News

ಸಾರಿಗೆ ನೌಕರರ ಮುಷ್ಕರ ಇನ್ನೂ ಕಗ್ಗಂಟು- ರಸ್ತೆಗಿಳಿಯದ ಬಸ್-ಇಂದು ಸಭೆ

13 December, 2020 9:18 AM IST By:

ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ 3ನೇ ದಿನಕ್ಕೆ ಕಾಲಿಟ್ಟಿದೆ.  ಸರ್ಕಾರ ಮತ್ತು ಸಾರಿಗೆ ನೌಕರರು ತಮ್ಮ ಪಟ್ಟುಗಳನ್ನು ಸಡಿಲಿಸದೇ ಇರುವುದರಿಂದ ಮುಷ್ಕರ ತಕ್ಷಣಕ್ಕೆ ಅಂತ್ಯಗೊಳ್ಳುವ ಲಕ್ಷಣ ಕಾಣಿಸು ತ್ತಿಲ್ಲ. ಶುಕ್ರವಾರದಿಂದ ಸರ್ಕಾರಿ ಬಸ್‌ಗಳ ಸಂಚಾರ ಪೂರ್ಣಪ್ರಮಾಣದಲ್ಲಿ ಸ್ಧಗಿತಗೊಂಡಿದೆ.ಇಂದು ಸಾರಿಗೆ ನೌಕರರ ಜೊತೆಗೆ ಮಾತುಕತೆಗೆ ಮುಂದಾಗುತ್ತಾರಾ ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಎಂಬುದನ್ನು ಕಾದು ನೋಡಬೇಕಾಗಿದೆ.

ಸರ್ಕಾರಿ ಬಸ್​ ಸಂಚಾರ ಸ್ತಬ್ಧವಾದ ಹಿನ್ನಲೆ ಪ್ರಯಾಣಿಕರ ಪರದಾಡುವಂತಾಗಿದೆ. ಮತ್ತೊಂದೆಡೆ ಖಾಸಗಿ ವಾಹನಗಳು ಸಾರಿಗೆ ನೌಕರರ ಮುಷ್ಕರದ ದುರ್ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ. ಖಾಸಗಿ ವಾಹನಗಳು ಪ್ರಯಾಣಿಕರಿಂದ ಎರಡು-ಮೂರು ಪಟ್ಟು ಹೆಚ್ಚು ಹಣ ವಸೂಲಿ ಮಾಡುತ್ತಿವೆ

ಪರಿಸ್ಥಿತಿ ಬಿಕ್ಕಟ್ಟಿನತ್ತ ತಿರುಗುತ್ತಿರುವುದು ಗೊತ್ತಾಗುತ್ತಲೇ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಸಾರಿಗೆ ಸಚಿವ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಶನಿವಾರ ರಾತ್ರಿ ತಮ್ಮ ನಿವಾಸಕ್ಕೆ ಕರೆಸಿ
ಕೊಂಡು ಸಂಧಾನ ಸೂತ್ರ ರೂಪಿಸಲು ಮುಂದಾದರು. ಇದರ ಫಲವಾಗಿ ಕಾರ್ಮಿಕ ಸಂಘಟನೆಗಳ ಜತೆ ಭಾನುವಾರ ಬೆಳಿಗ್ಗೆಯೇ ಮಾತುಕತೆ ನಡೆಸಲು ಸರ್ಕಾರ ನಿರ್ಧರಿಸಿತು.

ಮುಖ್ಯಮಂತ್ರಿ ಜತೆ ಸಭೆ ನಡೆಸಿದ ಬಳಿಕ ಮಾತನಾಡಿದ ಲಕ್ಷ್ಮಣ ಸವದಿ, ‘ಸಾರಿಗೆ ನೌಕರರ ಸಂಘಟನೆಗಳ ಪ್ರತಿನಿಧಿ ಗಳ ಜೊತೆ ಭಾನುವಾರ (ಡಿ. 13) ಬೆಳಿಗ್ಗೆ 10 ಗಂಟೆಗೆ ಸಭೆ ನಡೆಸಲಾಗುವುದು.

ಸಾರ್ವಜನಿಕ ಹಿತದೃಷ್ಟಿಯಿಂದ ನೌಕರರು ಕೂಡಲೇ ಪ್ರತಿಭಟನೆ ನಿಲ್ಲಿಸಿ ಕರ್ತವ್ಯಕ್ಕೆ ಮರಳಬೇಕು. ಸಾರಿಗೆ ಸಚಿವರ ಜತೆ ಚರ್ಚಿಸಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಮತ್ತೊಮ್ಮೆ ಮನವಿ ಮಾಡುತ್ತೇನೆ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ.