ರಾಜ್ಯ ಸರ್ಕಾರ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ (Gruhsajyoti scheme) ಆಗಸ್ಟ್ 1 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
Free electricity :ಜೂನ್ 15 ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳ ಮೂಲಕ ಹಾಗೂ ಮನೆಯಲ್ಲಿಯೇ ಕಂಪ್ಯೂಟರ್ ಮೂಲಕ ಅಥವಾ ಮೊಬೈಲ್ ಆಪ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.
ಬಾಡಿಗೆದಾರರರನ್ನು ಒಳಗೊಂಡಂತೆ ವಿದ್ಯುತ್ ಬಳಕೆಯ ಒಂದು ವರ್ಷದ ಸರಾಸರಿ ಲಭ್ಯವಾದ ನಂತರ ಈ ದತ್ತಾಂಶವನ್ನು ಆಧರಿಸಿ, ಉಚಿತ ವಿದ್ಯುತ್ ಸೌಲಭ್ಯ ನೀಡಲಾಗುವುದು. ಹಳೆ ವಿದ್ಯುತ್ ಬಿಲ್ ಬಾಕಿ ಪಾವತಿಗೆ ಸೆಪ್ಟೆಂಬರ್ 30 ರ ವರೆಗೆ ಅವಕಾಶ ಕಲ್ಪಿಸಲಾಗಿದೆ.
200 units free electricity : ಗೃಹಜ್ಯೋತಿ ಯೋಜನೆಗೆ ಆಧಾರ್, ಆರ್. ಆರ್. ಸಂಖ್ಯೆ, ಬಾಡಿಗೆದಾರರು ಕರಾರು ಪತ್ರ ಹಾಗೂ ಅದೇ ವಿಳಾಸದ ಮತದಾರರ ಗುರುತು ಚೀಟಿ ಮಾಹಿತಿ ಸಲ್ಲಿಸಿ, ಸೌಲಭ್ಯ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.
ಗೃಹ ಜ್ಯೋತಿ ಯೋಜನೆಗೆ ಆಗಸ್ಟ್ 1 ರಂದು ಕಲಬುರಗಿಯಲ್ಲಿ ಚಾಲನೆ ನೀಡುವ ಕುರಿತು ಯೋಚಿಸುತ್ತಿದ್ದೇವೆ. ಈ ಯೋಜನೆಯ ಮಾರ್ಗಸೂಚಿಗಳ ಕುರಿತು ಇರುವ ಎಲ್ಲ ಗೊಂದಲಗಳನ್ನು ನಿವಾರಿಸಿ, ನಾಗರಿಕರಿಗೆ ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.
ಗೃಹ ಜ್ಯೋತಿ ಯೋಜನೆಗೆ ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಾಯಿಸಲು ಅವಕಾಶವಿದೆ. ಇದಲ್ಲದೆ, ಎಸ್ಕಾಂಗಳ ಎಲ್ಲ ಕಚೇರಿಗಳಲ್ಲಿ ಹೆಲ್ಪ್ ಡೆಸ್ಕ್ ಸ್ಥಾಪಿಸಲಾಗುವುದು.
"ಗೃಹಜ್ಯೋತಿ" ಉಚಿತ ವಿದ್ಯುತ್ ಯೋಜನೆ ಬಾಡಿಗೆದಾರರಿಗೂ ಅನ್ವಯಿಸುತ್ತಿದ್ದು, ಯೋಜನೆಯ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ.
"ಗೃಹಲಕ್ಷ್ಮಿ" ಯೋಜನೆಯ ಲಾಭ ಪಡೆಯಲು ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದ್ದು, ತೆರಿಗೆ ಪಾವತಿಸುವವರು ಹಾಗೂ ಜಿ.ಎಸ್.ಟಿ ನೋಂದಣಿ ಮಾಡಿಕೊಂಡಿರುವವರು ಈ ಯೋಜನೆಯ ವ್ಯಾಪ್ತಿಗೆ ಬರುವುದಿಲ್ಲ.