ರೈತರಿಗೆ ಜೀವವಿಮೆ ಸೌಲಭ್ಯ ಜಾರಿಗೊಳಿಸಿದ್ದು,180 ಕೋಟಿ ರೂ.ಗಳ ಪ್ರೀಮಿಯಂ ಮೊತ್ತವನ್ನು ಸರ್ಕಾರ ಭರಿಸುವ ಯೋಜನೆ ಇದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಪಿಂಚಣಿದಾರರಿಗೆ ಕೇಂದ್ರ ಸರ್ಕಾರದಿಂದ ಸಿಹಿಸುದ್ದಿ! ಈ ಮಹತ್ವದ ಸುದ್ದಿಯನ್ನು ತಪ್ಪದೇ ಓದಿ
ರೈತರಿಗೆ ಜೀವವಿಮೆ ಸೌಲಭ್ಯ ಜಾರಿಗೊಳಿಸಿದ್ದು,180 ಕೋಟಿ ರೂ.ಗಳ ಪ್ರೀಮಿಯಂ ಮೊತ್ತವನ್ನು ಸರ್ಕಾರ ಭರಿಸುವ ಯೋಜನೆ ಇದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ರೈತರ ಉತ್ತಮ ಆರೋಗ್ಯ ಚಿಕಿತ್ಸೆಗೆ ಯಶಸ್ವಿನಿ ಯೋಜನೆಯನ್ನು ಪುನರಾರಂಭಿಸಲಾಗಿದೆ. ಆವರ್ತ ನಿಧಿಯನ್ನು 3600 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ.
ರೈತವಿದ್ಯಾನಿಧಿ ಯೋಜನೆಯಡಿ ರೈತರ ಮಕ್ಕಳ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡಲಾಗುತ್ತಿದೆ.
ದೇಶದಲ್ಲಿ ಕೃಷಿ ಕ್ಷೇತ್ರ ಬೆಳೆದಿದ್ದರೂ, ರೈತ ಅಭಿವೃದ್ಧಿ ಹೊಂದಿಲ್ಲ.
ಆದಕಾರಣ, ನಮ್ಮ ಸರ್ಕಾರದ ಕಾರ್ಯಕ್ರಮಗಳು ರೈತನ ಸುತ್ತ ರೂಪಿಸಲಾಗಿದೆ. ರೈತರ ಅಭ್ಯುದಯಕ್ಕಾಗಿ ಬಡ್ಡಿ ರಹಿತ ಸಾಲವನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸಲಾಗಿದೆ.
ಕೃಷಿ ಜೊತೆಗೆ ಕುರಿ ಸಾಕಾಣಿಕೆ: 7ರಿಂದ 8 ಲಕ್ಷದವರೆಗೆ ಗಳಿಸುತ್ತಿರುವ ಮಹಿಳೆ!
ಕಳೆದ ವರ್ಷ 400 ಕೋಟಿ ರೂ. ವೆಚ್ಚದಲ್ಲಿ ಡೀಸೆಲ್ ಸಹಾಯಧನವನ್ನು ಸರ್ಕಾರ ನೀಡಿತ್ತು. ಈ ವರ್ಷ ಕೃಷಿ ಚಟುವಟಿಕೆಗೆ ಪೂರಕವಾಗುವಂತೆ ಬೀಜ ಗೊಬ್ಬರಗಳ ಖರೀದಿಗೆ ಪ್ರತಿಯೊಬ್ಬ ರೈತನಿಗೂ 10 ಸಾವಿರ ರೂ.ಗಳ ನೆರವು ನೀಡಲಾಗುತ್ತಿದೆ.
ದೇಶದ ಜಿಡಿಪಿ 6 ರಿಂದ 8 % ಇದ್ದರೆ, ರಾಜ್ಯದ ಜಿಡಿಪಿ ಶೇ. 9 ರಷ್ಟಿದೆ. ಈಗ ಕರ್ನಾಟಕದ ತಲಾವಾರು ಆದಾಯ 3.47 ಲಕ್ಷವಾಗಿದೆ. ರಾಜ್ಯದ ಜನ ಶ್ರೀಮಂತರಾದರೆ, ರಾಜ್ಯ ಶ್ರೀಮಂತವಾಗುತ್ತದೆ ಎಂದರು.
ಸ್ತ್ರೀ ಸಾಮರ್ಥ್ಯ ಯೋಜನೆ ಹಾಗೂ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಗಳಡಿ ಮಹಿಳೆಯರು ಹಾಗೂ ಯುವಕರ ಸ್ವ ಸಹಾಯ ಸಂಘಗಳಿಗೆ ಆರ್ಥಿಕ ಸಹಾಯ, ಉತ್ಪನ್ನಗಳ ಯೋಜನೆ, ತರಬೇತಿ, ಮಾರುಕಟ್ಟೆ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ.
Dearness allowance: ಸರ್ಕಾರಿ ನೌಕರರೇ ಗಮನಿಸಿ; ಶೀಘ್ರದಲ್ಲೇ 4% ತುಟ್ಟಿಭತ್ಯೆ ಹೆಚ್ಚಳ ನಿರೀಕ್ಷೆ!
ಸರ್ಕಾರಿ ಕಾಲೇಜುಗಳಲ್ಲಿ ಎಲ್ಲ ವಿದ್ಯಾರ್ಥಿಗಳಿಗೂ ಪಿಯುಸಿ ಯಿಂದ ಡಿಗ್ರಿವರೆಗೂ ಉಚಿತ ಶಿಕ್ಷಣವನ್ನು ನೀಡುವ ಯೋಜನೆ ರೂಪಿಸಲಾಗಿದ್ದು, ಇದರಿಂದ ರಾಜ್ಯದ ಸುಮಾರು 8 ಲಕ್ಷ ವಿದ್ಯಾರ್ಥಿಗಳಿಗೆ ಲಾಭವಾಗಲಿದೆ.
ಸುಮಾರು ದುಡಿಯುವ ಮಹಿಳೆಯರಿಗೆ ಉಚಿತ ಬಸ್ ಪಾಸ್ ಸೌಲಭ್ಯ, ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ, ಭೂರಹಿತ ಕೃಷಿ ಮಹಿಳಾ ಕಾರ್ಮಿಕರಿಗೆ 1000 ರೂ. ಗಳ ಭತ್ಯೆ ನೀಡುವ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದರು.