News

ರೈತರೇ ನಿಮ್ಮಲ್ಲಿ ಈ ಕಾರ್ಡ್‌ ಇದ್ದರೆ ನಿಮ್ಮ ಕಚೇರಿ ಕೆಲಸಗಳು ಇನ್ನು ಸುಲಭ

05 September, 2022 11:21 AM IST By: Maltesh
Karnataka Swabhimani Card

ರೈತರು ಕೃಷಿ ಅಥವಾ ತೋಟಗಾರಿಕೆ ಬೆಳೆಗಳನ್ನು ಬೆಳೆಯುವುದು, ರೇಷ್ಮೆ, ಡೈರಿ, ಪೌಲ್ಟ್ರಿ, ಮೀನುಗಾರಿಕೆ ಮುಂತಾದ ಕೃಷಿ ಹಾಗೂ ಕೃಷಿ ಸಂಬಂಧಿತ ವಿಭಿನ್ನ ಚಟುವಟಿಕೆಗಳನ್ನು ಕೈಗೊಳ್ಳುತ್ತಾರೆ. ಹೀಗಾಗಿ ರೈತರು ಸಂಬಂಧಿತ ಇಲಾಖೆಗಳಿಗೆ ಸಂಪರ್ಕಿಸಬೇಕಾಗುತ್ತದೆ. ಈ ಎಲ್ಲಾ ಇಲಾಖೆಗಳು ವಿವಿಧ ಯೋಜನೆಯಡಿಯಲ್ಲಿ ಪ್ರಯೋಜನಗಳನ್ನು ನೀಡಲು ರೈತರಿಂದ ಅಗತ್ಯ ಮೂಲ ದಾಖಲೆಗಳನ್ನು ಪಡೆಯುವುದು ಸಾಮಾನ್ಯ ಪರಿಪಾಠವಾಗಿದೆ.

ಸೆಪ್ಟೆಂಬರ್‌ನಲ್ಲಿ ಬೆಳೆಯಲು ಟಾಪ್ 10 ಬೆಳೆಗಳು..ಭಾರೀ ಆದಾಯ ಫಿಕ್ಸ್‌

ರೈತರು ಪ್ರತಿ ವರ್ಷ ವಿವಿಧ ಇಲಾಖೆಗಳಿಗೆ ಒಂದೇ ರೀತಿಯ ದಾಖಲೆಗಳನ್ನು ಸಲ್ಲಿಸುತ್ತಾರೆ ಹಾಗೂ ಕೆಲವೊಮ್ಮೆ ಒಂದೇ ಇಲಾಖೆಯಲ್ಲಿ ಪ್ರತಿ ಯೋಜನೆಗೆ ಪ್ರತ್ಯೇಕ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ.

ಆಯೋಜಿತ ಮತ್ತು ಪರೀಕ್ಷಿತ ರೈತ ದತ್ತಾಂಶವು ರೈತರು ಪ್ರಯೋಜನಗಳನ್ನು ಪಡೆಯಲು ಇಲಾಖೆಗಳಿಗೆ ಅಲೆದಾಡುವುದನ್ನು ತಪ್ಪಿಸುತ್ತದೆ. ಇದಲ್ಲದೆ ಇಲಾಖೆಗಳು ಸಾಂಪ್ರದಾಯಿಕ ಪದ್ಧತಿ ಮೂಲಕ ಯೋಜನಾ ಅನುಷ್ಠಾನಗೊಳಿಸುವಾಗ ಎದುರಾಗುವ ಸಮಸ್ಯೆಗಳಿಂದ ಹೊರಬರಲು ನೆರವಾಗುತ್ತವೆ. ಈ ನಿಟ್ಟಿನಲ್ಲಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು NIC ಸಹಯೋಗದೊಂದಿಗೆ  FRUITS(Farmer Registration and Unified beneficiary InformaTion System FRUITS) ಎಂಬ ಸಾಫ್ಟ್‌ವೇರ್‌ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಿದೆ. ಇದರ ಸಹಯೋಗದಲ್ಲಿ ರೈತರಿಗೆ ಸ್ವಾಭಿಮಾನಿ ಕಾರ್ಡ್‌ ಅನ್ನು ವಿತರಿಸಲಾಗುತ್ತದೆ.

ಈ ರಾಜ್ಯಗಳಲ್ಲಿ ಭಾರೀ ಮಳೆ ಮತ್ತು ಮಿಂಚಿನ ಬಗ್ಗೆ ಎಚ್ಚರಿಕೆ ನೀಡಿದ IMD

ಸ್ವಾಭಿಮಾನಿ ರೈತ" ಗುರುತಿ‌ನ ಚೀಟಿ ಎಂದರೇನು?

ರಾಜ್ಯದ ಇ - ಆಡಳಿತ ಇಲಾಖೆಯು ಎನ್.ಐ.ಸಿ ಮೂಲಕ ರಾಜ್ಯದ ರೈತರ ವಿವರಗಳನ್ನು ದಾಖಲಿಸಲು FRUITS ತಂತ್ರಾಂಶವನ್ನು ಅಭಿವೃದ್ಧಿ ಪಡಿಸಲಾಗಿದೆ. ಪ್ರತಿಯೊಬ್ಬ ರೈತರಿಗೆ ಒಂದು ಪ್ರತ್ಯೇಕ ಗುರುತಿನ ಸಂಖ್ಯೆಯನ್ನು ನೀಡುವುದು FRUITS ತಂತ್ರಾಂಶದಲ್ಲಿ ರೈತರ ನೋಂದಣಿಯ ಉದ್ದೇಶವಾಗಿರುತ್ತದೆ.

ಸದರಿ ಗುರುತಿನ ಸಂಖ್ಯೆಯ ಆಧಾರದಲ್ಲಿ ರೈತರು ಈ ತಂತ್ರಾಂಶ ಬಳಸುವ ಎಲ್ಲಾ ಇಲಾಖೆಗಳ ಸೌಲಭ್ಯಗಳನ್ನು ಪಡೆಯಬಹುದಾಗಿರುತ್ತದೆ . FRUITS ತಂತ್ರಾಂಶದಲ್ಲಿ ರೈತರ ನೋಂದಣಿಯು ಜೂನ್ 2018 ರಿಂದ ಪ್ರಾರಂಭವಾಗಿದೆ . ಕೃಷಿ ತೋಟಗಾರಿಕೆ , ರೇಷ್ಮೆ , ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಗಳಲ್ಲಿ ರೈತರನ್ನು FRUITS ತಂತ್ರಾಂಶದಲ್ಲಿ ನೋಂದಾಯಿಸಲಾಗುತ್ತಿದೆ .

ಈ ತಂತ್ರಾಂಶದಲ್ಲಿ ರೈತರ ನೋಂದಾಣಿಗಾಗಿ ರೈತರ ಗುರುತು , ವಿಳಾಸ , ಭೂ ಹಿಡುವಳಿ , ಆಧಾರ್ ಗುರುತಿನ ಸಂಖ್ಯೆಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ . ಈ ಎಲ್ಲಾ ಮಾಹಿತಿಯನ್ನಯ FRUITS ನೋಂದಾಣಿ ಸಂಖ್ಯೆ ಆಧಾರಿತ ಗುರುತಿನ ಚೀಟಿಯನ್ನು ನೀಡಲು ಪ್ರಸ್ತಾಪಿಸಲಾಗಿದೆ .ಈ ತಂತ್ರಾಂಶವನ್ನು ಕೃಷಿ ಹಾಗೂ ಕೃಷಿ ಸಂಬಂಧಿತ ಇಲಾಖೆಗಳಲ್ಲಿ ಒಂದು ಬಾರಿ ಮಾತ್ರ ರೈತರ ನೋಂದಣಿ ಮಾಡಲು ಅಭಿವೃದ್ಧಿ ಪಡಿಸಲಾಗಿದೆ.

Teachers' Day: ನಿಮ್ಮ ನೆಚ್ಚಿನ ಶಿಕ್ಷಕರಿಗೆ  ನೀಡಬಹುದಾದ ಅತ್ಯುತ್ತಮ ಗಿಫ್ಟ್‌ಗಳ ಲಿಸ್ಟ್‌ ಇಲ್ಲಿದೆ

ತಂತ್ರಾಂಶದಲ್ಲಿ ಆಧಾರ್ ಕಾರ್ಡ್ , ಪಹಣಿ ( RTC ) , ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ರೈತರ ಜಾತಿ ಪ್ರಮಾಣ ಪತ್ರ , ಬ್ಯಾಂಕ್ ವಿವರ , ಫೋಟೊ , ಇತ್ಯಾದಿ ದಾಖಲಾತಿಗಳನ್ನು ಪರಿಶೀಲಿಸಿ ರೈತರ ನೋಂದಣಿ ಮಾಡಲಾಗುತ್ತದೆ.

ಗುರುತಿನ ಚೀಟಿ ಲಾಭ: ಇದರಿಂದ ರೈತರು ಬೆಳೆ ಸಾಲ, ಪಿಎಂ ಕಿಸಾನ್ ಮುಂತಾದ ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ಕಚೇರಿಗಳಲ್ಲಿ ವ್ಯಯಿಸಬೇಕಾದ ಸಮಯವನ್ನು ಉಳಿಸಬಹುದು. ಹಾಗೂ ರೈತರಿಗೆ ಇದು ಒಂದು ವ್ಯವಹಾರಿಕ ಗುರುತಿನ ಚೀಟಿಯಾಗುತ್ತದೆ