ಕಲ್ಯಾಣ ಕರ್ನಾಟಕ ವಿಭಾಗದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ(ಯು.ಪಿ.ಎಸ್.ಸಿ/ ಕೆ.ಎ.ಎಸ್/ಗ್ರೂಪ್-ಸಿ/ ಬ್ಯಾಂಕಿಂಗ್/ ಎಸ್.ಎಸ್.ಸಿ ಮತ್ತು ಆರ್.ಆರ್.ಬಿ)ಗಳ ಪೂರ್ವ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕಲಬುರಗಿ ವಿಭಾಗದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದಿಂದ 2020-21ನೇ ಸಾಲಿನ ಕಲ್ಯಾಣ ಕರ್ನಾಟಕ ವಿಭಾಗದ ಅಭ್ಯರ್ಥಿಗಳಿಗೆ ಐ.ಎ.ಎಸ್., ಕೆ.ಎ.ಎಸ್., ಆರ್.ಆರ್.ಬಿ., ಬ್ಯಾಂಕಿಂಗ್ ಹಾಗೂ ಎಸ್.ಎಸ್.ಸಿ. ಗ್ರೂಪ್ “ಸಿ” ಹುದ್ದೆಗಳ ನೇಮಕಾತಿ ಸಂಬಂಧ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುತ್ತಿದೆ. ಇದಕ್ಕಾಗಿ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಅವಧಿಯನ್ನು ಇದೇ ಫೆಬ್ರವರಿ 10 ರವರೆಗೆ ವಿಸ್ತರಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಕಲಬುರಗಿ ವಿಭಾಗದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದ http://www.kkhracs.com ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ 2021ರ ಫೆಬ್ರವರಿ 10ರ ಸಂಜೆ 5.30 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು.
ಈ ಹಿಂದೆ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು ಫೆಬ್ರವರಿ 5 ರಂದು ನಿಗದಿಪಡಿಸಲಾಗಿತ್ತೆಂದು ಕಲಬುರಗಿ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕøತಿಕ ಸಂಘದ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದ http://www.kkhracs.com ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಸಂಘದ ವೆಬ್ ಪೇಜ್ ತೆರೆಯುತ್ತದೆ. ಅಲ್ಲಿ ಲಾಗಿನ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಮೊಬೈಲ್ ನಂಬರ್ ಹಾಕಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿ ತರಬೇತಿಯ ಸೌಲಭ್ಯ ಪಡೆಯಬಹುದು.
Share your comments