News

Lalbagh Flower Show 2023 : ಫಲಪುಷ್ಪ ಪ್ರದರ್ಶನ: ವೀಕ್ಷಕರ ವಾಹನ ನಿಲುಗಡೆ ಈ ಸ್ಥಳ ನಿಗದಿ

05 August, 2023 2:42 PM IST By: Kalmesh T
Lalbagh Flower Show 2023 : Flower Show at Lalbagh: CM Siddaramaiah Drives

Lalbagh Flower Show 2023 :ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರ ಸ್ಮರಣಾರ್ಥವಾಗಿ ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ಲಾಲ್ ಬಾಗ್  ಇಡೀ ವಿಶ್ವದಲ್ಲಿಯೇ ಪ್ರಸಿದ್ದವಾದ ಉದ್ಯಾನವನ. ಸುಮಾರು 240 ಎಕರೆ ವಿಸ್ತೀರ್ಣವಿರುವ ಈ ಉದ್ಯಾನವನದಲ್ಲಿ ವಿವಿಧ ಬಗೆಯ ಮರಗಿಡಗಳಿವೆ. ಬ್ರಿಟೀಷರ ಕಾಲದಲ್ಲಿದ್ದ ಈ ಉದ್ಯಾನವನಕ್ಕೆ ಐತಿಹಾಸಿಕ ಮಹತ್ವವಿದೆ.

140 ಎಕರೆ ಪ್ರದೇಶದಲ್ಲಿದ್ದ ಈ ಉದ್ಯಾನವನಕ್ಕೆ ಶ್ರೀ ಕೆಂಗಲ್ ಹನುಮಂತಯ್ಯನವರು ಇನ್ನೂ 100 ಎಕರೆ ಪ್ರದೇಶವನ್ನು ಸ್ವಾಧೀನಪಡಿಸಿ, ಒಟ್ಟು 240  ಎಕರೆ ಪ್ರದೇಶದಲ್ಲಿರುವ ಅತಿ ದೊಡ್ಡ ಉದ್ಯಾನವಾಗಿದೆ.

ಪ್ರತಿ ವರ್ಷದಂತೆ ಈ ವರ್ಷವೂ ಫಲಪುಷ್ಪ ಪ್ರದರ್ಶವನ್ನು ಅತ್ಯುತ್ತಮವಾಗಿ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಇನ್ನು ಈ ಬಾರಿಯ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನದಲ್ಲಿ ವಿಧಾನಸೌಧ ಸೆಂಟರ್ ಆಫ್ ಅಟ್ರ್ಯಾಕ್ಷನ್ ಆಗಿರಲಿದೆ. 

ಒಟ್ಟು 3.5 ಲಕ್ಷ ಬಗೆಬಗೆಯ ಹೂವುಗಳಿಂದ ಈ ವಿಧಾನಸೌಧ ನಿರ್ಮಿಸಲಾಗಿದೆ.

ಇದರ ಜೊತೆಗೆ ಕೆಂಗಲ್ ಹನುಮಂತಯ್ಯವನವರ ಹೂವಿನ ಪ್ರತಿಮೆಯೂ ಇಲ್ಲಿ ಇರಲಿದೆ. ಕೊಲ್ಕತ್ತಾ, ಪುಣೆ, ಆಂಧ್ರ, ಊಟಿ ಸೇರಿದಂತೆ ದೇಶದ ಮೂಲೆ ಮೂಲೆಯಿಂದ ಹೂವುಗಳನ್ನು ತರಿಸಲಾಗಿದೆ.

ಒಟ್ಟಾರೆ ಈ ಬಾರಿ 25 ಲಕ್ಷ ಹೂವುಗಳು ಫಲಪುಷ್ಪ ಪ್ರದರ್ಶನದಲ್ಲಿ ಮೈಬಳುಕಿಸಿ ಜನರ ಮನಸೆಳೆಯಲು ಸಿದ್ದವಾಗಿನಿಂತಿದೆ.

ಪ್ರದರ್ಶನ ನೋಡಲು ಬರುವ ವೀಕ್ಷಕರ ವಾಹನಗಳ ನಿಲುಗಡೆ ಸ್ಥಳ

ಡಾ.ಮರಿಗೌಡ ರಸ್ತೆ, ಆಲ್ ಅಮೀನ್ ಕಾಲೇಜ್ ಆವರಣದಲ್ಲಿ ದ್ವಿಚಕ್ರ ವಾಹನ ನಿಲುಗಡೆ

ಕೆ.ಹೆಚ್.ರಸ್ತೆ, ಶಾಂತಿನಗರ ಬಿ.ಎಂ.ಟಿ.ಸಿ. ಬಸ್ ನಿಲ್ದಾಣದ ಮೇಲೆ ನಾಲ್ಕು ಚಕ್ರದ ವಾಹನ ನಿಲುಗಡೆ

ಡಾ.ಮರಿಗೌಡ ರಸ್ತೆ- ಹಾಪ್ ಕಾಮ್ಸ್ ನಲ್ಲಿ ದ್ವಿ ಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳನ್ನು ನಿಲುಗಡೆ

ಜೆ.ಸಿ. ರಸ್ತೆ ಕಾರ್ಪೊರೇಷನ್ ಪಾರ್ಕಿಂಗ್ ಸ್ಥಳದಲ್ಲಿ ದ್ವಿ ಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳನ್ನು ನಿಲುಗಡೆ

Lalbagh Flower Show 2023

ವಾಹನಗಳ ನಿಲುಗಡೆ ನಿಷೇಧಿಸಿರುವ ರಸ್ತೆಗಳು

ಡಾ. ಮರಿಗೌಡ ರಸ್ತೆ,ಲಾಲ್ ಬಾಗ್ ಮುಖ್ಯ ದ್ವಾರದಿಂದ ನಿಮ್ಹಾನ್ಸ್ ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ

ಕೆ.ಹೆಚ್.ರಸ್ತೆ, ಕೆ.ಹೆಚ್.ವೃತ್ತದಿಂದ ಶಾಂತಿನಗರ ಜಂಕ್ಷನ್ ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ

ಲಾಲ್‌ ಬಾಗ್ ರಸ್ತೆ, ಸುಬ್ಬಯ್ಯ ವೃತ್ತದಿಂದ ಲಾಲ್‌ ಬಾಗ್ ಮುಖ್ಯದ್ವಾರದ ವರೆಗೆ

ಸಿದ್ದಯ್ಯ ರಸ್ತೆ, ಊರ್ವಶಿ ಥಿಯೇಟರ್ ಜಂಕ್ಷನ್ ನಿಂದ ವಿಲ್ಸನ್ ಗಾರ್ಡನ್ 12ನೇ ಕ್ರಾಸ್ ವರೆಗೆ

ಬಿ.ಎಂ.ಟಿ.ಸಿ ರಸ್ತೆಯಲ್ಲಿ, ರಸ್ತೆಯ ಎರಡೂ ಬದಿಗಳಲ್ಲಿ

Lalbagh Flower Show 2023

ಲಾಲ್ ಬಾಗ್ ವೆಸ್ಟಿಗೇಟ್‌ನಿಂದ ಆರ್.ವಿ. ಟೀಚರ್ ಕಾಲೇಜ್‌ವರೆಗೆ

ಆರ್ ವಿ ಟೀಚರ್ ಕಾಲೇಜ್‌ನಿಂದ ಆಶೋಕ ಪಿಲ್ಲರ್ ವರೆಗೆ

ಅಶೋಕ ಪಿಲ್ಲರ್‌ನಿಂದ ಸಿದ್ದಾಪುರ ಜಂಕ್ಷನ್‌ ವರೆಗೆ

ಡಾ.ಮರೀಗೌಡ ರಸ್ತೆ, ಲಾಲ್‌ ಬಾಗ್ ರಸ್ತೆ, ಕೆ.ಹೆಚ್. ರಸ್ತೆಯಲ್ಲಿ ವಾಹನ ಸಂಚಾರ ದಟ್ಟಣೆ ಸಾಧ್ಯತೆ ಹಿನ್ನೆಲೆ ಸಾರ್ವಜನಿಕರು ಸಾಧ್ಯವಾದಷ್ಟು ಸಮೂಹ ಸಾರಿಗೆ ವ್ಯವಸ್ಥೆ ಬಳಸಲು ಮನವಿ ಮಾಡಲಾಗಿದೆ.

ಗುಡ್‌ನ್ಯೂಸ್‌ : ರಾಜ್ಯದಲ್ಲಿ ಬರೋಬ್ಬರಿ 14,000 ಉದ್ಯೋಗ ಸೃಷ್ಟಿ – ಸಚಿವ ಪ್ರಿಯಾಂಕ್‌ ಖರ್ಗೆ

Lalbagh Flower Show 2023