ರಾಜ್ಯ ಸರ್ಕಾರವು ಈ ಬಾರಿಯ ಬಜೆಟ್‌ನಲ್ಲಿ ರೈತರಿಗೆ, ಮಹಿಳೆಯರಿಗೆ ಹಾಗೂ ಸಾಮಾನ್ಯ ವರ್ಗದವರಿಗೆ ಹಲವು ಜನಪರ ಯೋಜನೆಗಳನ್ನು ಘೋಷಿಸಿದೆ.
State budget 2023 ಬೊಮ್ಮಾಯಿ ಗಿಫ್ಟ್: ಗೃಹಿಣಿಯರಿಗೆ ಮಾಸಿಕ ಸಿಗಲಿದೆ ಇಷ್ಟು ಸಹಾಯಧನ!
ರಾಜ್ಯ ಸರ್ಕಾರವು ಈ ಬಾರಿಯ ಬಜೆಟ್‌ನಲ್ಲಿ ರೈತರಿಗೆ, ಮಹಿಳೆಯರಿಗೆ ಹಾಗೂ ಸಾಮಾನ್ಯ ವರ್ಗದವರಿಗೆ ಹಲವು ಜನಪರ ಯೋಜನೆಗಳನ್ನು ಘೋಷಿಸಿದೆ.
ಅದರಲ್ಲಿ ಪ್ರಮುಖವಾಗಿ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂಪಾಯಿಗೆ ಸಾಲ ನೀಡುವುದು ಸೇರಿದೆ.
ಅಲ್ಲದೇ ಕಿಸಾನ್ ಕಾರ್ಡ್‌ನ ಮೂಲಕ 10,000 ಸಾವಿರ ಸಹಾಯಧನ ನೀಡುವುದು ಸೇರಿದೆ.
State budget 2023 ಬೊಮ್ಮಾಯಿಯಿಂದ ರೈತರಿಗೆ ಮಿಠಾಯಿ: ರೈತರಿಗೆ 5 ಲಕ್ಷ ರೂಪಾಯಿಯವರೆಗೆ ಬಡ್ಡಿರಹಿತ ಸಾಲ!
ರೈತರಿಗೆ ಬಡ್ಡಿ ರಹಿತ ಸಾಲದ ಮಿತಿಯನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದೆ ಇದರಲ್ಲಿ ಮೂರು ಲಕ್ಷ ರೂಪಾಯಿಯಿಂದ 5 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಿರುವುದು ವಿಶೇಷವಾಗಿದೆ.
ಈ ಮೂಲಕ ರಾಜ್ಯದಲ್ಲಿ ಬಹುದೊಡ್ಡ ಮತದಾರರನ್ನು ಸೆಳೆಯಲು ಸರ್ಕಾರವು ಮುಂದಾಗಿದೆ.
ಅಷ್ಟೇ ಅಲ್ಲ ಇದರೊಂದಿಗೆ ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆ ಅಡಿಯಲ್ಲಿ ರೈತರಿಗೆ 10,000 ಸಾವಿರ ಸಹಾಯಧನ ಲಭ್ಯವಾಗಲಿದ್ದು, ತುರ್ತು ಸಂದರ್ಭದಲ್ಲಿ ರೈತರಿಗೆ ಬೀಜ, ಗೊಬ್ಬರ ಖರೀದಿಗೆ ಅನುಕೂಲಕರವಾಗಲಿದೆ.
State budget 2023 ರಾಜ್ಯ ಸರ್ಕಾರದ 2023-24ನೇ ಸಾಲಿನ ಮಹತ್ವದ ಬಜೆಟ್‌ಗೆ ಕೌಂಟ್‌ಡೌನ್!
ರಾಜ್ಯ ಬಜೆಟ್‌ನ ಮುಖ್ಯಾಂಶಗಳು
- ರೈತರಿಗೆ ಈ ಹಿಂದೆ 3 ಲಕ್ಷ ರೂಪಾಯಿಯವರೆಗೆ ಬಡ್ಡಿ ರಹಿತ ಸಾಲವನ್ನು ನೀಡಲಾಗುತ್ತಿತ್ತು. ಇದೀಗ 5 ಲಕ್ಷ ರೂಪಾಯಿವರೆಗಿನ ಬಡ್ಡಿ ರಹಿತ ಸಾಲ ಸೌಲಭ್ಯ ಸಿಗಲಿದೆ.
- ಕಿಸಾನ್ ಕಾರ್ಡ್ ಸೌಲಭ್ಯ ಇರುವ ರೈತರಿಗೆ ಭೂಸಿರಿ ಯೋಜನೆ
- ಗೃಹಿಣಿಯರಿಗೆ ತಿಂಗಳಿಗೆ 500 ರೂಪಾಯಿ ಮೊತ್ತದ ಸಹಾಯ ಧನ
- ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಸಿಗಲಿದೆ ಇನ್ಮುಂದೆ ಉಚಿತ ಬಸ್ ಪಾಸ್
- ಮಹಿಳಾ ಸಂಘಟಿತ ಕಾರ್ಮಿಕರಿಗೂ ಸಿಹಿ ಇನ್ಮುಂದೆ ಎಲ್ಲರಿಗೂ ಉಚಿತ ಬಸ್ ಪಾಸ್
- ಆರ್ಥಿಕವಾಗಿ ಹಿಂದುಳಿದವರಿಗೆ ವಸತಿ ಯೋಜನೆ ಕಲ್ಪಿಸಲು ಕ್ರಮ
- ನೇತಾರ ಸಮ್ಮಾನ ಯೋಜನೆಯಡಿ ಸಹಾಯಧನ 3 ಸಾವಿರ ರೂಪಾಯಿಯಿಂದ 5 ಸಾವಿರಕ್ಕೆ ಹೆಚ್ಚಳ!
- ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ 180 ಕೋಟಿ ವೆಚ್ಚದಲ್ಲಿ ಜೀವನ್ ಜ್ಯೋತಿ ಕಿಸಾನ್ ಯೋಜನೆ ಪರಿಚಯ
- ಮಹಿಳಾ ಸಂಘಟಿತ ಕಾರ್ಮಿಕರಿಗೂ ಉಚಿತ ಬಸ್ ಪಾಸ್ ಸೌಲಭ್ಯ. 30 ಲಕ್ಷ ಮಹಿಳೆಯರಿಗೆ ಉಚಿತ ಬಸ್ ಪಾಸ್ ಸೌಲಭ್ಯ ಸಿಗಲಿದೆ.
- ನೇತಾರ ಸಮ್ಮಾನ ಯೋಜನೆಯಡಿ ಸಹಾಯಧನ 3 ಸಾವಿರ ರೂಪಾಯಿಯಿಂದ 5 ಸಾವಿರಕ್ಕೆ ಹೆಚ್ಚಳ
- ನೇಕಾರರು ಹಾಗೂ ಮೀನುಗಾರರಿಗೂ ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ
- ರಾಜ್ಯದಲ್ಲಿ 19 ಕಾರ್ಮಿಕರ ವಿಮಾ ಆಸ್ಪತ್ರೆ ಪ್ರಾರಂಭ
- ಬಿಪಿಎಲ್ ಕಾರ್ಡ್‌ದಾರರಿಗೆ ಮಾಸಿಕ ಅಕ್ಕಿಯನ್ನು 5 ರಿಂದ 6 ಕೆ.ಜಿಗೆ ಹೆಚ್ಚಳ
- ನೇಕಾರ ಸಮ್ಮಾನ ಯೋಜನೆಯಡಿ ಸಹಾಯಧನ 3 ಸಾವಿರ ರೂಪಾಯಿಯಿಂದ 5 ಸಾವಿರಕ್ಕೆ ಹೆಚ್ಚಳ
- ಈಗಾಗಲೇ ಹೇಳಿದಂತೆ ನೇಕಾರರು, ಮೀನುಗಾರರಿಗೂ ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ
- ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ 5 ಕೋಟಿ ರೂಪಾಯಿ ವೆಚ್ಚದಲ್ಲಿ ಕ್ರೀಡಾಂಗಣ ನಿರ್ಮಾಣ.
- ದೇಶದ ಗ್ರಾಮಗಳ ಅಭಿವೃದ್ಧಿಗೆ ಬರೋಬ್ಬರಿ 4,800 ಕೋಟಿ ಬಿಡುಗಡೆ!
ಬಜೆಟ್‌ನಲ್ಲಿ ಪ್ರಕಟಿಸಲಾಗಿರುವ ಪ್ರಮುಖ ಘೋಷಣೆಗಳು ಹಾಗೂ ಯೋಜನೆಗಳನ್ನು ರಾಜ್ಯ ಸರ್ಕಾರವು ಈಗಾಗಲೇ ಪರಿಚಯಿಸುವುದಾಗಿ ಹೇಳಿತ್ತು.
ಗೃಹಿಣಿಯರಿಗೆ ಅಂದಾಜು 2000 ಸಾವಿರ ರೂಪಾಯಿ ನೀಡಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಅದನ್ನು 500 ರೂಪಾಯಿ ಮಾಡಲಾಗಿದೆ.
ಎಲ್ಲವನ್ನೂ ಪರಿಗಣಿಸಿ ಯೋಜನೆಯನ್ನು ಪರಿಚಯಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ತಿಳಿಸಿದ್ದರು.
ಅದರಂತೆ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಬಜೆಟ್ ಘೋಷಣೆ ಮಾಡಲಾಗಿದೆ.