1. ಸುದ್ದಿಗಳು

ಮೋದಿಯವರ 'ಪರೀಕ್ಷಾ ಪೇ ಚರ್ಚಾ'ಗೆ ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳು ಆಯ್ಕೆ

ಪ್ರಧಾನಮಂತ್ರಿ ನರೇಂದ್ರ ಮೋದಿಯ ನಡೆಸಿರುವ ಪರೀಕ್ಷಾ ಪೇ ಚರ್ಚಾ ಸಂವಾದ ಕಾರ್ಯಕ್ರಮಕ್ಕೆ ರಾಜ್ಯದ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.  ಹೌದು ಉಡುಪಿ ಜಿಲ್ಲೆಯ ಆರ್ಡಿಯ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಪ್ರೌಢಶಾಲೆ ವಿದ್ಯಾರ್ಥಿನಿ ಅನುಷ ಹಾಗೂ ಹೊಸಕೋಟೆ ತಾಲೂಕಿನ ತಾವರಕೆರೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಮನೋಜ್ ಆಯ್ಕೆಯಾಗಿದ್ದಾರೆ.

ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜೊತೆ ‘ಪರೀಕ್ಷಾ ಪೇ ಚರ್ಚಾ’ ಸಂವಾದದಲ್ಲಿ ಭಾಗವಹಿಸಲು ಆಯ್ಕೆಯಾದ ದೇಶದ ಮೂವತ್ತು ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯದ ಈ ವಿದ್ಯಾರ್ಥಿಗಳು ಇದ್ದಾರೆ. ಈ ಇಬ್ಬರಿಗೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.

ಅನುಷಾ ಜೊತೆ ದೂರವಾಣಿಯಲ್ಲಿ ಮಾತನಾಡಿದ ಸುರೇಶ್‌ ಕುಮಾರ್, ಆಕೆಯ ಕುಟುಂಬ, ತಂದೆ-ತಾಯಿ ಕುರಿತು ಮಾಹಿತಿ ಪಡೆದರು.

ಪ್ರಧಾನಿ ಜೊತೆ ಸಂವಾದಕ್ಕೆ ಆಯ್ಕೆಯಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿ, ಚೆನ್ನಾಗಿ ಓದಿ ಶಾಲೆಗೆ ಹಾಗೂ ರಾಜ್ಯಕ್ಕೆ ಕೀರ್ತಿ ತರುವಂತೆ ಹಾರೈಸಿದರು.

ಮನೋಜ್‌ ಕಲಿಯುವ ಶಾಲೆಗೆ ಭೇಟಿ ಮಾಡಿದ ಸಚಿವರು, ಪ್ರಧಾನಿ ಜೊತೆ ಆತ್ಮವಿಶ್ವಾಸದಿಂದ ಮಾತನಾಡುವಂತೆ ಸಲಹೆ ನೀಡಿದರು. ಶಾಲೆಯ ಇತರ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಸಚಿವರು, ಪರೀಕ್ಷೆ, ಶಾಲೆ, ತರಗತಿ, ಪಠ್ಯ, ಆರೋಗ್ಯ ರಕ್ಷಣೆ, ಸಾಂಕ್ರಾಮಿಕ ರೋಗಗಳಿಂದ ದೂರ ಇರುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು.

ಕುಮಾರಿ ಅನುಷಾ ಒಂದು ಬಡ ಕುಟುಂಬಕ್ಕೆ ಸೇರಿದ್ದು, ಅವರ ತಂದೆ ಗಾರೆ ಕೆಲಸ ಮಾಡುವವರು. ಅದೇ ರೀತಿ ವಿದ್ಯಾರ್ಥಿ ಮನೋಜ ಸಹ ಬಡ ಕುಟುಂಬಕ್ಕೆ ಸೇರಿದ್ದು, ಅವರ ತಂದೆ ಹೂವು ಮಾರುವ ವ್ಯಾಪಾರ ಮಾಡುತ್ತಾರೆ ಎಂದು ಸಚಿವರು ತಿಳಿಸಿದ್ದಾರೆ. ಈ ಇಬ್ಬರು ವಿದ್ಯಾರ್ಥಿಗಳು ನಮ್ಮ ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ ಎಂದು ಸುರೇಶ ಕುಮಾರ ಸಂತಸ ವ್ಯಕ್ತಪಡಿಸಿದ್ದಾರೆ.

‘ಇಬ್ಬರು ವಿದ್ಯಾರ್ಥಿಗಳೂ ಗ್ರಾಮೀಣ ಭಾಗದವರು. ಅನುಷಾಳ ತಂದೆ ಗಾರೆ ಕೆಲಸಗಾರರಾಗಿದ್ದರೆ, ಮನೋಜ್‌ನ ತಂದೆ ಹೂವಿನ ವ್ಯಾಪಾರಿ. ಬಡತನದ ಕುಟುಂಬಕ್ಕೆ ಸೇರಿದವರು. ಪ್ರತಿಭೆ ಎಲ್ಲಿದ್ದರೂ ಅರಳುತ್ತದೆ ಎಂಬುದಕ್ಕೆ ಈ ವಿದ್ಯಾರ್ಥಿಗಳು ಸಾಕ್ಷಿ’ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ಗ್ರಾಮೀಣ ಪರಿಸರದಿಂದ ಬಂದವರು. ಪ್ರತಿಭೆ ಎಲ್ಲಿದ್ದರೂ ಅರಳುತ್ತದೆ ಎಂಬುದಕ್ಕೆ ಈ ಮಕ್ಕಳೇ ಸಾಕ್ಷಿ. ಈ ಇಬ್ಬರೂ ವಿದ್ಯಾರ್ಥಿಗಳು ನಮ್ಮ ರಾಜ್ಯಕ್ಕೆ ಅಭಿಮಾನ ಮೂಡುವಂತೆ ಮಾಡಿದ್ದಾರೆ ಎಂದು ಸುರೇಶ್ ಕುಮಾರ್ ಹೇಳಿದರು.

Published On: 20 March 2021, 03:10 PM English Summary: Karnataka two students selected to pm modi pariksha pe charcha

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.