1. ಸುದ್ದಿಗಳು

ಪಿಯುಸಿ ಉಪನ್ಯಾಸಕರ ನೇಮಕ- ಜು. 8ಕ್ಕೆ ಆನ್ ಲೈನ್ ಕೌನ್ಸಲಿಂಗ್ ನಡೆಸಲು ಸೂಚನೆ

Lecturer

ತಾಂತ್ರಿಕ ಕಾರಣ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಕಳೆದ ಐದು ವರ್ಷಗಳಿಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಕೊನೆಗೂ ಜುಲೈ 8 ರ ನಂತರ ಮುಗಿಯಲಿದೆ.

2015 ರಲ್ಲಿ 1130 ಹುದ್ದೆ ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. . ನಂತರ ಮತ್ತೆ ಹುದ್ದೆಗಳ ಸಂಖ್ಯೆಯಲ್ಲಿ ಮಾರ್ಪಾಡು ಮಾಡಿ ಅರ್ಜಿ ಆಹ್ವಾನಿಸಲಾಗಿತ್ತು. ಆದರೂ ಸಹ ಐದು ವರ್ಷ ಕಳೆದರೂ ಸಹ ನೇಮಕಾತಿ ಪ್ರಕ್ರಿಯೆ ಇನ್ನೂ ಮುಗಿದಿಲ್ಲ. ಸಂವಿಧಾನದ 371(J) ಕಲಂ ಪ್ರಕಾರ ವಿಶೇಷ ಸ್ಥಾನಮಾನದ ಮೀಸಲಾತಿಯಡಿ ಕಲ್ಯಾಣ ಕರ್ನಾಟಕದ ಜಿಲ್ಲೆಗಳ 502 ಅಭ್ಯರ್ಥಿಗಳು ಪಿಯು ಉಪನ್ಯಾಸಕರಾಗಿ ನೇಮಕಗೊಂಡಿದ್ದರು,. 2019 ರ ಆಗಸ್ಟ್‌ನಲ್ಲಿ ಅಂತಿಮ ಪಟ್ಟಿ ಬಿಡುಗಡೆ ಮಾಡಿತ್ತು. ಈ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ದಾಖಲಾತಿ ಪರಿಶೀಲನೆಯೂ ಮುಗಿದಿತ್ತು.. ಆದರೂ ನೇಮಕಾತಿ ಆದೇಶ ನೀಡದೇ ವಿಳಂಬ ಧೋರಣೆ ಅನುಸರಿಸುತ್ತಿರುವುದು ಅಭ್ಯರ್ಥಿಗಳಿಗೆ ಬೇಸರ ತರಿಸಿತ್ತು. ಉಪನ್ಯಾಸಕರ ಹುದ್ದೆಗೆ ಆಯ್ಕೆಯಾದವರು ಈ ಆದೇಶವನ್ನೇ ಕಾಯುತ್ತ ಕುಳಿತಿದ್ದರು. ಇತ್ತ ಯಾವುದೇ ಹುದ್ದೆಗೆ ಹೋಗದೇ ದುಡಿಮೆಯ ಸಮಸ್ಯೆ ಎದುರಿಸುವಂತಾಗಿತ್ತು. ಈಗ ಎಲ್ಲಾ ಅಭ್ಯರ್ಥಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಪಿಯುಸಿ ಉಪನ್ಯಾಸಕರ‌ ನೇಮಕಾತಿ ಕೌನ್ಸೆಲಿಂಗ್ ನ್ನು ಜುಲೈ7 ರಂದು‌ ನಡೆಸಲು ಶಿಕ್ಷಣ ಸಚಿವ ಸುರೇಶ್‌ಕುಮಾರ್ ಸೂಚನೆ‌ ನೀಡಿದ್ದಾರೆ.

ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರಗಳೊಂದಿಗೆ ನಡೆಸಲು ಸೂಚಿಸಲಾಗಿದ್ದು, ಹೆಚ್ಚಿನ ಪ್ರಕ್ರೀಯೆಗಳನ್ನು ಆನ್ ಲೈನ್ ಮೂಲಕ ಕೌನ್ಸೆಲಿಂಗ್ ನಡೆಸಲೂ ಸಹ ಸಚಿವರು ನಿರ್ದೇಶಿಸಿದ್ದಾರೆ. ಕೌನ್ಸೆಲಿಂಗ್ ಸಂದರ್ಭದಲ್ಲಿ ಕೋವಿಡ್ ಸುರಕ್ಷಾ ಕ್ರಮಗಳನ್ನು ಪಾಲಿಸಿಕೊಂಡು ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಆದೇಶ ನೀಡಿದ್ದಾರೆ.

Published On: 24 June 2020, 05:46 PM English Summary: Lecturer appointment

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.