1. ಸುದ್ದಿಗಳು

ರೈತರಿಗೆ ಸಿಹಿಸುದ್ದಿ: ಪ್ರತಿ ಜಿಲ್ಲೆಯಲ್ಲೂ ಮಿನಿ "ಫುಡ್‌ ಪಾರ್ಕ್‌" ಸ್ಥಾಪಿಸಲು ನಿರ್ಧಾರ..!

Kalmesh T
Kalmesh T
Karnataka : Refined industries in each district

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಿನಿ ಆಹಾರ ಪಾರ್ಕ್‌ ಸ್ಥಾಪಿಸಿ, ಅಲ್ಲಿ ರೈತರಿಗೆ ಅನುಕೂಲವಾಗುವಂತೆ ಶೀತಲಗೃಹಗಳು , ಗೋದಾಮುಗಳು , ಸಂಸ್ಕರಣೆ ಘಟಕಗಳು ಸ್ಥಾಪಿಸಲು ತೀರ್ಮಾನಿಸಲಾಯಿತು.

ಇದನ್ನೂ ಓದಿರಿ: ಹೈನುಗಾರಿಕೆಯಲ್ಲಿ ಯಶಸ್ಸು ಪಡೆದ ವಿಜಯಪುರದ ಯುವ ರೈತ!

ಸಾಫ್ಟ್‌ವೇರ್ ಕೆಲಸ ಬಿಟ್ಟು ಕತ್ತೆ ಸಾಕಾಣಿಕೆ ಆರಂಭ; ಲೀ.ಹಾಲಿಗೆ 7ರಿಂದ 8 ಸಾವಿರ ಆದಾಯ! ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್‌..

ವಿಕಾಸಸೌಧದಲ್ಲಿ ಆಹಾರ ಕರ್ನಾಟಕ ನಿಯಮಿತ ಸಂಸ್ಥೆಯ ಆಡಳಿತ ಮಂಡಳಿಯ ಸಭೆ ನಡೆಸಿ, ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಯಿತು. 

ಸಭೆಯಲ್ಲಿ, ವಿಜಯಪುರ ಜಿಲ್ಲೆಯ ಇಟ್ಟಂಗಿಹಾಳದಲ್ಲಿ ಸ್ಥಾಪಿಸಲಾಗುತ್ತಿರುವ ಆಹಾರ ಪಾರ್ಕಿನಲ್ಲಿ , ಜಿಲ್ಲೆಯಲ್ಲಿ ಬೆಳೆಯಲಾಗುತ್ತಿರುವ ವಿವಿಧ ಬೆಳೆಗಳಿಗೆ ಮೌಲ್ಯವರ್ಧನೆ ಮತ್ತು ಸಂಸ್ಕರಣೆ ಕೈಗೊಳ್ಳಲು ಕೈಗಾರಿಕೆಗಳನ್ನು ಸ್ಥಾಪಿಸಲು ಕೈಗಾರಿಕೆ ನಿವೇಶನಗಳನ್ನು ಕೆಐಎಡಿಬಿ ಅಥವಾ ಸೂಕ್ತ ಸರ್ಕಾರಿ ಸಂಸ್ಥೆಯ ಮುಖಾಂತರ ಅಭಿವೃದ್ಧಿಪಡಿಸಿ ಉದ್ದಿಮೆದಾರರಿಗೆ ಹಂಚಿಕೆ ಮಾಡಲು ತೀರ್ಮಾನಿಸಲಾಯಿತು.

ಅಲ್ಲದೇ, ಆಹಾರ ಪಾರ್ಕಿನಲ್ಲಿ ರೈತರಿಗೆ ಹಾಗೂ ರೈತ ಉತ್ಪಾದಕ ಸಂಸ್ಥೆಗಳಿಗೆ ಹಾಗೂ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಅನುಕೂಲವಾಗುವಂತೆ ಸಾಮಾನ್ಯ ಮೂಲಭೂತ ಸೌಕರ್ಯಗಳಾದ ಶೀತಲಗೃಹಗಳು , ಗೋದಾಮುಗಳು , ಸಂಸ್ಕರಣೆ ಘಟಕಗಳು , ಪ್ಯಾಕಿಂಗ್ ಘಟಕಗಳು , ಪರೀಕ್ಷೆಯ ಲ್ಯಾಬೊರೇಟರಿಗಳು ಹಾಗೂ ಪ್ರಮಾಣೀಕರಣ ಕೇಂದ್ರಗಳನ್ನು ಸರ್ಕಾರಿ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲು ತೀರ್ಮಾನಿಸಲಾಯಿತು.

ನಿಮ್ಮ ದನ-ಕರುಗಳಿಗೆ ಚರ್ಮ ರೋಗ ಇದೆಯೇ? ಇದನ್ನು ಓದಿ

ಹಸು ಸಾಕಾಣಿಕೆಗೆ ₹60,249, ಎಮ್ಮೆ ಸಾಕಾಣಿಕೆಗೆ ₹40,783 ಸಹಾಯಧನ!

ಆಹಾರ ಕರ್ನಾಟಕ ನಿಯಮಿತ ಸಂಸ್ಥೆಯಿಂದ ವಿಜಯಪುರ ಜಿಲ್ಲೆಯ ಇಟ್ಟಂಗಿಹಾಳದಲ್ಲಿ ಸ್ಥಾಪಿಸಲಾಗುತ್ತಿರುವ ಆಹಾರ ಪಾರ್ಕಿನ ಕಾಂಪೌಂಡ್ ಗೋಡೆ ನಿರ್ಮಾಣಕ್ಕೆ ಟೆಂಡರ್‌ ಅನುಮೋದನೆ ಮೂಲಕ ಚಾಲನೆ ನೀಡಲಾಯಿತು.

2022-23ರ ಬಜೆಟ್ ಘೋಷಣೆಯಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಿನಿ ಆಹಾರ ಪಾರ್ಕ್‌ಗಳನ್ನು ಸ್ಥಾಪಿಸುವ ಉದ್ದೇಶದಿಂದ ಮೊದಲನೇ ಹಂತದಲ್ಲಿ ಜಮೀನನ್ನು ಗುರುತಿಸಲು ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸೂಕ್ತ ನಿರ್ದೇಶನವನ್ನು ಈಗಾಗಲೆ ನೀಡಲಾಗಿದೆ.

ಕುರಿ ಸಾಕಾಣಿಕೆಯಲ್ಲಿ ಲಸಿಕೆಗಳ ಮಹತ್ವ..! ನೀವು ಇದರ ಬಗ್ಗೆ ತಿಳಿದಿರಲೇಬೇಕು..

ಮೇಕೆ ಸಾಕಾಣಿಕೆಗೆ ಲಾಭದಾಯಕವಾದ ತಳಿಗಳು ಯಾವು..? ಇಲ್ಲಿದೆ ಮಾಹಿತಿ

ಸರ್ಕಾರಿ ಜಮೀನು ಲಭ್ಯತೆ ಇಲ್ಲದ ಪಕ್ಷದಲ್ಲಿ ಬಳಕೆಯಾಗದೇ ಇರುವ ಕೃಷಿ / ತೋಟಗಾರಿಕೆ ವಿಶ್ವವಿದ್ಯಾನಿಲಯಗಳ , ಕೃಷಿ ಇಲಾಖೆಯ ಫಾರಂಗಳು ಹಾಗೂ ಕರ್ನಾಟಕ ರಾಜ್ಯ ಬೀಜ ನಿಗಮದ ಜಮೀನನ್ನು ಗುರುತಿಸಿ, ಈ ಉದ್ದೇಶಕ್ಕೆ ಬಳಸಿಕೊಳ್ಳಲು ತೀರ್ಮಾನಿಸಲಾಯಿತು.

ಸಭೆಯಲ್ಲಿ ಕೃಷಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಶ್ರೀ ಶಿವಯೋಗಿ ಕಳಸದ, ಕೃಷಿ ಇಲಾಖಾ ಆಯುಕ್ತರಾದ ಶ್ರೀ ಶರತ್, ನಿರ್ದೇಶಕಿ ಶ್ರೀಮತಿ ನಂದಿನಿ ಕುಮಾರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Published On: 20 June 2022, 03:07 PM English Summary: Karnataka : Refined industries in each district

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.