸ್ಯಸಂಕುಲ,ಪ್ರಾಣಿ ಸಂಕುಲ, ಪಕ್ಷಿ ಸಂಕುಲದ ಸಂರಕ್ಷಣೆಯೇ ಅರಣ್ಯ ಇಲಾಖೆಯ ಆದ್ಯ ಕರ್ತವ್ಯವಾಗಿದ್ದು ಅರಣ್ಯ ವ್ಯಾಪ್ತಿಯಲ್ಲಿ ಯಾರೇ ಅಕ್ರಮವಾಗಿ ಮರ ಕಡಿದರೂ, ಅರಣ್ಯ ಭೂಮಿ ಒತ್ತುವರಿ ಮಾಡಿದರೂ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.

ವಿಧಾನಸೌಧದಲ್ಲಿಂದು ಅರಣ್ಯ ಇಲಾಖೆಯ ಲಾಂಛನ ಬಿಡುಗಡೆ ಮಾಡಿ ಮಾತನಾಡಿದೆ, ಅರಣ್ಯನಾಶ ಮತ್ತು ವನ್ಯ ಮೃಗಗಳ ಸಾವು, ಮಾನವ-ಮೃಗ ಸಂಘರ್ಷದ ವಿಚಾರ ಬಹಳ ಗಂಭೀರವಾದ್ದು, ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ.

ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು, ಕಳೆದ ಒಂದು ತಿಂಗಳಲ್ಲಿ ನೀವು ಅದನ್ನು ನೋಡಿದ್ದೀರಿ. ಅರಣ್ಯಕ್ಕೆ ಎದುರಾಗುವ ಪ್ರಮುಖ ಆಪತ್ತು. ಕಾಡ್ಗಿಚ್ಚು. ಈ ಕಾಡ್ಗಿಚ್ಚು ಉದ್ದೇಶಪೂರ್ವಕವಾದ್ದೋ, ಸ್ವಾಭಾವಿಕವಾದ್ದೋ ಎಂಬುದು ಮುಖ್ಯವಾಗುತ್ತದೆ.

ಕೆಲವೆಡೆ ಮರ ಕಡಿದು ಬುಡಕ್ಕೆ ಬೆಂಕಿ ಹಚ್ಚಿ, ಜೆಸಿಬಿಯಿಂದ ಭೂಮಿ ಮಟ್ಟ ಮಾಡಿ ಅರಣ್ಯ ಭೂಮಿ ಕಬಳಿಸಲಾಗುತ್ತಿದೆ ಎಂಬ ಆರೋಪ ಇದೆ. ಈ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮಾನವ ಮತ್ತು ಕಾಡು ಮೃಗಗಳ ನಡುವಿನ ಸಂಘರ್ಷ ಕೂಡ ದೊಡ್ಡ ಸವಾಲಾಗಿದೆ.

ರಾಜ್ಯದಲ್ಲಿ 2022-23ನೇ ಸಾಲಿನಲ್ಲಿ ವನ್ಯಮೃಗ ದಾಳಿಯಿಂದ 51 ಸಾವು ಸಂಭವಿಸಿದ್ದು, ಇದರಲ್ಲಿ 29 ಸಾವು ಆನೆಗಳಿಂದಲೇ ಆಗಿದೆ ಎಂದು ನನಗೆ ತಿಳಿಸಲಾಗಿದೆ. ರಾಜ್ಯದಲ್ಲಿ ಸುಮಾರು 6 ಸಾವಿರ 30 ಆನೆ ಇದೆ ಎಂದು ಅಂದಾಜು ಮಾಡಲಾಗಿದೆ. ಮನುಷ್ಯರ ಜೀವ ಅಮೂಲ್ಯವಾಗಿದ್ದು, ಅರಣ್ಯ ಇಲಾಖೆ ಜನರಪರ ಕಾಳಜಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.

ಆನೆಗಳು ನಾಡಿಗೆ ಬರುವುದರಿಂದ ಅಪಾಯ ಹೆಚ್ಚು. ರಾಜ್ಯದಲ್ಲಿ ಸುಮಾರು 641 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಅಳವಡಿಸಲು ಯೋಜನೆ ರೂಪಿಸಲಾಗಿದೆ. ಈ ಪೈಕಿ 310 ಕಿ.ಮೀ. ಪೂರ್ಣವಾಗಿದೆ. ಒಂದು ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಾಡಲು ಒಂದೂವರೆ ಕೋಟಿ ವೆಚ್ಚವಾಗುತ್ತದೆ. ಉಳಿದ ಕಾಮಗಾರಿ ಮಾಡಲು ಬಜೆಟ್ ನಲ್ಲಿ ಹೆಚ್ಚಿನ ಹಣ ಕೋರಲಾಗಿದೆ.

3 ವರ್ಷಗಳಲ್ಲಿ ಈ ಕಾಮಗಾರಿ ಪೂರ್ಣಗೊಳಿಸಲು ಕಾಲಮಿತಿ ಹಾಕಿಕೊಳ್ಳಲಾಗಿದೆ. ಕಾಂಪಾ ನಿಧಿ ಬಳಸಿಕೊಂಡು ತಡೆಗೋಡೆ ನಿರ್ಮಿಸಲು ಉದ್ದೇಶಿಸಲಾಗಿದೆ. ಈ ವಿಚಾರದಲ್ಲಿ ಕೇಂದ್ರ ಅರಣ್ಯ ಸಚಿವರಿಗೆ ಕೆಲವು ತಪ್ಪು ಕಲ್ಪನೆ ಇದೆ. ಇದನ್ನು ಇತ್ತೀಚೆಗೆ ನಾನು ದೆಹಲಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪರಿಹರಿಸಲು ಪ್ರಯತ್ನಿಸಿದ್ದೇವೆ.

ಬ್ಯಾರಿಕೇಡ್ ನಿರ್ಮಾಣಕ್ಕೆ ಏಕೆ ಇಷ್ಟು ವೆಚ್ಚ ಮಾಡುತ್ತೀರಿ ಎಂಬುದು ಅವರ ಪ್ರಶ್ನೆಯಾಗಿದೆ. ಆದರೆ ಮಾನವನ ಜೀವ ಅಮೂಲ್ಯವಾದ್ದು, ಎಷ್ಟೇ ಹಣ ಕೊಟ್ಟರೂ ಅದು ಮರಳಿ ಬರುವುದಿಲ್ಲ. ನಾವು ಆನೆಗಳು ಕಾಡಿನಿಂದ ನಾಡಿಗೆ ಬಾರದಂತೆ ತಡೆದರೆ ಈ ಅಮೂಲ್ಯ ಜೀವ ಉಳಿಸಬಹುದು ಎಂದು ಅವರಿಗೆ ಮನವರಿಕೆ ಮಾಡಿಸಿದ್ದೇನೆ ಎಂದು ತಿಳಿಸಿದರು.

Karnataka Forest Department logo release

ಇಲಾಖೆಯಲ್ಲಿ ಖಾಲಿ ಇರುವ 335 ಹುದ್ದೆ ಭರ್ತಿಗೆ ಹಣಕಾಸು ಇಲಾಖೆ ಅನುಮೋದನೆ ಪಡೆದು ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಹಣಕಾಸು ಇಲಾಖೆಯ ಅನುಮತಿಯ ಅಗತ್ಯವಿಲ್ಲ.

ಹೀಗಾಗಿ ಈ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಲಾಗಿದೆ. ಅರಣ್ಯ ಮತ್ತು ಕಂದಾಯ ಭೂಮಿಯ ಸಮಸ್ಯೆಗೆ ಜಂಟಿ ಸರ್ವೆ ಪರಿಹಾರವಾಗಿದೆ. ಭೂಮಾಪಕರ ಕೊರತೆಯಿಂದ ಇದು ತಡವಾಗಿದೆ. ಅಧಿವೇಶನದ ವೇಳೆ ಕಂದಾಯ ಸಚಿವರೊಂದಿಗೆ ಸಭೆ ನಡೆಸಿ, ಖಾಸಗಿ ಭೂಮಾಪಕರ ನೆರವು ಪಡೆದು 6 ತಿಂಗಳೊಳಗೆ ಜಂಟಿ ಸರ್ವೆ ಮಾಡಿಸಲು ಪ್ರಯತ್ನಿಸಲಾಗುವುದು.

ರಾಜ್ಯದಲ್ಲಿ 1 ಲಕ್ಷ 2 ಸಾವಿರ ಹೆಕ್ಟೇರ್ ಹಸಿರು ವ್ಯಾಪ್ತಿ (ಗ್ರೀನ್ ಕವರ್) ಹೆಚ್ಚಳವಾಗಿದೆ ಎಂದು ಭಾರತೀಯ ಅರಣ್ಯ ಸಮೀಕ್ಷಾ ವರದಿ ಹೇಳಿದೆ. ಪ್ರಸ್ತುತ ರಾಜ್ಯದಲ್ಲಿ ಶೇ.21ರಷ್ಟು ಹಸಿರು ವ್ಯಾಪ್ತಿ ಇದ್ದು, ಇದನ್ನು ಶೇ.33ಕ್ಕೆ ಹೆಚ್ಚಿಸುವುದು ತಮ್ಮ ಗುರಿ ಇದೆ.

What an Idea! ಮಂಗಗಳ ಹಾವಳಿ ತಪ್ಪಿಸಲು ಕರಡಿ ವೇಷ ತೊಟ್ಟು ಬೆಳೆ ಸಂರಕ್ಷಣೆ ಮಾಡಿದ ರೈತರು!

Published On: 27 June 2023, 02:22 PM English Summary: Karnataka Forest Department logo release

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.