ಇಡೀ ಭಾರತವೇ ಎದುರು ನೋಡುತ್ತಿರುವ ಕರ್ನಾಟಕ ಚುನಾವಣೆ ದಿನಾಂಕ ಘೋಷಣೆಗೆ ಕ್ಷಣಗಣನೆ ಪ್ರಾರಂಭವಾಗಿದೆ.
ಕರ್ನಾಟಕ ಸಾರ್ವತ್ರಿಕ ಚುನಾವಣೆ – 2023ಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ.
ಚುನಾವಣಾ ಆಯೋಗವು 11.30ಕ್ಕೆ ಪತ್ರಿಕಾಗೋಷ್ಠಿಯನ್ನು ಕರೆದಿದ್ದು, ಇಂದೇ ಚುನಾವಣಾ ದಿನಾಂಕ ಘೋಷಣೆ ಆಗುವ ಬಹಳಷ್ಟು ಸಾಧ್ಯತೆಗಳಿವೆ.
ಸಿ.ಎಂ ಕಾರ್ಯಕ್ರಮ ದಿಢೀರ್ ರದ್ದು
ಚುನಾವಣಾ ದಿನಾಂಕ ಇಂದು ಘೋಷಣೆ ಆಗುವ ಸಾಧ್ಯತೆ ಇದೆ ಎನ್ನುವುದಕ್ಕೆ ಪುಷ್ಠಿ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೆರವೇರಿಸಬೇಕಾಗಿದ್ದ
ಕಾರ್ಯಕ್ರಮ ದಿಢೀರ್ ಮುಂದೂಡಿಕೆ ಆಗಿದೆ.
ಚುನಾವಣೆ ಘೋಷಣೆಯಾದರೆ ನೀತಿಸಂಹಿತೆ ಜಾರಿ ಆಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕಾರ್ಯುಕ್ರಮ ಮುಂದೂಡಲಾಗಿದೆ ಎಂದು ಹೇಳಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಬುಧವಾರ ಕೊಳ್ಳಲಾಗಿದ್ದ, ಕೊಪ್ಪಳ್ಳ, ಹಾವೇರಿ ಹಾಗೂ ಧಾರವಾಡ ಜಿಲ್ಲೆಗಳ ಪ್ರವಾಸ ಕಾರ್ಯಕ್ರಮವನ್ನು
ಅನಿವಾರ್ಯ ಕಾರಣಗಳಿಂದ ರದ್ದು ಪಡಿಸಿರುವುದಾಗಿ ಪ್ರಕಟಣೆ ಹೊರಡಿಸಲಾಗಿದ್ದು, ಮುಖ್ಯಮಂತ್ರಿ ಅವರು ಈ ಸ್ಥಳಗಳನ್ನು
ತಲುಪುವ ವೇಳೆಗೆ ಚುನಾವಣೆ ಘೋಷಣೆ ಆಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
Share your comments