1. ಸುದ್ದಿಗಳು

ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಏ. 30

Ramlinganna
Ramlinganna
Scholarship

ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ ಅರೆ-ಅಲೆಮಾರಿ ವಿದ್ಯಾರ್ಥಿಗಳಿಂದ 2020-21 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ”, “ಶುಲ್ಕ ವಿನಾಯಿತಿ”, “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ”, ಮತ್ತು “ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ” ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 2021 ರ ಏಪ್ರಿಲ್ ೩30 ರವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಅರ್ಹ ವಿದ್ಯಾರ್ಥಿಗಳು www.ssp.postmatric.karnataka.gov.in ವೆಬ್‌ಸೈಟ್‌ದಲ್ಲಿ ಏಪ್ರಿಲ್ ೩೦ ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ www.bcwd.karnataka.gov.in/   postmatrichelp@karnataka.gov.in, ಇಲಾಖಾ ಸಹಾಯವಾಣಿ ಸಂಖ್ಯೆ 8050770005, 8050770004   ಹಾಗೂ ದೂರವಾಣಿ ಸಂಖ್ಯೆ 080-35254757 ಗೆ ಸಂಪರ್ಕಿಸಬಹುದಾಗಿದೆ.

ಅದರಂತೆ ಎಸ್.ಎಸ್.ಪಿ. ತಂತ್ರಾಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ಬಹಳಷ್ಟು ವಿದ್ಯಾರ್ಥಿಗಳು ಈವರೆಗೆ ಯಾವುದೇ ತಮ್ಮ ಮೂಲ ದಾಖಲಾತಿಗಳೊಂದಿಗೆ  ಖುದ್ದಾಗಿ ಬಂದು ಇ-ಅಟೆಸ್ಟೇಷನ್ ಮಾಡಿಕೊಂಡಿರುವದಿಲ್ಲ. ಆದ್ದರಿಂದ ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ತಾರಫೇಲ್ ೮ನೇ ಕ್ರಾಸ್, ಡಂಕಿನ ಭಾವಿ ಹತ್ತಿರ ಜಿಡಿಎ ಲೇಔಟ್, ಅಂಬಿಕಾ ನಗರ ಹಿಂದುಗಡೆ ಡಿ.ದೇವರಾಜ ಅರಸು ಭವನ ಕಲಬುರಗಿ-ಕಚೇರಿಗೆ ಖುದ್ದಾಗಿ ಬಂದು 2021ರ ಏಪ್ರಿಲ್ 30 ರೊಳಗಾಗಿ ಇ-ಅಟೆಸ್ಟೇಷನ್ ಮಾಡಿಕೊಳ್ಳಬೇಕು. ಇದಕ್ಕೆ ತಪ್ಪಿದಲ್ಲಿ ತಮ್ಮ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ.

ಜಿಲ್ಲೆಯ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು, ಹಾಗೂ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳ ಹಾಗೂ ವಿದ್ಯಾರ್ಥಿಗಳ ಪಾಲಕರು/ಪೊಷಕರಿಗೆ ಇದನ್ನು ಗಮನಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9148489157ಗೆ ಸಂಪರ್ಕಿಸಲು ಕೋರಲಾಗಿದೆ.

Share your comments

Latest feeds

More News
Krishi Jagran Kannada Magazine Subscription Online Subscription
Krishi Jagran Kannada Subscription

CopyRight - 2021 Krishi Jagran Media Group. All Rights Reserved.