News

ರಾಜ್ಯದಲ್ಲಿ ಬಿರುಸುಗೊಂಡ ಮುಂಗಾರು..ಜೂನ್‌ 15ರವರಗೆ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

13 June, 2022 10:37 AM IST By: Maltesh
Karnataka Monsoon

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ , ಮುಂದಿನ ಎರಡು ದಿನಗಳಲ್ಲಿ ರಾಜ್ಯದ ಕರಾವಳಿಯಾದ್ಯಂತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಮುಂದಿನ 2 ದಿನಗಳವರೆಗೆ, ಈಶಾನ್ಯ ಭಾರತ, ಉಪ-ಹಿಮಾಲಯನ್ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ಹಾಗೂ ಕರ್ನಾಟಕದಲ್ಲಿ ತೀವ್ರ ಮಳೆಯು ಮುಂದುವರಿಯುವ ನಿರೀಕ್ಷೆಯಿದೆ.

“ತಂತ್ರಜ್ಞಾನ ಎಷ್ಟೇ ಮುಂದುವರೆದರೂ ರೊಟ್ಟಿಯನ್ನು ಗೂಗಲ್‌ನಿಂದ ಡೌನ್ಲೋಡ್ ಮಾಡಿಕೊಳ್ಳಲಾಗುವುದಿಲ್ಲ” ಪ್ರೊ. ಆಂಚಲ್ ಅರೋರಾ

₹23 ಲಕ್ಷಕ್ಕೆ ಬೇಡಿಕೆ ಗಿಟ್ಟಿಸಿಕೊಂಡ ಅಪರೂಪದ ಮೇಕೆ! ಏನಿದರ ವಿಶೇಷತೆ ಗೊತ್ತೆ?

ಕರಾವಳಿಯಲ್ಲಿ ಬಿರುಸುಗೊಂಡ ಮುಂಗಾರು

ರಾಜ್ಯದ ಕರಾವಳಿಯಲ್ಲಿ ಮುಂಗಾರು ಮಳೆ ತುಸು ಬಿರುಸಾಗಿ ಶುರುವಾಗಿದೆ. ಹೌದು ಶನಿವಾರ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ಮಳೆಯಾಗಿದೆ. ಪರಿಣಾಮ ಮುಂದಿನ ಮೂರು ದಿನಗಳ ಕಾಲ ಕೆಲ ಭಾಗಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

ಉತ್ತರಕನ್ನಡ ಜಿಲ್ಲೆಯ ಭಟ್ಕಳ, ಕುಮಟಾ, ಅಂಕೋಲಾ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಶನಿವಾರ ಬೆಳಗ್ಗೆಯಿಂದಲೇ ಮಳೆ ಸುರಿದಿದೆ.

ಬಿಟ್ಟು ಬಿಡದೇ  ರಭಸದಿಂದ ಸುರಿಯುವ ಮಳೆ, ದಿನವಿಡೀ ಮುಂದುವರೆದಿದ್ದು ಅಪಾರ ಜನಜೀವನ ಅಸ್ತವ್ಯಸ್ತಕ್ಕೆ ಕಾರಣವಾಗಿದೆ. ಇನ್ನು ಕರಾವಳಿ ಭಾಗದ ಹಲವು ಕಡೆಗಳಲ್ಲಿ ರಭಸದ ಮಳೆ ಇದ್ದರೆ ಘಟ್ಟಪ್ರದೇಶದಲ್ಲಿ ಸಾಧಾರಣ ಮಳೆ ಇತ್ತು.

PM ಉಚಿತ ಹೊಲಿಗೆ ಯಂತ್ರ ಯೋಜನೆ; ಒಂದು ಅರ್ಜಿ ಸಲ್ಲಿಸಿ ಉಚಿತ ಹೊಲಿಗೆ ಯಂತ್ರ ಪಡೆಯಿರಿ..! ಈಗಲೇ ಅರ್ಜಿ ಸಲ್ಲಿಸಿ

ರೈತರಿಗೆ ಗುಡ್ ನ್ಯೂಸ್: ಸರ್ಕಾರಿ ಭೂಮಿಯಲ್ಲಿ ಕೃಷಿ: ಕೃಷಿ ಆಕಾಂಕ್ಷಿಗಳಿಗೆ ವರದಾನ ಈ ಯೋಜನೆ

ಸದ್ಯ ಮುಂಹಾಗೃತ ಕ್ರಮವಾಗಿ ಭಾರತೀಯ ಹವಾಮಾನ ಇಲಾಖೆಯು ಜೂನ್15ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಿದೆ.

ಸಿಡಿಲಿನ ಕುರಿತು ಅಡ್ವಾನ್ಸ್‌ ಮಾಹಿತಿ ನೀಡುವಂಥ ಮೊಬೈಲ್‌ ಆಪ್‌ (Mobile App) ಒಂದನ್ನು ಈಗಾಗಲೇ ಕೆಲ ದಿನಗಳ ಹಿಂದೆ ಕೇಂದ್ರ ಸರ್ಕಾರ ತಯಾರಿಸಿದೆ.

ಹೌದು! ಸಿಡಿಲಿನಿಂದ ಪಾರಾಗಲು ಕೇಂದ್ರ ಸರಕಾರದ ಭೂವಿಜ್ಞಾನ ಸಚಿವಾಲಯ ಅಧೀನದ ಭಾರತೀಯ ಉಷ್ಣವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿಪಡಿಸಿರುವ ʼದಾಮಿನಿʼ (Damini App) ನಿಮಗೆಲ್ಲ ಸಹಾಯ ಮಾಡಲಿದೆ.

7th Pay : ಸಂಬಳದ ಹೊರತಾಗಿಯೂ ನೌಕರರಿಗೆ ದೊರೆಯಲಿದೆ ಲಾಭ! ಏನಿದು ಗೊತ್ತೆ!

EPFO: 6 ಕೋಟಿಗೂ ಹೆಚ್ಚು ಸರ್ಕಾರಿ ನೌಕರರಿಗೆ ಭರ್ಜರಿ ಸುದ್ದಿ; ಈ ದಿನದಂದು ನಿಮ್ಮ ಖಾತೆಗೆ ಬರಲಿದೆ ₹80,000!

ಸಿಡಿಲು ಹೊಡೆಯುವ ಕೆಲವು ನಿಮಿಷಗಳ ಮುಂಚೆ ಈ ಆ್ಯಪ್‌ ಮುನ್ಸೂಚನೆ ನೀಡಲಿದೆ.  ಸಾವು, ನೋವಿನ ಪ್ರಮಾಣ ತಗ್ಗಿಸಲು ನೆರವಿಗೆ ಬರಲೆಂದು ಈ ಆಪ್‌ನ್ನು ತಯಾರಿಸಲಾಗಿದೆ.

ಪುಣೆಯಲ್ಲಿರುವ ಭಾರತೀಯ ಉಷ್ಣವಲಯದ ಹವಾಮಾನ ಸಂಸ್ಥೆಯು ಸಿಡಿಲಿನ ಅನಾಹುತ ತಪ್ಪಿಸಲು ಸಿಡಿಲು ಪತ್ತೆಹಚ್ಚುವ ಸಂವೇದಕಗಳನ್ನು ದೇಶದ ವಿವಿಧ ಭಾಗಗಳಲ್ಲಿ ಸ್ಥಾಪಿಸಿದೆ.

ಈ ಮೂಲಕ ಒಂದು ಸ್ಥಳದ ಸುತ್ತಲಿನ 20 ರಿಂದ 40 ಕಿ.ಮೀ. ದೂರದವರೆಗೆ 15 ನಿಮಿಷಗಳ ಒಳಗೆ ಸಂಭವಿಸಬಹುದಾದ ಸಿಡಿಲಿನ ಬಗ್ಗೆ ನಿಖರವಾದ ಮಾಹಿತಿ ದೊರೆಯುತ್ತದೆ.

ಗುಡ್‌ನ್ಯೂಸ್‌; ಡ್ರೋನ್ ಖರೀದಿಸುವ ರೈತರಿಗೆ ಸರ್ಕಾರ ನೀಡುತ್ತಿದೆ ₹5 ಲಕ್ಷ ಸಹಾಯಧನ!

ಸಾವಯವ ಗೊಬ್ಬರ ಖರೀದಿಸುವ ರೈತರಿಗೆ ಭರ್ಜರಿ ರಿಯಾಯಿತಿ: ಈ ಯೋಜನೆಯಡಿ ₹227.40 ಲಕ್ಷ ಅನುದಾನ ಮೀಸಲು!