News

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ ಅರೆ-ಅಲೆಮಾರಿ ವಿದ್ಯಾರ್ಥಿಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

31 May, 2021 5:25 PM IST By:

2020-21ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ”, “ಶುಲ್ಕ ವಿನಾಯಿತಿ”, “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಹಾಗೂ “ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ” ಸೌಲಭ್ಯಕ್ಕಾಗಿ ಜಿಲ್ಲೆಯ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ ಅರೆ-ಅಲೆಮಾರಿ ವಿದ್ಯಾರ್ಥಿಗಳಿಂದ (ಈಗಾಗಲೇ ಎಸ್‌ಎಸ್‌ಪಿ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪ್ರಾರಂಭಗೊಳಿಸಿ, ಅರ್ಜಿಯನ್ನು ಪೂರ್ಣಗೊಳಿಸದೇ ಇರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುವಂತೆ) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 2021ರ ಜೂನ್ 20ರವರೆಗೆ ವಿಸ್ತರಿಸಲಾಗಿದ್ದು, ವಿದ್ಯಾರ್ಥಿಗಳಿಗೆ  ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ ಎಂದು ಕಲಬುರಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಕೋವಿಡ್-19 ಸೋಂಕು ಹಿನ್ನೆಲೆಯಲ್ಲಿ 2021ರ ಜೂನ್ 7 ರವರೆಗೆ ಲಾಕ್‌ಡೌನ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದ್ದು, ಇದರ ಪ್ರಯುಕ್ತ ವಿದ್ಯಾರ್ಥಿಗಳು ಇ-ಅಟೆಷ್ಟೆಷನ್ ಮಾಡಿಸಲು ಸಾಧ್ಯವಾಗಿರುವುದಿಲ್ಲ. ಈಗಾಗಲೇ ಎಸ್‌ಎಸ್‌ಪಿ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪ್ರಾರಂಭಗೊಳಿಸಿದ್ದು, ಅರ್ಜಿಯನ್ನು ಪೂರ್ಣಗೊಳಿಸದೇ ಇರುವು ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುವಂತೆ  ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.  ವಿದ್ಯಾರ್ಥಿಗಳಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.

ಅರ್ಹ ವಿದ್ಯಾರ್ಥಿಗಳು ಇಲಾಖೆಯ www.ssp.postmatric.karnataka.gov.inವೆಬ್‌ಸೈಟ್‌ನಲ್ಲಿ   ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿವೇತನಕ್ಕೆ ಸಂಬAಧಿಸಿದAತೆ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಸರ್ಕಾರಿ ಆದೇಶಗಳ ಕುರಿತು ಮತ್ತಿತರ ಮಾಹಿತಿಗಾಗಿ  www.bcwd.karnataka.gov.in ವೆಬ್‌ಸೈಟ್‌ನ್ನು ಸಂಪರ್ಕಿಸಬೇಕು. ಇಲಾಖಾ  ಸಹಾಯವಾಣಿ ಸಂಖ್ಯೆ 8050770005, 8050770004, ಇ-ಮೇಲ್ ವಿಳಾಸ  bcwd.scholarship@karnataka.gov.inಗೆ ಸಂಪರ್ಕಿಸಬೇಕು.

ರಾಜ್ಯ ವಿದ್ಯಾರ್ಥಿ ವೇತನ ತಂತ್ರಾAಶದ ಸಹಾಯವಾಣಿ ಇ-ಮೇಲ್ postmatrichelp@karnataka.gov.in ಹಾಗೂ ಸಹಾಯವಾಣಿ ಸಂಖ್ಯೆ 080-35254757ಗೆ ಸಂಪರ್ಕಿಸಬೇಕು. ಈ ಹಿಂದೆ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು 2021ರ ಮೇ 31 ರಂದು ನಿಗದಿಪಡಿಸಲಾಗಿತ್ತೆಂದು ಅವರು ತಿಳಿಸಿದ್ದಾರೆ.