1. ಸುದ್ದಿಗಳು

ಎಲ್ಲೆಂದರಲ್ಲಿ ತಂಬಾಕು ಸೇವಿಸುವವರೇ ಎಚ್ಚರ- ಸಾರ್ವಜನಿಕ ಸ್ಥಳಗಳಲ್ಲಿ‌ ತಂಬಾಕು ಸೇವಿಸಿದರೆ ಕಠಿಣ ಕ್ರಮ

ಕರ್ನಾಟಕ ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಜಗಿಯುವುದು, ಉಗುಳುವುದನ್ನು ನಿಷೇಧಗೊಳಿಸಿ ಆದೇಶ ಮಾಡಲಾಗಿದೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ.

ಅವರು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯದ 30 ಜಿಲ್ಲೆಗಳಲ್ಲಿ ಜಗಿಯುವ ತಂಬಾಕು ಪಾನ್ ಮಸಾಲ ಉತ್ಪನ್ನಗಳನ್ನು ರಾಜ್ಯ ಸರ್ಕಾರ ನಿಷೇಧ ಮಾಡಿದೆ. ಕೊರೋನಾ ವೈರಸ್‌ ಸೋಂಕು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತಂಬಾಕು ಮತ್ತು ಗುಟ್ಕಾವನ್ನು ನಿಷೇದಿಸಲಾಗಿದೆ.ಪ್ರತಿ ವರ್ಷ ಮೇ31ರಂದು ವಿಶ್ವ ತಂಬಾಕು ರಹಿತ ದಿನಾಚರಣೆ ಆಚರಿಸಲಾಗುತ್ತಿದೆ. ಭಾನುವಾರು ವಿಶ್ವ ತಂಬಾಕು ರಹಿತ ದಿನ ಇರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದರು.

ತಂಬಾಕು ಮತ್ತು ಗುಟ್ಕಾ ಉತ್ಪನ್ನಗಳನ್ನು ಜಗಿದು ಕಂಡಕಂಡಲ್ಲಿ ಉಗಿಯುವುದರಿಂದ ಕೊರೋನಾ ವೈರಸ್‌ ಮತ್ತಷ್ಟು ವ್ಯಾಪಕವಾಗಿ ಹರಡುವ ಅಪಾಯವಿದೆ. ಹೀಗಾಗಿ ರಾಜ್ಯಾದ್ಯಂತ ತಂಬಾಕು ಮತ್ತು ಗುಟ್ಕಾ ಉತ್ಪನ್ನಗಳ ಮೇಲೆ ನಿಷೇಧ ಹೇರಲಾಗಿದೆ.ಸಾರ್ವಜನಿಕ ಸ್ಥಳಗಳಲ್ಲಿ‌ ತಂಬಾಕು ಸೇವನೆ ಮಾಡಿದ್ರೆ ಕಾನೂನು ಕ್ರಮ ತೆಗೆುಕೊಳ್ಳಲಾಗುವುದು.ಐಪಿಸಿ ಸೆಕ್ಷನ್ 188, 268, 269, 270 ಅಡಿ ಕೇಸ್ ದಾಖಲಿಸಲಾಗುವುದು ಎಂದು ಹೇಳಿದ್ದಾರೆ.
Published On: 31 May 2020, 11:13 AM English Summary: Karnataka govt bans spitting tobacco products at public places

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.