News

Kpsc ಸ್ಪರ್ಧಾತ್ಮಕ ಪರೀಕ್ಷೆ: ಬೇರೆ ಬೇರೆ ಪರೀಕ್ಷೆಗಳಿಗೆ ಪ್ರತ್ಯೇಕ ದಿನ; ಪ್ರಿಯಾಂಕ ಖರ್ಗೆ

27 October, 2023 1:33 PM IST By: Hitesh
Kpsc Competitive Exam: Separate day for different exams; Priyanka Kharge
ರಾಜ್ಯದಲ್ಲಿ ಪೊಲೀಸ್ ಇಲಾಖೆ ಪರೀಕ್ಷೆ ಹಾಗೂ ಸರ್ಕಾರಿ ಹುದ್ದೆಗಳ ಪರೀಕ್ಷಾ ದಿನಾಂಕದಲ್ಲಿ ಗೊಂದಲ ಉಂಟಾಗಿದ್ದು, ಇದನ್ನು ಬದಲಾಯಿಸಲು ಸರ್ಕಾರದ ಹಂತದಲ್ಲಿ ಚರ್ಚೆ ನಡೆದಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಸಚಿವ ಪ್ರಿಯಾಂಕ ಖರ್ಗೆ ಅವರು, ರಾಜ್ಯ ಲೋಕಸೇವಾ ಆಯೋಗವು ರಾಜ್ಯ ಲೆಕ್ಕ

ಪರಿಶೋಧನಾ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಲೆಕ್ಕ ಸಹಾಯಕರ ಹುದ್ದೆಗೆ 242, ಸಹಕಾರ ಸಂಘಗಳ ನಿರೀಕ್ಷಕರ ಹುದ್ದೆಗಳು 47, ಮತ್ತು ರಾಜ್ಯ

ಪೊಲೀಸ್‌ ಇಲಾಖೆಯು ಕೂಡ, ಖಾಲಿ ಇರುವ 454 ಸಿವಿಲ್ ಕಾನ್‌ಸ್ಟೇಬಲ್‌ ಹುದ್ದೆಗಳಿಗೆ ದಿನಾಂಕ 05/11/2023 ರ ಭಾನುವಾರದಂದು

ಒಂದೇ ದಿನ ಸ್ಪರ್ಧಾತ್ಮಕ ಪರೀಕ್ಷೆ ನಿಗದಿ ಮಾಡಿದೆ.

ಆದರೆ, ಕಳೆದ 5 ವರ್ಷದಿಂದ ಹಲವಾರು ಸರ್ಕಾರಿ ಹುದ್ದೆಗಳಿಗೆ ನೇಮಕಾತಿಯಾಗದೇ ಸಾವಿರಾರು ಅಭ್ಯರ್ಥಿಗಳು ತಮ್ಮ

ವಿದ್ಯಾರ್ಹತೆಗೆ ಹಾಗೂ ವಯೋಮಿತಿಗೆ ತಕ್ಕಂತೆ ಸರಿಯಾಗಿ ಉದ್ಯೋಗ ಸಿಗದೇ ಈಗಾಗಲೇ ಅನ್ಯಾಯಕ್ಕೆ ಒಳಗಾಗಿದ್ದಾರೆ.

ಸರ್ಕಾರಿ ನೌಕರಿ ಸೇರಬೇಕೆಂದು ಪ್ರತಿಯೊಂದು ನೇಮಕಾತಿಗೂ ಅರ್ಜಿ ಸಲ್ಲಿಸಿ ವರ್ಷಗಟ್ಟಲೇ ತಯಾರಿ ನಡೆಸಿದ ಅಭ್ಯರ್ಥಿಗಳಿಗೆ

ಒಂದೇ ದಿನ ಮೂರು ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಿಗದಿಗೊಳಿಸಿರುವುದರಿಂದ ಗೊಂದಲ ಉಂಟಾಗಿ, ಅಭ್ಯರ್ಥಿಗಳು ಪರೀಕ್ಷೆಗಳನ್ನು ಬೇರೆ ಬೇರೆ

ದಿನಾಂಕಗಳಲ್ಲಿ ನಿಗದಿ ಮಾಡಲು ಕ್ರಮ ವಹಿಸುವಂತೆ ನನಗೆ ಮನವಿ ಸಲ್ಲಿಸಿರುತ್ತಾರೆ ಎಂದು ಹೇಳಿದ್ದಾರೆ.

ಅಲ್ಲದೇ ವಿಶೇಷವಾಗಿ ನಮ್ಮ ಕಲ್ಯಾಣ ಕರ್ನಾಟಕ ಭಾಗದ ಯುವಕರು ನವೆಂಬರ್ 3ರಂದು ಪೊಲೀಸ್ ಇಲಾಖೆ ಪರೀಕ್ಷೆಗಳನ್ನು

ಬರೆದರೆ ಬೇರೆ ಸರ್ಕಾರಿ ಹುದ್ದೆಗಳ ನೇಮಕಾತಿಗಳ ಅವಕಾಶದಿಂದ ವಂಚಿತರಾಗುತ್ತಾರೆ.

ಆದ್ದರಿಂದ ಈ ಕುರಿತು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಬೇರೆ ಬೇರೆ

ಪರೀಕ್ಷೆಗಳಿಗೆ ಪ್ರತ್ಯೇಕವಾಗಿ ದಿನಾಂಕವನ್ನು ನಿಗದಿ ಪಡಿಸುವಂತೆ ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

ಲಕ್ಷಾಂತರ ಪ್ರತಿಭಾನ್ವಿತ ಅಭ್ಯರ್ಥಿಗಳ ಭವಿಷ್ಯದ ಹಿತ ದೃಷ್ಟಿಯಿಂದ ಕರ್ನಾಟಕ ಲೋಕಸೇವಾ ಆಯೋಗದ ಸ್ಪರ್ಧಾತ್ಮಕ

ಪರೀಕ್ಷೆಗಳನ್ನು ಬೇರೆ ಬೇರೆ ದಿನಾಂಕಗಳಲ್ಲಿ ನಿಗದಿ ಮಾಡಲು ಕೋರಲಾಗಿದೆ ಎಂದು ಅವರು ಹೇಳಿದ್ದಾರೆ.