ರೈತರಿಗೆ ಪ್ರಮುಖ ಸುದ್ದಿಗಳನ್ನು ತಲುಪಿಸುವ ಉದ್ದೇಶದಿಂದ ಕೃಷಿ ಜಾಗರಣ ಅಗ್ರಿನ್ಯೂಸ್ ಪರಿಚಯಿಸಿದೆ. ಇಂದಿನ ಪ್ರಮುಖ ಸುದ್ದಿಗಳು ಈ ರೀತಿ ಇವೆ.
- ಬಿಯರ್ ಮಾರಾಟ: ಸರ್ಕಾರಕ್ಕೆ 800 ಕೋಟಿ ಹೆಚ್ಚುವರಿ ಆದಾಯ!
- ರಾಜ್ಯದ ವಿವಿಧೆಡೆ ಮುಂದುವರಿದ ಮಳೆ
- ಏಷ್ಯಾದಲ್ಲಿ ತಪಮಾನ ಪ್ರಮಾಣ ಗಣನೀಯ ಹೆಚ್ಚಳ!
- ಕೆಂಪೇಗೌಡ ವಿಮಾನ ನಿಲ್ದಾಣ; 2022-23ರಲ್ಲಿ 3.19 ಕೋಟಿ ಮಂದಿ ಪ್ರಯಾಣ!
- ಜನಸಂಖ್ಯೆಯಲ್ಲಿ ಭಾರತವೇ ನಂಬರ್ 1!
- ಬುಕ್ಕಿಂಗ್‌ಗಾಗಿ ಮೊಹಮ್ಮದ್ ಸಿರಾಜ್‌ಗೆ ಕರೆ: ವ್ಯಕ್ತಿ ಬಂಧನ!
ಸುದ್ದಿಗಳ ವಿವರ ಈ ರೀತಿ ಇದೆ ….
1.ರಾಜ್ಯದಲ್ಲಿ ಬಿಸಿಲಿನ ಝಳ ಹಾಗೂ ಚುನಾವಣೆ ಕಾವು ಹೆಚ್ಚಾಗುತ್ತಿದ್ದು, ಈ ನಡುವೆ ಬಿಯರ್ ಮಾರಾಟದಲ್ಲಿ ಹೊಸ ದಾಖಲೆ ಸೃಷ್ಟಿ ಆಗಿದೆ.
2021–22ನೇ ಸಾಲಿಗೆ ಹೋಲಿಸಿದರೆ ಪ್ರಸಕ್ತ ಸಾಲಿನಲ್ಲಿ ಬಿಯರ್ ಮಾರಾಟದಲ್ಲಿ ಶೇ 45ರಷ್ಟು ಏರಿಕೆಯಾಗಿದೆ.
2022–23ರ ಹಣಕಾಸು ವರ್ಷದಲ್ಲಿ 390.66 ಲಕ್ಷ ಕರ್ಟನ್ ಬಾಕ್ಸ್ ಬಿಯರ್ ಮಾರಾಟವಾಗಿದ್ದು,
ಅಬಕಾರಿ ಇಲಾಖೆಗೆ ಬರೋಬ್ಬರಿ 800 ಕೋಟಿ ಹೆಚ್ಚುವರಿ ಆದಾಯ ಸಂಗ್ರಹವಾಗಿದೆ.
-----------------
2. ರಾಜ್ಯದ ವಿವಿಧೆಡೆ ಒಣಹವೆ ಮುಂದುವರಿಯುವ ಜೊತೆಗೆ ಕೆಲವು ಜಿಲ್ಲೆಗಳಲ್ಲಿ ಗುರುವಾರ ಹಾಗೂ ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗಲಿದೆ.
ಇನ್ನು ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ
ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು ಹಾಗೂ ರಾಮನಗರ ಜಿಲ್ಲೆಯ
ಒಂದೆರಡು ಕಡೆ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
----------------
3. ಈ ಬಾರಿ ಏಷ್ಯಾದ ಹಲವು ದೇಶಗಳಲ್ಲಿ ತಾಪಮಾನ ಪ್ರಮಾಣದಲ್ಲಿ ಭಾರೀ ಹೆಚ್ಚಳವಾಗುತ್ತಿರುವುದು ವರದಿ ಆಗಿದೆ.
ಇನ್ನು ಭಾರತದಿಂದ ದಕ್ಷಿಣ ಚೀನಾ, ಥೈಲ್ಯಾಂಡ್‌ವರೆಗೆ ತಪಮಾನ ಪ್ರಮಾಣದಲ್ಲಿ ಗಣನೀಯ ಹೆಚ್ಚಳವಾಗಿದೆ.
ಭಾರತದ ಪ್ರಯಾಗರಾಜ್‌ನಲ್ಲಿ ಸೋಮವಾರ ತಾಪಮಾನ 44.6 ಡಿಗ್ರಿ ಸೆಲ್ಸಿಯಸ್ ತಲುಪಿದ್ದರೆ, ಬಾಂಗ್ಲಾದಲ್ಲಿ 40 ಡಿಗ್ರಿ ಸೆಲ್ಸಿಯಸ್ ಗಿಂತ
ಹೆಚ್ಚಿನ ತಾಪಮಾನ ದಾಖಲಾಗಿರುವುದು ವರದಿ ಆಗಿದೆ.
ಅಸಾಧಾರಣ ತಾಪಮಾನವನ್ನು ಏಷ್ಯದ ಇತಿಹಾಸದಲ್ಲಿ ಕೆಟ್ಟ ಏಪ್ರಿಲ್ ಹೀಟ್ ವೇವ್ ಎಂದು ಮಾಧ್ಯಮಗಳು ವರದಿ ಮಾಡಿವೆ.
ಇನ್ನು ಭಾರತದಲ್ಲಿ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ ಎಂದು ದಿ ಗಾರ್ಡಿಯನ್ ವರದಿ ತಿಳಿಸಿದೆ.
ಹವಾಮಾನ ಬಿಕ್ಕಟ್ಟು ಎದುರಿಸುತ್ತಿರುವ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ತಾಪಮಾನ 40ಡಿಗ್ರಿ
ಸೆಲ್ಸಿಯಸ್‌ಗಿಂತ ಹೆಚ್ಚಾಗಿರುವುದು ವರದಿ ಆಗಿದೆ. ಇದು 58 ವರ್ಷಗಳಲ್ಲಿ ದಾಖಲಾದ ಗರಿಷ್ಠ ತಾಪಮಾನವಾಗಿದೆ.
-----------------
4. ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವ ಪ್ರಯಾಣಿಕರ ಸಂಖ್ಯೆ ಗಣನೀಯ ಹೆಚ್ಚಳವಾಗಿದೆ.
2022-23ನೇ ಸಾಲಿನಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಬರೋಬ್ಬರಿ 3.19 ಕೋಟಿ ಜನ ಪ್ರಯಾಣಿಸಿದ್ದಾರೆ.
-----------------
5. ಭಾರತವು ಜನಸಂಖ್ಯೆಯಲ್ಲಿ ಇನ್ನು ಕೆಲವೇ ದಿನಗಳಲ್ಲಿ ಚೀನಾವನ್ನು ಹಿಂದಿಕ್ಕಲಿದೆ.
ವಿಶ್ವಸಂಸ್ಥೆ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಈ ವರ್ಷ ಚೀನಾವನ್ನು ಹಿಂದಿಕ್ಕಿ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ
ದೇಶವಾಗಿ ಭಾರತ ಹೊರಹೊಮ್ಮಲಿದೆ. ವಿಶ್ವ ಜನಸಂಖ್ಯಾ ವರದಿ-2023ಅನ್ನು ಯುನೈಟೆಡ್ ನೇಷನ್ಸ್ ಪಾಪ್ಯುಲೇಷನ್ ಫಂಡ್ ಪ್ರಕಟಿಸಿದೆ.
2023ರ ಕೊನೆಯಾಗುವುದರಲ್ಲಿ ನಮ್ಮ ಭಾರತದ ಜನಸಂಖ್ಯೆ 142.86 ಕೋಟಿ ತಲುಪಲಿದೆ.
ಇದೇ ವೇಳೆ ಚೀನಾದ ಜನಸಂಖ್ಯೆ 142.57 ಕೋಟಿ ಆಗಲಿದೆ.
ಇತ್ತೀಚಿನ ಮಾಹಿತಿಯ ಪ್ರಕಾರ, ಯುನೈಟೆಡ್ ಸ್ಟೇಟ್ಸ್ 34 ಕೋಟಿ ಜನಸಂಖ್ಯೆಯೊಂದಿಗೆ ಮೂರನೇ ಸ್ಥಾನದಲ್ಲಿದೆ.
-----------------
6. ಭಾರತೀಯ ತಂಡದ ಆಂತರಿಕ ಮಾಹಿತಿ ನೀಡುವಂತೆ ಬುಕ್ಕಿಯೊಬ್ಬರು ಸಂಪರ್ಕಿಸಿದ್ದಾರೆ ಎಂದು ಭಾರತ ತಂಡದ ಔಲರ್
ಹಾಗೂ ಆರ್‌ಸಿಬಿ ಆಟಗಾರ ಮೊಹಮ್ಮದ್ ಸಿರಾಜ್ ಅವರು ದೂರು ನೀಡಿದ್ದಾರೆ. ಈ ಸಂಬಂಧ ಸಿರಾಜ್
ಬಿಸಿಸಿಐನ ಭ್ರಷ್ಟಾಚಾರ ನಿಗ್ರಹ ಘಟಕಕ್ಕೆ ದೂರು ದಾಖಲಿಸಿದ್ದಾರೆ. ಈ ವರ್ಷದ ಪ್ರಾರಂಭದಲ್ಲಿ ಆಸ್ಟ್ರೇಲಿಯಾ
ಮತ್ತು ಭಾರತದ ಮ್ಯಾಚಿಂಗ್‌ಗೆ ಮುನ್ನ ಅಪರಿಚಿತ ವ್ಯಕ್ತಿ ಭೇಟಿಯಾಗಿದ್ದ ಎಂದು ಹೇಳಲಾಗಿದೆ.
ಸಿರಾಜ್ ಅವರು ಈ ಕೂಡಲೇ ದೂರು ನೀಡಿದ್ದ ಹಿನ್ನೆಲೆಯಲ್ಲಿ ಆಂಧ್ರ ಪೊಲೀಸರು ಆ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಇದೀಗ ಪ್ರಕರಣ ತಡವಾಗಿ ವರದಿ ಆಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
-----------------
7. ನಾಲ್ಕು ದಶಕಗಳ ಕಾಲ ಬಿಜೆಪಿಯಲ್ಲಿ ಗುರುತಿಸಿಕೊಂಡು ಹಾಗೂ ಬಿಜೆಪಿಯನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಇದೀಗ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಜಗದೀಶ ಶೆಟ್ಟರ್ ಅವರು ಕಾಂಗ್ರೆಸ್ ಸೇರ್ಪಡೆಯಾದ
ಬೆನ್ನಲ್ಲೇ ಅವರ ಬೆಂಬಲಿಗರು ಹಾಗೂ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಸದಸ್ಯರಿಗೆ ಶೆಟ್ಟರ್ ಅವರೊಂದಿಗೆ ಗುರುತಿಸಿಕೊಳ್ಳಬಾರದು.
ಬೆಂಬಲ ನೀಡಬಾರದು ಎಂದು ವರಿಷ್ಠರು ತಾಕೀತು ಮಾಡಿರುವುದು ವರದಿ ಆಗಿದೆ.
ದಶಕಗಳ ಕಾಲ ಬಿಜೆಪಿಯಲ್ಲಿದ್ದ ಶೆಟ್ಟರ್ ಹಲವು ನಾಯಕರ ಬೆಳವಣಿಗೆಗೆ ಸಹಕಾರ ನೀಡಿದ್ದಾರೆ.
ಆದರೆ, ಆ ಅಭಿಮಾನದ ಮೇಲೆ ಯಾರಾದರೂ ಬೆಂಬಲ ನೀಡಿದರೆ,ಅವರು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಯೂ ಇದೆ.
ಹೀಗಾಗಿ, ಬೆಂಬಲಿಗರು ಹಾಗೂ ಪಾಲಿಕೆಯ ಸದಸ್ಯರು ಅವರಿಗೆ ಬೆಂಬಲವನ್ನು ನೀಡಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ.
-----------------
8. ರಾಜ್ಯದಲ್ಲಿ ಚುನಾವಣೆ ದಿನ ಸಮೀಸುತ್ತಿರುವಾಗಲೇ ಹಲವು ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು,
ಇದೀಗ ತೇಜಸ್ವಿನಿ ಅನಂತಕುಮಾರ್ ಅವರ ಒಂದು ಟ್ವೀಟ್ ಹಲವು ಚರ್ಚೆಗೆ ಕಾರಣವಾಗಿದೆ.
ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ಆಗಿರುವ ತೇಜಸ್ವಿನಿ ಅನಂತಕುಮಾರ್ ಅವರು ತಮ್ಮ ಪತಿ ಅನಂತಕುಮಾರ್ ಅವರು
ಲಾಲ್‌ಬಾಗ್‌ನಲ್ಲಿ ನೆಟ್ಟ ಗಿಡದ ಬಗ್ಗೆ ಟ್ವೀಟ್ ಮಾಡಿದ್ದಾರೆ. ಅನಂತಕುಮಾರ್ ಅವರು ನೆಟ್ಟಿದ್ದ ಗಿಡ ಬಾಡಿ ಹೋಗಿದೆ ಎನ್ನುವ ಟ್ವೀಟ್ ಚರ್ಚೆಗೆ ಗ್ರಾಸವಾಗಿದೆ. ದಿವಂಗತ
ಅನಂತಕುಮಾರ್ ಅವರು ಕರ್ನಾಟಕದಲ್ಲಿ ಬಿಜೆಪಿಯನ್ನು ಬೆಳೆಸಿದವರಲ್ಲಿ ಪ್ರಮುಖರು. ತೇಜಸ್ವಿನಿ ಅನಂತಕುಮಾರ್ ಅವರು ಅವರ
ಟ್ವಿಟ್ಟರ್ ಖಾತೆಯಲ್ಲಿ 2015ರ ಜೂನ್ 5ರಂದು ಲಾಲ್‌ಬಾಗ್ ಪಶ್ಚಿಮ ದ್ವಾರದ ಬಳಿ ಅನಂತಕುಮಾರ್ ಅವರು ಗಿಡ ನೆಟ್ಟಿದ್ದರು.
ಯಾಕೋ ಅದು ಮುದುರಿ ಹೋಗಿದೆ. ಲಾಲ್‌ಬಾಗ್ ಅಧಿಕಾರಿಗಳಿಗೆ ಈ ವಿಷಯವನ್ನು ತಿಳಿಸಿದ್ದೇವೆ.
ಅನಂತಕುಮಾರ ಅವರ ಅನುಪಸ್ಥಿತಿಯಲ್ಲಿ ಈ ಗಿಡವನ್ನು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮದಾಗಿದೆ ಎನ್ನುವುದು ನನ್ನ ಭಾವನೆ ಎಂದು ಟ್ವೀಟ್ಟಿಸಿದ್ದಾರೆ.
-----------------
9. ರಾಜ್ಯದಲ್ಲಿ ಎಲ್ಲ ರಾಜಕೀಯ ಲೆಕ್ಕಾಚಾರಗಳು ತಲೆ ಕೆಳಗಾಗಲಿವೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಖಾಸಗಿ ಸಂಸ್ಥೆಗಳು ನಡೆಸಿದ ಚುನಾವಣಾ ಸಮೀಕ್ಷೆಗಳು ತಲೆಕೆಳಗಾಗಲಿವೆ.
ರಾಜ್ಯ ರಾಜಕಾರಣದಲ್ಲಿ ಈಗ ನಡೆಯುತ್ತಿರುವ ವಿದ್ಯಮಾನ ಗಮನಿಸಿದರೆ ಎಲ್ಲ ಸಮೀಕ್ಷೆಗಳು ಸುಳ್ಳಾಗಲಿದೆ ಎಂದಿದ್ದಾರೆ. ರಾಜ್ಯದಲ್ಲಿ ದಿನವೂ ಅಚ್ಚರಿಯ ಬೆಳವಣಿಗೆಗಳು ಆಗುತ್ತಿವೆ. ಪಕ್ಷಾಂತರ
ದಿಂದ ಯಾರಿಗೆ ಎಷ್ಟು ಲಾಭ– ನಷ್ಟ ಆಗಲಿದೆ ಎನ್ನುವುದು ಮುಂದಿನ ದಿನಗಳಲ್ಲಿ ತಿಳಿಯಲಿದೆ ಎಂದರು.
-------------
Share your comments