News

ರಾಜ್ಯದಲ್ಲಿ 2021 ರ ಅಕ್ಟೋಬರ್ 31ರವರೆಗೆ ಕನ್ನಡ ಕಾಯಕ ವರ್ಷವನ್ನಾಗಿ ಆಚರಿಸಲಾಗುವುದು-ಬಿ.ಎಸ್. ಯಡಿಯೂರಪ್ಪ

02 November, 2020 8:23 AM IST By:

ಕನ್ನಡದ ಸತ್ವ ಮತ್ತು ‘ಕನ್ನಡ ಭಾಷೆಯನ್ನು ಮತ್ತಷ್ಟು ಸಶಕ್ತಗೊಳಿಸುವ ಗುರಿಯೊಂದಿಗೆ ಭಾನುವಾರದಿಂದ ಆರಂಭವಾಗಿ 2021ರ ಅಕ್ಟೋಬರ್‌ 31ರವರೆಗಿನ ಅವಧಿಯನ್ನು ‘ಕನ್ನಡ ಕಾಯಕ ವರ್ಷ’ವನ್ನಾಗಿ ಆಚರಿಸಲಾಗುವುದು  ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಘೋಷಿಸಿದರು.

ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕದ ವತಿಯಿಂದ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯಮಟ್ಟದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ  ಈ ಘೋಷಣೆ ಮಾಡಿದ್ದಾರೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಪರಿಕಲ್ಪನೆಯಂತೆ ನ 1 ರಿಂದ ಮುಂದಿನ ವರ್ಷ ಅಕ್ಟೋಬರ್ 31 ರವರೆಗೆ ಕನ್ನಡ ಕಾಯಕ ವರ್ಷಾಚರಣೆ ನಡೆ,ಸಲು ನಿರ್ಧರಿಸಲಾಗಿದೆ. ತಂತ್ರಜ್ಞಾನ ಯುಗದಲ್ಲಿ ಕನ್ನಡದ ಬಳಕೆ ಮತ್ತು ಭಾಷೆಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಮುಂದಿನ ಒಂದು ವರ್ಷದ ಅವಧಿಯಲ್ಲಿ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಕನ್ನಡದ ಮೇಲಿನ ಪ್ರೀತಿ ನವೆಂಬರ್‌ ತಿಂಗಳಿಗೆ ಸೀಮಿತ ಆಗಬಾರದು. ವರ್ಷಪೂರ್ತಿ ಕನ್ನಡದ ಕಾರ್ಯಕ್ರಮಗಳನ್ನು ನಡೆಸುವ ದಿಸೆಯಲ್ಲಿ ಒಂದು ಸ್ಪಷ್ಟವಾದ ಕಾರ್ಯಸೂಚಿ ಹೊಂದುವುದು ಬಹಳ ಮುಖ್ಯವಾಗಿದೆ. ‘ಕನ್ನಡ ಕಾಯಕ ವರ್ಷ’ದ ಅಂಗವಾಗಿ ಹಮ್ಮಿಕೊಳ್ಳಲಿರುವ ಕಾರ್ಯ ಕ್ರಮದ ವಿವರಗಳನ್ನು ಅಂತಿಮಗೊಳಿಸಲಾಗುತ್ತಿದೆ. ಶೀಘ್ರದಲ್ಲೇ ಯೋಜನೆಯ ಸ್ವರೂಪವನ್ನು ಪ್ರಕಟಿಸಿ, ಅನುಷ್ಠಾನಕ್ಕೆ ತರಲಾಗುವುದು ಎಂದರು.

ಆಡಳಿತದ ಎಲ್ಲಾ ಹಂತದಲ್ಲೂ ಕನ್ನಡ ಭಾಷೆಯ ಬಳಕೆಯನ್ನು ಕಡ್ಡಾಯವಾಗಿ ಮಾಡಲಾಗಿದೆ.ಜನತೆ ಸಹ ಕನ್ನಡ ಭಾಷೆ ಉಳಿವಿಗೆ ಕನ್ನಡದಲ್ಲಿ ಮಾತನಾಡಬೇಕು. ನಿತ್ಯ ಜೀವನದ ವ್ಯವಾಹರಗಳಲ್ಲಿ ಕನ್ನಡ ಬಳಿಸಬೇಕು.‘ನಾಡು, ನುಡಿ, ಜಲದ ವಿಷಯದಲ್ಲಿ ಭಾವೋದ್ವೇಗ, ಭಾವನಾತ್ಮಕತೆ ಮತ್ತು ತಾಯ್ನಾಡಿನ ಮೇಲೆ ಅಪರಿಮಿತ ಪ್ರೀತಿ ಎಲ್ಲವೂ ಮುಖ್ಯ. ಆದರೆ, ಅವೆಲ್ಲವೂ ಆಚರಣೆಯಲ್ಲೇ ನೀರಿನಂತೆ ವ್ಯರ್ಥವಾಗಿ ಹರಿದು ಹೋಗಬಾರದು. ವೇಗದಲ್ಲಿ ಬೆಳೆಯುತ್ತಿರುವ ಮಾಹಿತಿ ತಂತ್ರಜ್ಞಾನಕ್ಕೆ ತಕ್ಕಂತೆ ನಮ್ಮ ಭಾಷೆಯನ್ನೂ ಸಜ್ಜುಗೊಳಿಸು ವುದು ಅನಿವಾರ್ಯವಾಗಿದೆ’ ಎಂದು ಯಡಿಯೂರಪ್ಪ ಹೇಳಿದರು.

ಕನ್ನಡ ಭಾಷಿಕರಿಗಾಗಿ 1956 ರ ನವೆಂಬರ್ 1 ರಂದು ಮದ್ರಾಸ್, ಬಾಂಬೆ ಮತ್ತು ಹೈದ್ರಾಬಾದ್ ಪ್ರಾಂತ್ಯದ ಪ್ರದೇಶಗಲು ಒಗ್ಗೂಡಿ ಮೈಸೂರು ರಾಜ್ಯ ಉದಯವಾಯಿತು. ಅದ್ಕಕೆ ಹಲವು ಮಹನೀಯರ ಹೋರಾಟವಿದೆ. ಅವರ ಹೋರಾಟದ ಫಲ ವ್ಯರ್ಥವಾಗದಂತೆ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಕರ್ನಾಟಕವನ್ನು ದೇಶದಲ್ಲಿ ಮಾದರಿ ರಾಜ್ಯವನ್ನಾಗಿ ಮಾಡಲಾಗುವುದು ಎಂದು ಹೇಳಿದರು.