ಇಂದು ಕೃಷಿ ಮತ್ತು ರೈತರ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್, ಪಶುಸಂಗೋಪನಾ ಸಚಿವ ಪುರುಷೋತ್ತಮ ರೂಪಲಾ, ಭಾರತೀಯ ಕೃಷಿ ಕ್ಷೇತ್ರದ ಅನೇಕ ಗಣ್ಯರು ಭಾಗವಹಿಸಲಿದ್ದರು. ಸಂಸದ ಪ್ರತಾಪ್ ಚಂದ್ರ ಸಾರಂಗಿ ಉಪಸ್ಥಿತರಿದ್ದರು.
ಉತ್ಪಾದನೆ, ಮಾರುಕಟ್ಟೆ ಪ್ರವೇಶ ಹೆಚ್ಚಳ, ಕೃಷಿಯಲ್ಲಿ ಹೊಸ ತಂತ್ರಜ್ಞಾನಗಳು ಮತ್ತು ರೈತರನ್ನು ಬೆಂಬಲಿಸುವಲ್ಲಿ ಸರ್ಕಾರದ ಪಾತ್ರದ ಕುರಿತು ವಿವಿಧ ವಿಚಾರ ಸಂಕಿರಣಗಳು ಕಾರ್ಯಕ್ರಮದಲ್ಲಿ ನಡೆಯಲಿದೆ .
2.ದಿನಂಪ್ರತಿ ದೇಶದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ . ಇದರಿಂದ ಕುಡಿಯುವ ನೀರಿನ ಸಮಸ್ಯೆ ಕೂಡ ತಲೆದೂರುತ್ತಿದೆ . ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಜಲಜೀವನ್ ಮಿಷನ್ ಅಡಿಯಲ್ಲಿ ಪ್ರತಿ ಹಳ್ಳಿಯ ಪ್ರತಿ ಮನೆಗೂ ನೀರು ಒದಗಿಸುವಾ ಕೆಲಸವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಾಡುತ್ತಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದರು .
ಅವರು ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಹಾದ್ರಿಹಳ್ಳಿ ಗ್ರಾಮದಲ್ಲಿ ಜಲಮಿಷನ್ ಯೋಜನೆಯಡಿಯಲ್ಲಿ ಮನೆ ಮನೆಗ ನಳ ಸಂಪರ್ಕಿಸುವ ಕಾಮಗಾರಿಗೆ ಚಾಲನೆಯನ್ನು ನೀಡಿ ಮಾತನಾಡಿದರು .
ಗ್ರಾಮೀಣ ಪ್ರದೇಶದ ಜನತೆಯ ಅಗತ್ಯ ಮೂಲಭೂತ ವ್ಯವಸ್ಥೆಯನ್ನು ಕಲ್ಪಿಸಿದ್ದು ,ಇದರ ಸದ್ಭಳಕೆ ಮಾಡಿಕೊಳ್ಳುವಂತೆ ಕೃಷಿ ಸಚಿವ ಬಿ. ಸಿ. ಪಾಟೀಲ್ ಹೇಳಿದರು.
ಇದನ್ನೂ ಓದಿ -CROP INSURENCE -ಈರುಳ್ಳಿ ಬೆಳೆಗಾರರಿಗೆ ಸಿಹಿ ಸುದ್ದಿ : ಪ್ರತಿ ಎಕರೆಗೆ ರೂ.4,200 ಬೆಳೆ ವಿಮೆ
3ಭಾರತೀಯ ವಾಯುಪಡೆಯಿಂದ ಅಗ್ನಿಪತ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಹುದ್ದೆಯಲ್ಲಿ ಸೇವೆ ಸಲ್ಲಿಸಲು ಹಾಗೂ ಮೇ-2023 ರಲ್ಲಿ ನಡೆಯುವ ಆನ್‌ಲೈನ್ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಯುವಕ, ಯುವತಿಯರಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ಅರ್ಜಿ ಸಲ್ಲಿಸಲು ಸಹಾಯ ಒದಗಿಸಲಾಗುವುದು ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇಕಡಾ 50 ರಷ್ಟು ಅಂಕಗಳು ಮತ್ತು ಇಂಗ್ಲೀಷ್ ವಿಷಯದಲ್ಲಿ ಶೇಕಡಾ 50% ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು ಅಥವಾ ವಿಜ್ಞಾನೇತರ ವಿಭಾಗದಲ್ಲಿ ಶೇಕಡಾ 50 ರಷ್ಟು ಅಂಕಗಳು ಮತ್ತು ಇಂಗ್ಲೀಷ್ ವಿಷಯಲ್ಲಿ ಶೇಕಡಾ 50 ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಆಸಕ್ತ ಅಭ್ಯರ್ಥಿಗಳು ಸಂಪೂರ್ಣ ವಿವರಗಳಿಗೆ ಅಥವಾ ಸೂಚನೆಗಳಿಗೆ ಹಾಗೂ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗಾಗಿ ವೆಬ್‌ಸೈಟ್ ಗೆ ಭೇಟಿ ನೀಡಿ ಮಾಹಿತಿಯನ್ನು ಪಡೆಯಾಬಹುದಾಗಿದೆ .
ಅರ್ಜಿ ಶುಲ್ಕ 250 ರೂ.ಗಳು ಆಗಿದ್ದು, ಆಸಕ್ತ ಅಭ್ಯರ್ಥಿಗಳು ಸಂಪೂರ್ಣ ವಿವರಗಳಿಗೆ ಅಥವಾ ಸೂಚನೆಗಳಿಗೆ ಹಾಗೂ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗಾಗಿ ವೆಬ್‌ಸೈಟ್ https://agnipathvayu.cdac.in ಗೆ ಭೇಟಿ ನೀಡಬೇಕು. ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನವಾಗಿದ್ದು, ಆಸಕ್ತ ಅಭ್ಯರ್ಥಿಗಳಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ಅರ್ಜಿ ಸಲ್ಲಿಸಲು ಸಹಾಯ ಒದಗಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗಾಧಿಕಾರಿಗಳು, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಕೊಪ್ಪಳ ಇವರನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬೇಕು ಅಥವಾ ದೂರವಾಣಿ ಸಂಖ್ಯೆ 08539-220859 ಗೆ ಸಂಪರ್ಕಿಸಿ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
4.ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಕೇಂದ್ರ ಸಂಪುಟ ಸಂತಸದ ಸುದ್ದಿಯನ್ನು ನೀಡಿದೆ . ಉಜ್ವಲ ಯೋಜನೆಯ ಫಲಾನುಭವಿಗಳಿಗೆ ವಾರ್ಷಿಕವಾಗಿ 12 ಸಿಲಿಂಡರ್‌ಗೆ ಪ್ರತಿ ರೀಫಿಲ್‌ಗಳಿಗೆ 200 ರೂ. ಸಬ್ಸಿಡಿ ನೀಡಲು ಕೇಂದ್ರ ಸಂಪುಟ ಅನುಮೋದನೆ ನೀಡಿದ್ದು ,ಇದರ ಪ್ರಯೋಜನವನ್ನು ಪಡೆಯಬಹುದಾಗಿದೆ .
ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯ ಸಭೆಯಲ್ಲಿ ಈ ನಿರ್ಧಾರದ ತೆಗೆದುಕೊಂಡಿದ್ದು , ಈ ಬಗ್ಗೆ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಮಾಹಿತಿ ನೀಡಿದ್ದಾರೆ. ಮಾರ್ಚ್ 1, 2023 ರವರೆಗೆ 9.59 ಕೋಟಿ ಫಲಾನುಭವಿಗಳು ಈ ಯೋಜನೆಯಲ್ಲಿಇದ್ದಾರೆ. 2022-23ರ ಹಣಕಾಸು ವರ್ಷದಲ್ಲಿ ಒಟ್ಟು ವೆಚ್ಚ 6,100 ಕೋಟಿ ರೂ. ಮತ್ತು 2023-24ಕ್ಕೆ 7,680 ಕೋಟಿ ರೂ ವೆಚ್ಚವಾಗಿದೆ. ಸಹಾಯಧನವನ್ನು ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ.