News

KPSC recruitment: ಸಾಂಖ್ಯಿಕ ನಿರೀಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

27 October, 2022 11:42 AM IST By: KJ Staff
kpsc

ಕರ್ನಾಟಕ ಲೋಕಸೇವಾ ಆಯೋಗ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಸಾಂಖ್ಯಿಕ ನಿರೀಕ್ಷಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

ಇದನ್ನೂ ಓದಿರಿ: ಕಬ್ಬು ಬೆಳೆಗೆ ಬೆಂಬಲ ಬೆಲೆ ನೀಡಲು ಆಗ್ರಹ; ಇಂದು ರಾಷ್ಟ್ರೀಯ ಹೆದ್ದಾರಿ ಬಂದ್‌ 

ಆಸಕ್ತ, ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್‌ 17ರ ಒಳಗೆ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ. ಒಟ್ಟು 105 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಆಯೋಗವು ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 ಮತ್ತು ತಿದ್ದುಪಡಿ ನಿಯಮ 2022ರ ಉಳಿಕೆ ಮೂಲ ವೃಂದ ಗ್ರೂಪ್ 'ಸಿ' ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.

ಆಸಕ್ತ ಮತ್ತು ಅರ್ಹರು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಕೆ ಮಾಡಬೇಕು. ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಅವಕಾಶವಿಲ್ಲ ಎಂದು ಪ್ರಕಟಣೆ ತಿಳಿಸಿದೆ.  

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು On-line ಆನ್‌ಲೈನ್‌ ಮೂಲಕ ಮಾತ್ರ ಅಕ್ಟೋಬರ್‌ 19ರಿಂದ 19/10/2022  ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಶುಲ್ಕವನ್ನು ಪಾವತಿಸುವುದಕ್ಕೆ  ಸೆಪ್ಟೆಂಬರ್‌ 18 (18/11/2022) ಕೊನೆಯ ದಿನವಾಗಿದೆ. ಅರ್ಜಿ ಶುಲ್ಕ ಪಾವತಿ ಮಾಡುವುದು ಕಡ್ಡಾಯವಾಗಿದೆ.

ಇದನ್ನೂ ಓದಿರಿ: ಭೂಕಂಪದಿಂದ ಕಟ್ಟಡ ರಕ್ಷಣೆಗೆ ಹೊಸ ಪ್ಲಾನ್‌ ಕಂಡುಕೊಂಡ ಸಂಶೋಧಕರು!  

ಮೂರು ಹಂತಗಳಲ್ಲಿ ಅರ್ಜಿ

ಒಟ್ಟು ಮೂರು ಹಂತಗಳಲ್ಲಿ ಅರ್ಜಿ ಸಲ್ಲಿಕೆ ಮಾಡಬೇಕಾಗುತ್ತದೆ.

ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ವಿವರಗಳನ್ನು ಭರ್ತಿ ಮಾಡಬೇಕಾಗುತ್ತದೆ.

ಒಮ್ಮೆ ಅರ್ಜಿ ಸಲ್ಲಿಸಿದ ನಂತರ ಅರ್ಜಿಯಲ್ಲಿ ವಿವರಗಳನ್ನು ತಿದ್ದುಪಡಿ ಅಥವಾ ಸೇರ್ಪಡೆ ಮಾಡುವಂತೆ ಮಾಡುವ ಮನವಿಯನ್ನು ತಿರಸ್ಕಾರ ಮಾಡಲಾಗುವುದು ಎಂದು ನೇಮಕಾತಿ ಆದೇಶದಲ್ಲಿ ತಿಳಿಸಲಾಗಿದೆ.

ವಯೋಮಿತಿಯ ವಿವರಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ 17/11/2022 ನಮೂದಿಸಿರುವ ಕನಿಷ್ಠ ವಯೋಮಿತಿಯನ್ನು ಅಭ್ಯರ್ಥಿಗಳು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷಗಳು. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗ 35 ವರ್ಷ. ಪ್ರವರ್ಗ (2)ಎ, (2)ಬಿ, 3(ಎ), 3(ಬಿ) 38 ವರ್ಷಗಳು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಮತ್ತು 40 ವರ್ಷಗಳನ್ನು ನಿಗದಿ ಮಾಡಲಾಗಿದೆ.

ಅಭ್ಯರ್ಥಿಗಳಿಗೆ ಶೈಕ್ಷಣಿಕ ವಿದ್ಯಾರ್ಹತೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ನಮೂದಿಸಿರುವ ವಿದ್ಯಾರ್ಹತೆಯನ್ನು ಹೊಂದಿರುವುದು ಕಡ್ಡಾಯವಾಗಿದೆ.  

ಇದನ್ನೂ ಓದಿರಿ: ಭೂಕಂಪದಿಂದ ಕಟ್ಟಡ ರಕ್ಷಣೆಗೆ ಹೊಸ ಪ್ಲಾನ್‌ ಕಂಡುಕೊಂಡ ಸಂಶೋಧಕರು!  

kpsc

ನಿಖರ ವಿದ್ಯಾರ್ಹತೆ

ಅಲ್ಲದೇ ನಿಗದಿಪಡಿಸಿರುವ ವಿದ್ಯಾರ್ಹತೆಗಿಂತಲೂ ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿದ್ದರೂ ಸಹ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಪದವಿಯನ್ನು ಈ ವಿಷಯಗಳಲ್ಲಿ ಕಡ್ಡಾಯವಾಗಿ ಹೊಂದಿರಬೇಕು.   Economics, Statistics , Mathematics,Computer Science.

ಅರ್ಜಿ ಶುಲ್ಕದ ವಿವರಗಳು ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಕಡ್ಡಾಯವಾಗಿ ಶುಲ್ಕವನ್ನು ಪಾವತಿ ಮಾಡಬೇಕು. ಅರ್ಜಿ ಶುಲ್ಕ ಪಾವತಿ ಮಾಡದಿದ್ದರೆ, ಅರ್ಜಿಯನ್ನು ತಿರಸ್ಕಾರ ಮಾಡಲಾಗುತ್ತದೆ.

ಒಮ್ಮೆ ಶುಲ್ಕ ಪಾವತಿ ಮಾಡಿದ ನಂತರ ಅದನ್ನು ವಾಪಸ್ ನೀಡುವುದಿಲ್ಲ. ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು 600 ರೂಪಾಯಿ ಶುಲ್ಕ ಪಾವತಿಸಬೇಕು.

ಪ್ರವರ್ಗ (2)ಎ, (2)ಬಿ, 3(ಎ), 3(ಬಿ) ಅಭ್ಯರ್ಥಿಗಳು 300 ರೂಪಾಯಿಗಳು, ಮಾಜಿ ಸೈನಿಕ ಅಭ್ಯರ್ಥಿಗಳು 50 ರೂಪಾಯಿ ಶುಲ್ಕ ಕಟ್ಟಬೇಕು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

kpsc

ಎಲ್ಲಾ ವರ್ಗದ ಅಭ್ಯರ್ಥಿಗಳು 35 ರೂಪಾಯಿ ಪ್ರಕ್ರಿಯೆ ಶುಲ್ಕವನ್ನು ಕಡ್ಡಾಯವಾಗಿ ಪಾವತಿ ಮಾಡಬೇಕು.

ಅರ್ಜಿ ಸಲ್ಲಿಕೆ, ಸಹಾಯವಾಣಿ ಅರ್ಜಿಗಳನ್ನು ಸಲ್ಲಿಕೆ ಮಾಡಲು ಮತ್ತು ವಿವರವಾದ ಅಧಿಸೂಚನೆ ಪಡೆಯಲು ಅರ್ಹ ಅಭ್ಯರ್ಥಿಗಳು ಕೆಪಿಎಸ್‌ಸಿ ವೆಬ್‌ಸೈಟ್‌ ಪರಿಶೀಲಿಸಬಹುದಾಗಿದೆ.   

ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ 27,650 ರಿಂದ 52,650 ರೂಪಾಯಿ ವೇತನವನ್ನು ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ಕೇಂದ್ರ ಕಚೇರಿ ಮಾಹಿತಿ ಕೇಂದ್ರ 080-30574957/ 30574901. ಮೈಸೂರು 0821-2545956, ಬೆಳಗಾವಿ 0831-2475345 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.