News

ರಾಜ್ಯದ 2 ವಿಧಾನಸಭೆ, 1 ಲೋಕಸಭೆ ಉಪ ಚುನಾವಣೆ ದಿನಾಂಕ ಪ್ರಕಟ

17 March, 2021 8:56 AM IST By:
Election

ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳು ಹಾಗು ಒಂದು ಲೋಕಸಭಾ ಕ್ಷೇತ್ರದ ಉಪಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ.

ಬೆಳಗಾವಿ ಲೋಕಸಭೆ ಮತ್ತು ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನಸಭೆ ಕ್ಷೇತ್ರ ಗಳಿಗೆ ಉಪ ಚುನಾವಣೆ ಏಪ್ರಿಲ್‌ 17ರಂದು ಮತದಾನ ನಡೆಯಲಿದೆ. ಮೇ 2ರಂದು ಮತ ಎಣಿಕೆ ನಡೆಯಲಿದೆ.

ಮಾರ್ಚ್ 23ರಂದು ಉಪ ಚುನಾವಣೆಯ ಅಧಿಸೂಚನೆ ಪ್ರಕಟವಾಗಲಿದ್ದು, ಮಾರ್ಚ್ 30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. 31ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂದಕ್ಕೆ ಪಡೆಯಲು ಏಪ್ರಿಲ್‌ 3 ಕೊನೆಯ ದಿನವಾಗಿದೆ.

ಚುನಾವಣೆ ಘೋಷಣೆ ಆದ ದಿನದಿಂದಲೇ ಮಾದರಿ ನೀತಿಸಂಹಿತೆ ಜಾರಿಯಲ್ಲಿರಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದೆ.

ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಕಾಂಗ್ರೆಸ್ ಶಾಸಕರಾಗಿದ್ದ ಪ್ರತಾಪ್ ಗೌಡ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ತದನಂತರ ಅವರನ್ನು ಸುಪ್ರೀಂಕೋರ್ಟ್ ಅನರ್ಹಗೊಳಿಸಿತ್ತು. ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ನಾರಾಯಣರಾವ್ ಅವರು ಅವರಿಂದ ನಿಧನರಾಗಿದ್ದರು. ಬೆಳಗಾವಿ ಲೋಕಸಭಾ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಕೇಂದ್ರ ರೈಲ್ವೆ ಸಚಿವ ಸುರೇಶ್ ಅಂಗಡಿ ಅವರು ವರವನು ಸೋಂಕಿನಿಂದ ನಿಧನರಾಗಿದ್ದರು.

ಇತ್ತೀಚೆಗಷ್ಟೇ ನಿಧನರಾದ ಸಿಂದಗಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಂ ಸಿ ಮನಗೂಳಿ ಅವರಿಂದ ತೆರವಾದ ಸ್ಥಾನಕ್ಕೆ ಚುನಾವಣೆ ದಿನಾಂಕ ಘೋಷಣೆ ಮಾಡಿಲ್ಲ.

ಆಂಧ್ರಪ್ರದೇಶದ ತಿರುಪತಿ ಲೋಕಸಭೆ ಕ್ಷೇತ್ರ ಹಾಗೂ ವಿವಿಧ ರಾಜ್ಯ ಗಳ ಇತರ 12 ವಿಧಾನಸಭೆ ಕ್ಷೇತ್ರಗಳಿಗೂ ಏಪ್ರಿಲ್‌ 17ರಂದೇ ಉಪ ಚುನಾವಣೆ ನಡೆಯಲಿದೆ.

ಮಾರ್ಚ್ 23ರಂದು ಅಧಿಸೂಚನೆ ಪ್ರಕಟ

ಮಾರ್ಚ್ 30 ನಾಮಪತ್ರ ಸಲ್ಲಿಸಲು ಕಡೆಯ ದಿನ

ಮಾರ್ಚ್ 31ರಂದು ನಾಮಪತ್ರ ಪರಿಶೀಲನೆ

ಏಪ್ರಿಲ್ 4 ರಂದು ನಾಮಪತ್ರ ವಾಪಸ್ ಪಡೆಯಲು ಕಡೆಯದಿನ

ಏಪ್ರಿಲ್ 17ರಂದು ಮತದಾನ ನಿಗದಿ

ಮೇ. 2 , ರಂದು ಮತ ಎಣಿಕೆ

ಮೂರು ಕ್ಷೇತ್ರಗಳ ಅಭ್ಯರ್ಥಿಆಕಾಂಕ್ಷಿಗಳ ಪಟ್ಟಿ ಇಂತಿದೆ


ಬೆಳಗಾವಿ ಲೋಕಸಭೆ ಉಪಚುನಾವಣೆ


ಬಿಜೆಪಿ
ಸಚಿವ ಶೆಟ್ಟರ್ ಸೊಸೆ ಶ್ರದ್ಧಾ ಶೆಟ್ಟರ್.
ಸಚಿವ ಉಮೇಶ್ ಕತ್ತಿ ಸಹೋದರ ರಮೇಶ್ ಕತ್ತಿ.
ಪ್ರಮೋದ್ ಮುತಾಲಿಕ್.
ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ.
ಎಂಎಲ್ ಸಿ ಮಹಾಂತೇಶ ಕವಟಗಿಮಠ.

ಕಾಂಗ್ರೆಸ್
ಸತೀಶ್ ಜಾರಕಿಹೊಳಿ
ಚನ್ನರಾಜ್ ಹೆಬ್ಬಾಳ್ಕರ್
ಅಂಜಲಿ ನಿಂಬಾಳ್ಕರ್
ಲಕ್ಷ್ಮೀ ಹೆಬ್ಬಾಳ್ಕರ್

ಬಸವಕಲ್ಯಾಣ ವಿಧಾನಸಭೆ ಉಪಚುನಾವಣೆ
ಬಿಜೆಪಿ

ಎಂಜಿ ಮುಳೆ
ಶರಣು ಸಲಗಾರ್
ಬಿ.ವೈ.ವಿಜಯೇಂದ್ರ

ಕಾಂಗ್ರೆಸ್
ಮಲ್ಲಮ್ಮ ನಾರಾಯಣ್ ರಾವ್
ವಿಜಯ್ ಸಿಂಗ್

ಮಸ್ಕಿ ವಿಧಾನಸಭೆ ಉಪಚುನಾವಣೆ

ಬಿಜೆಪಿ
ಪ್ರತಾಪ್ ಗೌಡ ಪಾಟೀಲ್


ಕಾಂಗ್ರೆಸ್
ಬಸನಗೌಡ ತುರುವೀಹಾಳ