1. ಸುದ್ದಿಗಳು

SSLC ಪರೀಕ್ಷೆ ಬರೆದ ಮಕ್ಕಳೆಲ್ಲಾ ಪಾಸ್, ನಿಮ್ಮ ರಿಸಲ್ಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ

ಪ್ರಸ್ತುತ ಶೈಕ್ಷಣಿಕ ಸಾಲಿನ ಎಸ್ ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಶೇ.99.9ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಓರ್ವ ವಿದ್ಯಾರ್ಥಿ ಮಾತ್ರ ಗೈರು ಹಾಜರಾತಿಯಿಂದ ಅನುತೀರ್ಣಗೊಂಡಿದ್ದಾನೆ. ನಗರದಲ್ಲಿಂದು ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, 4,70,160 ವಿದ್ಯಾರ್ಥಿಗಳು ಉತ್ತೀರ್ಣರಾದ್ದಾರೆ. ಆದರೆ, ಓರ್ವ ವಿದ್ಯಾರ್ಥಿ ಮಾತ್ರ ಪರೀಕ್ಷೆಗೆ ಗೈರಾಗಿದ್ದು, ಉಳಿದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣ ಎಂದು ಪ್ರಕಟಿಸಿದರು.

ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ sslc.Karnataka.gov.in, ಅಥವಾ‌ examresults.net ಮತ್ತು indiaresults.com ನಲ್ಲಿ ಫಲಿತಾಂಶ ನೋಡಬಹುದಾಗಿದೆ.

2,50,317 ವಿದ್ಯಾರ್ಥಿಗಳು ಎ ಗ್ರೇಡ್, 2,87,694 ವಿದ್ಯಾರ್ಥಿಗಳು ಬಿ ಗ್ರೇಡ್ ಹಾಗೂ 1,1,610 ವಿದ್ಯಾರ್ಥಿಗಳು ಸಿ ಗ್ರೇಡ್ ಪಡೆದುಕೊಂಡಿದ್ದಾರೆ.ಇದರಲ್ಲಿ ಶೇ.9ರಷ್ಟು ವಿದ್ಯಾರ್ಥಿಗಳು ಕೃಪಾಂಕ ಪಡೆದು ಉತ್ತೀರ್ಣ ಆಗಿದ್ದಾರೆ. 13 ವಿದ್ಯಾರ್ಥಿಗಳಿಗೆ ವಿಷಯವೊಂದಕ್ಕೆ ಗರಿಷ್ಟ 28 ಕೃಪಾಂಕ ನೀಡಿ ಪಾಸ್ ಮಾಡಲಾಗಿದೆ ಎಂದು ತಿಳಿಸಿದರು.

ಅದೇ ರೀತಿ, 157 ಮಕ್ಕಳು 625 ಕ್ಕೆ 625 ಅಂಕ ಪಡೆದಿದ್ದಾರೆ,   289 ವಿದ್ಯಾರ್ಥಿಗಳು 625ಕ್ಕೆ 623 ಅಂಕ ಪಡೆದಿದ್ದರೆ, ಇಬ್ಬರಿಗೆ 622 ಅಂಕ ಸಿಕ್ಕಿದೆ. 621 ಅಂಕ 449 ವಿದ್ಯಾರ್ಥಿಗಳು ಅಂಕ ಪಡೆದಿದ್ದಾರೆ. 28 ವಿದ್ಯಾರ್ಥಿಗಳು 620 ಅಂಕ  ಪಡೆದಿದ್ದಾರೆ.ಅಲ್ಲದೆ, ಪ್ರಥಮ ಭಾಷೆ ಕನ್ನಡದಲ್ಲಿ 25,702 ಮಕ್ಕಳು 125ಕ್ಕೆ 125ಕ್ಕೆ ಅಂಕ ಪಡೆದಿದ್ದಾರೆ.

ದ್ವಿತೀಯ 36,628 ವಿದ್ಯಾರ್ಥಿಗಳು, ತೃತೀಯ ಭಾಷೆ 36,776, ಗಣಿತ 6,321, ವಿಜ್ಞಾನ 3,649, ಸಮಾಜ ವಿಜ್ಞಾನ 9,367 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಪಡೆದಿದ್ದಾರೆ ಎಂದು ವಿವರಿಸಿದರು.

ಈ ಬಾರಿ ಕೊರೊನಾ ಆತಂಕದ ನಡುವೆಯೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ನಡೆಸುವಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ಯಶ್ವಸಿಯಾಗಿತ್ತು. 2 ದಿನಗಳ ಕಾಲ ಆರು ವಿಷಯಗಳ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಈ ಬಾರಿ 8.76 ಲಕ್ಷ ವಿದ್ಯಾರ್ಥಿಗಳು ಎಸ್ಎಸ್ಎಲ್ ಸಿ ಪರೀಕ್ಷೆ ಬರೆದಿದ್ದರು. ಒಎಂಆರ್ ಉತ್ತರ ಪತ್ರಿಕೆಗಳನ್ನು ಬಳಸಲಾಗಿತ್ತು. ಬಹು ಆಯ್ಕೆ ಪ್ರಶ್ನೆ ಪತ್ರಿಕೆ ಪರಿಚಯಿಸಲಾಗಿತ್ತು. ಈ ಒಎಂಆರ್ ಶೀಟ್ ಡಿಜಿಟಲ್ ಸ್ಕ್ಯಾನಿಂಗ್‌ಗೆ ಕಳುಹಿಸಿ ನಂತರ ಮೌಲ್ಯಮಾಪನ ಮಾಡಿ ಫಲಿತಾಂಶ ಪ್ರಕಟಿಸಲಾಗಿದೆ.

ಫಲಿತಾಂಶ ನೋಡುವುದು ಹೇಗೆ?:

ವಿದ್ಯಾರ್ಥಿಗಳ ಮೊಬೈಲ್ ನಂಬರ್ ಗಳಲ್ಲಿ ರಿಸಲ್ಟ್ ನೋಡಬಹುದು. ಅಥವಾ ಈ ವೆಬ್ ಸೈಟ್ ಗಳಲ್ಲಿ ಪಡೆದುಕೊಳ್ಳಬಹುದು. www.kseeb.kar.nic.in ಹಾಗೂ www.karresults.nic.in ಫಲಿತಾಂಶ ಪ್ರಕಟ

ವೆಬ್‌ಸೈಟ್‌ನಲ್ಲಿ ತೆರೆದುಕೊಂಡ ಪುಟದಲ್ಲಿ ವಿದ್ಯಾರ್ಥಿಗಳು ರಿಜಿಸ್ಟರ್ ಸಂಖ್ಯೆ ಹಾಗೂ ಜನ್ಮ ದಿನಾಂಕ ಮಾಹಿತಿ ಒದಗಿಸಿ ಕ್ಲಿಕ್ ಮಾಡಿದರೆ ಫಲಿತಾಂಶದ ಮಾಹಿತಿ ದೊರೆಯುತ್ತದೆ. ಈ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಂಗಳೂರು ಉತ್ತರ ಪ್ರಥಮ, ಬಳ್ಳಾರಿ ಕೊನೆ ಸ್ಥಾನ ಪಡೆದಿದೆ.

Published On: 09 August 2021, 08:31 PM English Summary: Karnataka SSLC Result 2021 declared,

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.