News

ಕೃಷಿ, ಶಿಕ್ಷಣ, ಸಾಹಿತ್ಯ ಕ್ಷೇತ್ರ, ಸ್ವಯಂ ಉದ್ಯೋಗ, ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ವೆಬ್ಸೈ್ಟ್ ಲೋಕಾರ್ಪಣೆ

19 January, 2021 6:30 AM IST By:
kkhracs website launched

ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಅಧಿಕೃತ ನೂತನ ವೆಬ್‍ಸೈಟ್ https://kkhracs.com ತೆರೆಯಲಾಗಿದ್ದು, ಕೃಷಿ, ಶಿಕ್ಷಣ, ಸಾಹಿತ್ಯ ಕ್ಷೇತ್ರ, ಸ್ವಯಂ ಉದ್ಯೋಗ, ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸೇರಿದಂತೆ ಸಂಘದ ಎಲ್ಲಾ ಮಾಹಿತಿ ಲಭ್ಯವಾಗಲಿದೆ.

ಕಲಬುರಗಿ, ಯಾದಗಿರಿ, ಬೀದರ ರಾಯಚೂರ, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಿಗೆ ಸಂಬಂಧಿಸಿದ ಮಾಹಿತಿಯು   https://kkhracs.comನಲ್ಲಿ ಲಭ್ಯವಾಗಲಿದೆ. ಈ ವೆಬ್‍ಸೈಟ್‍ನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಸಂಬಂಧಿಸಿದ ಮಾಹಿತಿ ಹಾಗೂ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿವರ ಸಿಗಲಿದೆ. ಐ.ಎ.ಎಸ್. ಮತ್ತು ಕೆ.ಎ.ಎಸ್., ಬ್ಯಾಂಕಿಂಗ್, ರೈಲ್ವೆ, ಎಸ್.ಎಸ್.ಸಿ., ಗ್ರೂಪ್ “ಸಿ” ಹುದ್ದೆಗಳ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗುವುದು..ಡಿಜಿಟಲ್ ತರಬೇತಿ ಮತ್ತು ರಿಟೇಲ್ ಮಾರ್ಕೆಟಿಂಗ್  ತರಬೇತಿ ಹಾಗೂ ರಾಯಚೂರು ಕೃಷಿ ವಿಶ್ವವಿದ್ಯಾಲಯ ಸಹಯೋಗದೊಂದಿಗೆ ರೈತರಿಗೆ ವಿವಿಧ ತರಬೇತಿ ಕಾರ್ಯಕ್ರಮಗಳಿಗೂ ಅರ್ಜಿ ಆಹ್ವಾನಿಸಲಾಗಿದೆ.

ಈ ಭಾಗದ ಜನರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ತರಬೇತಿ ನೀಡುತ್ತಿರುವುದು ಉತ್ತಮ ಕಾರ್ಯ. ಹಿಂದುಳಿದ ಪ್ರದೇಶವಾಗಿರುವ ಈ ಭಾಗದ ಯುವಕರಿಗೆ ಅನುಕೂಲವಾಗಲಿದೆ.