News

Lalbagh Flower Show ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ ಇಷ್ಟು ಕೋಟಿ ರೂಪಾಯಿ ಆದಾಯ ಸಂಗ್ರಹ!

29 January, 2024 4:19 PM IST By: Hitesh
ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನ ಉತ್ತಮ ಜನಸ್ಪಂದನೆ

ರೈತರಿಗೆ ನಿತ್ಯದ ಪ್ರಮುಖ ಸುದ್ದಿಗಳನ್ನು ತಲುಪಿಸುವ ಉದ್ದೇಶದಿಂದ ಕೃಷಿ ಜಾಗರಣ ಕನ್ನಡ ಅಗ್ರಿನ್ಯೂಸ್‌ ಪರಿಚಯಿಸಿದೆ.

ಇಂದಿನ ಪ್ರಮುಖ ಸುದ್ದಿಗಳನ್ನು ನೋಡುವುದಾದರೆ, ಸ್ಕಾಲರ್‌ ಶಿಪ್‌ಗೆ ಸಂಬಂಧಿಸಿದಂತೆ ಸರ್ಕಾರವು ಮಹತ್ವದ ಸುದ್ದಿಯೊಂದನ್ನು ನೀಡಿದೆ.

ಲಾಲ್‌ಬಾಗ್‌ನಲ್ಲಿ ಈಚೆಗೆ ನಡೆದ ಫಲಪುಷ್ಪ ಪ್ರದರ್ಶನದಿಂದಾಗಿ ಕೋಟ್ಯಾಂತರ ರೂಪಾಯಿ ಆದಾಯವೂ ಸಂಗ್ರಹವಾಗಿದೆ.

ಈ ಎಲ್ಲ ಸುದ್ದಿಗಳ ಚುಟುಕು ವಿವರವನ್ನು ಇದರಲ್ಲಿ ನೀಡಲಾಗಿದೆ.  

1.ಸಹಕಾರ ಸಂಘಗಳ ರಿಜಿಸ್ಟರ್‌ಗೆ ನಾಳೆ ಚಾಲನೆ
2. ಆಸ್ತಿ ನೋಂದಣಿಯಲ್ಲಿ ಸರ್ಕಾರದಿಂದ ಮಹತ್ವದ ಹೆಜ್ಜೆ
3. ಕರಾವಳಿಯ ಪ್ರವಾಸೋದ್ಯಮಕ್ಕೆ ಭರ್ಜರಿ
4. ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ 2.59 ಕೋಟಿ ರೂ. ಸಂಗ್ರಹ!
5. ವಿದ್ಯಾರ್ಥಿಗಳಿಗೆ ಮಾಸಿಕ 60,000 ರೂ. ಶಿಷ್ಯವೇತನ!

ಸುದ್ದಿಗಳ ವಿವರ ಈ ರೀತಿ ಇದೆ. 

1. ಕೇಂದ್ರ ಸಚಿವ ಅಮಿತ್ ಶಾ ಅವರು ನವದೆಹಲಿಯಲ್ಲಿ ಮಂಗಳವಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ಗಳ

ಗಣಕೀಕರಣ ಯೋಜನೆ ಮತ್ತು ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಸಹಕಾರ ಸಂಘಗಳ ರಿಜಿಸ್ಟರ್‌  

ಚಾಲನೆ ನೀಡಲಿದ್ದಾರೆ. ಸಹಕಾರ ಸಚಿವಾಲಯ ಈ ಕಾರ್ಯಕ್ರಮವನ್ನು ಆಯೋಜಿಸಿದೆ.

ಸಹಕಾರದಿಂದ ಸಮೃದ್ಧಿ  ಹಾಗೂ ಕೋಟ್ಯಾಂತರ ರೈತರ ಅಭಿವೃದ್ಧಿಗಾಗಿ ಸಹಕಾರ ಸಚಿವಾಲಯ ಬದ್ಧವಾಗಿದೆ.

ಮಂಗಳವಾರ ನಡೆಯುವ ಕಾರ್ಯಕ್ರಮದಲ್ಲಿ ಅಂದಾಜು 1, 200ಕ್ಕೂ ಹೆಚ್ಚು ಜನ ಭಾಗವಹಿಸುವ ಸಾಧ್ಯತೆ ಇದೆ ಎಂದು ಪ್ರಕಟಣೆ ತಿಳಿಸಿದೆ.  
-----------------------------

2. ಆಸ್ತಿ ನೋಂದಣಿಯಲ್ಲಿ ಮಹತ್ವದ ಬದಲಾವಣೆಯನ್ನು ತರಲು ಸರ್ಕಾರ ಮುಂದಾಗಿದೆ. ಇತ್ತೀಚಿನ ದಿನಗಳಲ್ಲಿ ಹಲವೆಡೆ ಆಸ್ತಿ

ನೋಂದಣಿ ನಕಲಿ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಆಧಾರ್‌ ದೃಢೀಕರಣದ ಮೂಲಕ ಆಸ್ತಿ ನೋಂದಣಿ

ಮಾಡುವ ಬಗ್ಗೆ ಕಾನೂನು ಸಲಹೆ ಪಡೆಯಲು ಸರ್ಕಾರ ಮುಂದಾಗಿದೆ.

ಸಾಧಕ ಬಾಧಕಗಳ ಚರ್ಚೆ ನಂತರ ತೀರ್ಮಾನವನ್ನು ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
----------------------------

3. ಕರ್ನಾಟಕದ ಕರಾವಳಿಯ ಉಡುಪಿ ಜಿಲ್ಲೆಯು ಪರಿಸರ ಸ್ನೇಹಿ ಪ್ರವಾಸೋದ್ಯಮಕ್ಕೆ ಉತ್ತಮವಾಗಿದೆ.

ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲಾಗುವುದು ಎಂದು

ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ತಿಳಿಸಿದ್ದಾರೆ.
----------------------------- 

-----------------------------
4. ಬೆಂಗಳೂರಿನ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಒಟ್ಟು 5 ಲಕ್ಷದ 61 ಸಾವಿರ ಜನರು ಭೇಟಿ ನೀಡಿದ್ದಾರೆ.

ಈ ಮೂಲಕ  2.59 ಕೋಟಿ ರೂಪಾಯಿ ಪ್ರವೇಶ ಶುಲ್ಕ ಸಂಗ್ರಹವಾಗಿದೆ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
-----------------------------

5. ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳಲ್ಲಿ ಸ್ಥಳೀಯ ಆಡಳಿತವನ್ನು ಬಲಪಡಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು

ಪಂಚಾಯತ್ ರಾಜ್ ಇಲಾಖೆಯು “ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್” ಸ್ಥಾಪಿಸಿದೆ.

ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳ 51 ತಾಲ್ಲೂಕುಗಳಲ್ಲಿ ಪ್ರತಿ ತಾಲ್ಲೂಕಿಗೆ ಒಬ್ಬರಂತೆ

“ಫೆಲೋಗಳನ್ನು ಎರಡು ವರ್ಷಗಳ ಅವಧಿಗೆ ನೇಮಕಾತಿ ಮಾಡಿಕೊಳ್ಳಲು ಮಂಜೂರಾತಿ ನೀಡಲಾಗಿದೆ.

ಆಯ್ಕೆಯಾದ ಫೆಲೋಗಳಿಗೆ ಮಾಸಿಕ 60,000 ರೂ. ಶಿಷ್ಯವೇತನ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.  

ಇನ್ನು ರಾಜ್ಯ ಸರ್ಕಾರವು ಪರಿಚಯಿಸಿರುವ ಈ ಯೋಜನೆಯಿಂದಾಗಿ ಸಾವಿರಾರು ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.