News

ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ: ಬೆಳೆಗಳಿಗೆ ವಿಮೆ ಕಂತು ತುಂಬಲು ನವೆಂಬರ್ 30 ಕೊನೆಯ ದಿನ

28 November, 2020 6:30 AM IST By:

2020ರ ಹಿಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ.

 ಹಿಂಗಾರು ಬೆಳೆ ಜೋಳ, ಕಡಲೆ, ಸೂರ್ಯಕಾಂತಿ ಹಾಗೂ ಕುಸಮೆ ಬೆಳೆಗಳಿಗೆ ಬೆಳೆ ವಿಮೆಗೆ ರೈತರು ನೋಂದಣಿ ಮಾಡಿಸಲು  ನವೆಂಬರ್ 30 ಕೊನೆಯ ದಿನವಾಗಿದೆ. ಪ್ರಸ್ತಕ ಸಾಲು ಮತ್ತು ಹಿಂಗಾರು ಹಂಗಾಮಿನಲ್ಲಿ ಮಳೆ ಅಭಾವ ಅಥವಾ ಇತರೆ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಅಥವಾ ಸ್ಧಳ, ನಿರ್ಧಿಷ್ಟ, ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂ ಕುಸಿತ, ಬೆಳೆ ಮುಳುಗಡೆ, ಮೇಘ ಸ್ಪೋಟ ಹಾಗೂ ಗುಡುಗು ಮಿಂಚುಗಳಿಂದಾಗಿ ಉಂಟಾಗುವ ಬೆಂಕಿ ಅವಘÀಡ ಸಂದರ್ಭದಲ್ಲಿ ಬೆಳೆ ನಷ್ಟವುಂಟಾದ್ದಲ್ಲಿ ರೈತರು ಬೆಳೆ ವಿಮೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಜಿಲ್ಲೆಯ ರೈತ ಭಾಂದವರು ಉಳಿದ ಬೆಳೆಗಳ ಆಯ್ಕೆಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಆಯಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಹಾಗೂ ನೋಂದಣಿಗಾಗಿ ಹತ್ತಿರದ ಬ್ಯಾಂಕುಗಳಿಗೆ ಅಥವಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘÀಗಳಿಗೆ ಸಂಪರ್ಕಿಸಿ ಬೆಳೆ ವಿಮೆ ನೊಂದಣಿಯ ಸದುಪಯೋಗವನ್ನು ಪಡೆದುಕೊಳ್ಳಬೇಕು.

ರೈತರು ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1800 425 7919 ತಮ್ಮ ತಾಲೂಕಿನ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಅಥವಾ ಬೆಂಗಳೂರಿನ ಯೂನಿವರ್ಸಲ್ ಸೊಂಪೊ  ಜನರಲ್  ಇನ್ಸುರೆನ್ಸ್ ಕಂಪನಿ ಲಿ. ವಿಮಾ ಸಂಸ್ಥೆ ಈ ಕೆಳಕಂಡ ವಿಮಾ ಪ್ರತಿನಿಧಿಗಳನ್ನು ಸಂಪರ್ಕಿಸಬೇಕು.