News

ಸ್ಪರ್ಧಾತ್ಮಕ ಅಭ್ಯರ್ಥಿಗಳಿಗೆ ಬಂಪರ್‌ ನ್ಯೂಸ್‌: ಯಾವುದೇ ಪರೀಕ್ಷೆ ಇಲ್ಲದೆ 155 SDA ಹುದ್ದೆಗಳಿಗೆ ಅರ್ಜಿ ಆಹ್ವಾನ

26 June, 2022 11:02 AM IST By: Maltesh
Karnataka Recruitment Water Resources Departmen SDA

ಜಲ ಸಂಪನ್ಮೂಲ ಇಲಾಖೆಯ ಗ್ರೂಪ್‌-ಸಿ ವೃಂದದ ಪರಿಶಿಷ್ಟ ಜಾತಿ ಬ್ಯಾಕ್‌ಲಾಗ್ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್‌ ಮೂಲಕ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆಸಕ್ತರು, ನಿಗದಿತ ಅರ್ಹತೆಗಳನ್ನು ಈ ಕೆಳಗಿನಂತೆ ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. 

ರಾಜ್ಯ ಜಲ ಸಂಪನ್ಮೂಲ ವಿಭಾಗದಲ್ಲಿ (Water Resources Department) 155 ಬ್ಯಾಕ್​ಲಾಗ್​ ದ್ವಿತೀಯ ದರ್ಜೆ ಸಹಾಯಕ (Backlog Second Division Clerk) ಹುದ್ದೆ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಗ್ರೂಪ್​ ಸಿ ವೃಂದದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೀಸಲಿರಿಸಿದ್ದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

2001ರ ವಿಶೇಷ ನೇಮಕಾತಿ ನಿಯಮಗಳ ಅನುಸಾರ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಶೇಕಡಾವಾರು ಅಂಕಗಳು ಮತ್ತು ವಯೋಮಿತಿ ಆಧಾರದ ಮೇಲೆ ನೇಮಕಾತಿ ಮಾಡಲಾಗುವುದು. ವಿಶೇಷ ಸೂಚನೆ ಅನುಸಾರ ಈ ಬ್ಯಾಕ್​ಲಾಗ್​ ಹುದ್ದೆಗಳ ಭರ್ತಿಗೆ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದಿಲ್ಲ.

ಹುದ್ದೆ ಮಾಹಿತಿ  ಹುದ್ದೆ ವಿವರ

ಸಂಸ್ಥೆ   ಜಲಸಂಪನ್ಮೂಲ ಇಲಾಖೆ ಕರ್ನಾಟಕ

7th Pay commission ಬಿಗ್ ಗಿಫ್ಟ್: ಸರ್ಕಾರಿ ನೌಕರರ DA ಯಲ್ಲಿ 13% ಹೆಚ್ಚಳ, 3 ತಿಂಗಳ ಬಾಕಿ ಖಾತೆಗೆ!

ರಾಜ್ಯ ಸರ್ಕಾರಿ ನೌಕರರಿಗೆ Good News: ವರ್ಷಾಂತ್ಯಕ್ಕೆ ದೊರೆಯಲಿದೆ ಕೇಂದ್ರ ಮಾದರಿ ವೇತನ! ಯಾವಾಗ ದೊರೆಯಲಿದೆ ಗೊತ್ತೆ?

ಹುದ್ದೆಗಳ ಸಂಖ್ಯೆ:      155

ಹುದ್ದೆ   ಬ್ಯಾಕ್‌ಲಾಗ್ ದ್ವಿತೀಯ ದರ್ಜೆ ಸಹಾಯಕರು

ವಯಸ್ಸಿನ ಮಿತಿ: ಜಲಸಂಪನ್ಮೂಲ ಇಲಾಖೆ ಕರ್ನಾಟಕ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 40 ವರ್ಷಗಳನ್ನು ಹೊಂದಿರಬೇಕು.

ಶೈಕ್ಷಣಿಕ ಅರ್ಹತೆ: ಜಲಸಂಪನ್ಮೂಲ ಇಲಾಖೆ ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪಿಯುಸಿ, 10+2, ಡಿಪ್ಲೊಮಾ, ಐಟಿಐ ಪೂರ್ಣಗೊಳಿಸಿರಬೇಕು.

ಅರ್ಜಿ ಸಲ್ಲಿಕೆ: ಆನ್​ಲೈನ್​ ಮುಖಾಂತರ

ವಯಸ್ಸಿನ ಸಡಿಲಿಕೆ:

ವಿಕಲಚೇತನ/ವಿಧವೆ ಅಭ್ಯರ್ಥಿಗಳು: 10 ವರ್ಷಗಳು

EPFO: 6 ಕೋಟಿಗೂ ಹೆಚ್ಚು ಸರ್ಕಾರಿ ನೌಕರರಿಗೆ ಭರ್ಜರಿ ಸುದ್ದಿ; ಈ ದಿನದಂದು ನಿಮ್ಮ ಖಾತೆಗೆ ಬರಲಿದೆ ₹80,000!

7th Pay Commission: ಸರ್ಕಾರಿ ನೌಕರರಿಗೆ ಗುಡ್ನ್ಯೂಸ್; ತುಟ್ಟಿಭತ್ಯೆಯಲ್ಲಿ ಶೇ.5ರಷ್ಟು ಹೆಚ್ಚಳ ಫಿಕ್ಸ್!

ಅರ್ಜಿ ಶುಲ್ಕ:

ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ:

ವಯೋಮಿತಿ ಮತ್ತು ಶೈಕ್ಷಣಿಕ ವಿದ್ಯಾರ್ಹತೆಯ ಮೆರಿಟ್ ಪಟ್ಟಿ

ಅರ್ಜಿ ಸಲ್ಲಿಕೆ ವಿಧಾನ

ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 11-07-2022

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-ಆಗಸ್ಟ್-2022

Rain Alert: ಇನ್ನೂ ನಾಲ್ಕೈದು ದಿನಗಳಲ್ಲಿ ಕರ್ನಾಟಕದಾದ್ಯಂತ ಗುಡುಗು- ಮಿಂಚು ಸಮೇತ ಮಳೆ ಸಾಧ್ಯತೆ!

PM ಉಚಿತ ಹೊಲಿಗೆ ಯಂತ್ರ ಯೋಜನೆ; ಒಂದು ಅರ್ಜಿ ಸಲ್ಲಿಸಿ ಉಚಿತ ಹೊಲಿಗೆ ಯಂತ್ರ ಪಡೆಯಿರಿ..! ಈಗಲೇ ಅರ್ಜಿ ಸಲ್ಲಿಸಿ