News

Breaking: ರೈತರ ಮೇಲೆ ಲಾಠಿ ಚಾರ್ಜ್ ನಡೆಸಿದ ಪೊಲೀಸರು

28 April, 2022 12:17 PM IST By: Maltesh
ಸಾಂದರ್ಭಿಕ ಚಿತ್ರ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಗೆ ಹೆಸರು ನೋಂದಾಯಿಸಲು ಹೊಸದುರ್ಗ ಎಪಿಎಂಸಿಯಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದ ರೈತರ ಮೇಲೆ ಪೊಲೀಸರು ಲಾಠಿ ಬೀಸಿದ್ದಾರೆ. ನೋಂದಣಿ ಸ್ಥಗಿತಗೊಳಿಸಿದ ಕ್ರಮಕ್ಕೆ ರಾಗಿ ಬೆಳೆಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹೊಸದುರ್ಗ ಪಟ್ಟಣದಲ್ಲಿನ ರಾಗಿ ಖರೀದಿ ಕೇಂದ್ರ ಇದೆ ನೊಂದಣಿ ಪ್ರಕ್ರಿಯೆಗೆ ರೈತರು ಬಂದಿದ್ದರು. ಅವಧಿಗೂ ಮುನ್ನ ಖರೀದಿ ಕೇಂದ್ರ ಬಂದ್ ಮಾಡುವುದಾಗಿ ಅಧಿಕಾರಿಗಳು ಹೇಳಿದ ಹಿನ್ನೆಲೆಯಲ್ಲಿ ರೈತರು ಆಕ್ರೋಶಗೊಂಡು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು, ರೈತರ ನಡುವೆ ಮಾತಿನ ಚಕಮಕಿಯಾಗಿದೆ. ಗುಂಪು ಚದುರಿಸಲು ಈ ವೇಳೆ ಪೊಲೀಸರು ಲಾಠಿ ಏಟು ನೀಡಿದ್ದಾರೆ. ಹೊಸದುರ್ಗ, ಚಿತ್ರದುರ್ಗ, ಚಿಕ್ಕಜಾಜೂರು ರೈತರಿಂದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಪೈಲ್ವಾನ್ ಕಿಚ್ಚ ಸುದೀಪ್ ಕೊಟ್ಟ ಗುನ್ನಾಕೆ ಮಕಾಡೆ ಮಲಗಿದ ಅಜಯ್ ದೇವಗನ್

ಪ್ರಸ್ತುತ ರಾಗಿ ಖರೀದಿ ನೋಂದಣಿ ಅವಧಿಯನ್ನು ವಿಸ್ತರಿಸಿ, ರಾಜ್ಯ ಸರಕಾರ ಏಪ್ರಿಲ್‌ 19ರಂದು ಆದೇಶ ಹೊರಡಿಸಿತ್ತು. ಈ ಆದೇಶದಂತೆ 2021-22ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಈಗಾಗಲೇ ರಾಗಿ ಮಾರಾಟ ಮಾಡಿರುವ ರೈತರನ್ನು ಹೊರತುಪಡಿಸಿ, ಇನ್ನುಳಿದ ರಾಗಿ ಬೆಳೆದ ಅರ್ಹ ರೈತರಿಂದ ಪ್ರತಿ ಕ್ವಿಂಟಾಲ್‌ಗೆ 3377 ರೂ. ದರದಲ್ಲಿ ರಾಜ್ಯ ಸರಕಾರವು ರಾಗಿ ನೋಂದಣಿ ಮತ್ತು ಖರೀದಿಗೆ ಅವಕಾಶ ನೀಡಿದೆ.

#Recruitment-ಕೃಷಿ ಸಚಿವಾಲಯ ನೇಮಕಾತಿ; 68,000 ಸಂಬಳ!

ಅತಿದೊಡ್ಡ ಹಾಲು ಸಹಕಾರಿ ಸಂಸ್ಥೆ ಅಮೂಲ್‌ನಲ್ಲಿ ಭಾರೀ ನೇಮಕಾತಿ..ಪದವಿ ಹೊಂದಿದವರಿಗೆ ಭರ್ಜರಿ ಅವಕಾಶ