ಕರ್ನಾಟಕ ಲೋಕಸೇವಾ ಆಯೋಗವು ಉಳಿಕೆ ಮೂಲ ವೃಂದ ಹಾಗೂ ಹೈದ್ರಾಬಾದ್ ಕರ್ನಾಟಕ ವೃಂದದ ಗ್ರೂಪ್ 'ಎ' ತಾಂತ್ರಿಕ ಮತ್ತು ಗ್ರೂಫ್ 'ಬಿ' ತಾಂತ್ರಿಕ / ತಾಂತ್ರಿಕೇತರ ವೃಂದದ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ.
ಆಯೋಗವು ಒಟ್ಟು 251 ಹುದ್ದೆಗಳನ್ನು ಭರ್ತಿಮಾಡುತ್ತಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು.
ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 10-07-2020
ಸಲ್ಲಿಸಲು ಕೊನೆಯ ದಿನಾಂಕ : 10-08-2020
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 11-08-2020
ವೇತನ ಶ್ರೇಣಿ: ಸದರಿ ಹುದ್ದೆಗಳಲ್ಲಿ ಹೈದ್ರಾಬಾದ್ ಕರ್ನಾಟಕ ವೃಂದಕ್ಕೆ ಮಿಸಲಾತಿ ಇರುವುದು. ಗ್ರೂಪ್ ಎ ಹುದ್ದೆಗಳಿಗೆ 52650-97100 ಹಾಗೂ ಗ್ರೂಪ್ ಬಿ ಹುದ್ದೆಗಳಿಗೆ 45300 -88300 ವೇತನ ನೀಗದಿಪಡಿಸಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ: ಅರ್ಜಿಗಳನ್ನು ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಪದವಿ; ಬಿ.ಇ/ಬಿ.ಟೆಕ್ ಪದವಿ; ಬಿ.ಫಾರ್ಮಾ/ಎಂ.ಫಾರ್ಮಾ; ಸ್ನಾತಕೋತ್ತರ ಪದವಿ/ಎಂಬಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ನಿಗದಿಪಡಿಸಿರುವ ವಿದ್ಯಾರ್ಹತೆಯನ್ನು ಹೊಂದದೆ ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿದ್ದರೂ ಸಹ ಪರಿಗಣಿಸಲಾಗುವುದಿಲ್ಲ.
ಅರ್ಜಿ ಸಲ್ಲಿಕೆ ಹೇಗೆ? ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್‌ಸೈಟ್ www.kpsc.kar.nic.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.
ಹುದ್ದೆಗಳು:
- ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಹಮ 41 ಹುದ್ದೆಗಹಳು
- ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ- 17 ಹುದ್ದೆಗಳು
- ಪೌರಾಡಳಿತ ನಿರ್ದೇಶನಾಲಯ-5 ಹುದ್ದೆಗಳು
- ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಔಷಧ ನಿಯಂತ್ರಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ-ಹುದ್ದೆಗಳು
- ಜಲಸಂಪನ್ಮೂಲ ಇಲಾಖೆ 184 ಹುದ್ದೆಗಳು:
ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು ಸಾಮಾನ್ಯ ಅಭ್ಯರ್ಥಿಗಳು 600/-ರೂ, ಪ್ರವರ್ಗ- 2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳು 300/-ರೂ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ನಂತರ ಯಾವುದೇ ಕಾಮನ್ ಸರ್ವೀಸ್ ಸೆಂಟರ್ ಗಳಲ್ಲಿ ಅಥವಾ ನೆಟ್ ಬ್ಯಾಂಕಿಂಗ್ /ಡೆಬಿಟ್ ಕಾರ್ಡ್ /ಕ್ರೆಡಿಟ್ ಕಾರ್ಡ್ ಮೂಲಕ ಅರ್ಜಿ ಶುಲ್ಕವನ್ನು ಆಗಸ್ಟ್ 11,2020ರೊಳಗೆ ಪಾವತಿಸಬೇಕಿರುತ್ತದೆ. ಸೂಚನೆ: 35/-ರೂ ಪ್ರಕ್ರಿಯೆ ಶುಲ್ಕವನ್ನು ಎಲ್ಲಾ ಅಭ್ಯರ್ಥಿಗಳು (ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಹಾಗೂ ಅಂಗವಿಕಲ ಅಭ್ಯರ್ಥಿಗಳು ಸೇರಿದಂತೆ) ಪಾವತಿಸಬೇಕಿರುತ್ತದೆ.
ವಯೋಮಿತಿ ಅರ್ಹತೆಗಳು: ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ವಯೋಮಿತಿಯನ್ನು ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ, ಇತರೆ ಅಭ್ಯರ್ಥಿಗಳಿಗೆ 40 ವರ್ಷ ನಿಗದಿಪಡಿಸಲಾಗಿದೆ.
ನೇಮಕಾತಿ ವಿಧಾನ: 200 ಅಂಕಗಳ ಸಾಮಾನ್ಯ ಪತ್ರಿಕೆ ಮತ್ತು 200 ಅಂಕಗಳ ನಿರ್ದಿಷ್ಟ ಪತ್ರಿಕೆಯ ಎರಡು ಪ್ರಶ್ನೆಪತ್ರಿಕೆಗಳ ಸ್ಪರ್ಧಾತ್ಮಕ ಪರೀಕ್ಷೆ ಇರುತ್ತದೆ. ನಂತರ ಸಂದರ್ಶನವನ್ನು ನಡೆಸಿ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.