1. ಸುದ್ದಿಗಳು

ಕೆಎಸ್ಆರ್‌ಪಿ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ: ಆನ್‌ಲೈನ್‌ ಅರ್ಜಿಗೆ ದಿನಾಂಕ ವಿಸ್ತರಣೆ

KSP Constable Recruitment

ನಿರುದ್ಯೋಗಿಗಳಿಗೆ, ಅದರಲ್ಲೂ ಪೊಲೀಸ್‌ ಇಲಾಖೆಗೆ ಸೇರಬೇಕೆಂದು ಕನಸು ಕಾಣುತ್ತಿರುವ ಆಕಾಂಕ್ಷಿಗಳಿಗೆ  ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಕೆಲವು ತಾಂತ್ರಿಕ ಕಾರಣಗಳಿಂದಾಗಿ ಅಥವಾ ಸಂಬಂಧಿಸಿದ ದಾಖಲಾತಿ ಪಡೆಯಲು ವಿಳಂಬವಾದರರೂ ಈಗ ನಿರ್ಭಯವಾಗಿ ಈಗ ಅರ್ಜಿ ಸಲ್ಲಿಸಲು ಅವಕಾಶವಿದೆ. ರಾಜ್ಯ ಪೊಲೀಸ್ ಇಲಾಖೆಯ ಒಟ್ಟು 2672 ಹುದ್ದೆಗಳಿಗೆ ಜುಲೈ 06 ವರೆಗೆ ಆನ್‌ಲೈನ್ನಲ್ಲಿ‌ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ ಎಷ್ಟು?

ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.250.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ ರೂ.100.

ವಯೋಮಿತಿ ಅರ್ಹತೆಗಳು:

ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ ವಯಸ್ಸಾಗಿರಬೇಕು.

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 25 ವರ್ಷ, ಎಸ್‌ಸಿ / ಎಸ್‌ಟಿ / ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 27 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಕೆ ಹೇಗೆ?

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು www.ksp.gov.in ಗೆ ಭೇಟಿ ನೀಡಿ, ಅಧಿಸೂಚನೆಯ ಸೂಚನೆಗಳನ್ನು ಓದಿಕೊಂಡು ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬೇಕು

ಅರ್ಜಿ ಶುಲ್ಕವನ್ನು ನಗದು ರೂಪದಲ್ಲಿ ಸ್ಥಳೀಯ ಅಂಚೆ ಕಛೇರಿಗಳಲ್ಲಿ ಅಥವಾ KSRP ಅಧಿಸೂಚನೆಯಲ್ಲಿ ನೀಡಿದ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಬೇಕು. ಎಸ್‌ಎಸ್‌ಎಲ್‌ಸಿ ಅಥವಾ 10ನೇ ತರಗತಿ ಪಾಸ್‌ ಮಾಡಿರುವ ಅಭ್ಯರ್ಥಿಗಳು, ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Police

4014 Civil, ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್‌ ನೇಮಕ: ಅರ್ಜಿಗೆ ಅವಧಿ ವಿಸ್ತರಣೆ

ಕರ್ನಾಟಕ ರಾಜ್ಯ ಪೊಲೀಸ್, 4014 ನಾಗರಿಕ ಮತ್ತು ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಈ ಕೆಳಗಿನ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಿಸಿದ್ದು, ಆಯಾ ಹುದ್ದೆಗಳಿಗೆ ಸಂಬಂಧಿಸಿದ ಅವಧಿ ವಿಸ್ತರಣೆಯೂ ಈ ಕೆಳಗೆ ವಿವರವಾಗಿ ನೀಡಲಾಗಿದೆ.

ಪ್ರಮುಖ ಹುದ್ದೆಗಳು ಮತ್ತು ದಿನಾಂಕಗಳು:

ಸಿವಿಲ್ Police Constable - 558 (ಕಲ್ಯಾಣ ಕರ್ನಾಟಕ) : 09-07-2020

ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್ (ಸಿಎಆರ್ / ಡಿಎಆರ್) - 444 (ಕಲ್ಯಾಣ ಕರ್ನಾಟಕ) : 09-07-2020

ಪೊಲೀಸ್ ಕಾನ್ಸ್‌ಟೇಬಲ್ ನಾಗರಿಕ - 2007 : 13-07-2020

ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್ / ಡಿಎಆರ್ ) -1005 : 13-07-2020

ಅರ್ಜಿ ಶುಲ್ಕ ಎಷ್ಟು?

ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.250.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ ರೂ.100.

ಪೊಲೀಸ್ ಕಾನ್ಸ್‌ಟೇಬಲ್(ನಾಗರಿಕ) ಹುದ್ದೆಗಳಿಗೆ ವಯೋಮಿತಿ ಅರ್ಹತೆಗಳು:

ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 19 ವರ್ಷ ವಯಸ್ಸಾಗಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 25 ವರ್ಷ, ಎಸ್‌ಸಿ / ಎಸ್‌ಟಿ / ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 27 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್‌/ಡಿಎಆರ್‌) ಹುದ್ದೆಗಳಿಗೆ ವಯೋಮಿತಿ ಅರ್ಹತೆಗಳು:

ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 25 ವರ್ಷ, ಎಸ್‌ಸಿ / ಎಸ್‌ಟಿ / ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 27 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಕೆ ಹೇಗೆ?

ಆಸಕ್ತ ಅಭ್ಯರ್ಥಿಗಳು ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್‌ http://cpcnhk20.ksp-online.in/ ಗೆ ಭೇಟಿ ನೀಡಿ.

ಓಪನ್‌ ಆದ ಪೇಜ್‌ನಲ್ಲಿ 'New Application' ಎಂಬಲ್ಲಿ ಕ್ಲಿಕ್ ಮಾಡಿ. ನಂತರ ಅಗತ್ಯ ಮಾಹಿತಿಗಳನ್ನು ನೀಡುವ ಮೂಲಕ ಅರ್ಜಿ ಪೂರ್ಣಗೊಳಿಸಬಹುದು.

ಪೊಲೀಸ್ ಇಲಾಖೆಯ ಅಗ್ನಿಶಾಮಕ ದಳದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ

ಅಗ್ನಿಶಾಮಕ ದಳದಲ್ಲಿ 1567 ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳನ್ನು 100 ದಿನಗಳಲ್ಲಿ ಭರ್ತಿ ಮಾಡಲು ಕ್ರಮ ಕೈಗೊಳ್ಳುವಂತೆ ಇಲಾಖೆಯ ಅಧಿಕಾರಿಗಳಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಆದ್ದರಿಂದ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಶೀಘ್ರದಲ್ಲಿ ಹೊರಬೀಳಲಿದೆ. ಇಲಾಖೆಯಲ್ಲಿ 1222 ಅಗ್ನಿಶಾಮಕ, 227 ಅಗ್ನಿಶಾಮಕ ಚಾಲಕ, 82 ಟೆಕ್ನೀಷಿಯನ್, 36 ಅಗ್ನಿಶಾಮಕ ಠಾಣಾಧಿಕಾರಿ ಹುದ್ದೆಗಳು ಖಾಲಿ ಇವೆ.

Published On: 20 June 2020, 07:40 PM English Summary: KSP Constable Recruitment 2020: Last Date Extended

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.