News

ಸ್ವಯಂ ಉದ್ಯೋಗಕ್ಕಾಗಿ ಸಾಲ ಸೌಲಭ್ಯ ನೀಡಲು ವಿಕಲಚೇತನರಿಂದ ಅರ್ಜಿ ಆಹ್ವಾನ

04 October, 2020 3:09 PM IST By:

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಆಧಾರ ಯೋಜನೆಯಡಿ ಸ್ವಯಂ ಉದ್ಯೋಗಕ್ಕಾಗಿ ಬ್ಯಾಂಕ್‌ಗಳ ಮೂಲಕ ಸಾಲ ಪಡೆಯುವ ವಿಕಲಚೇತನರಿಗೆ ಶೇ.50 ರಷ್ಟು ಸಬ್ಸಿಡಿ (ಗರಿಷ್ಠ 50 ಸಾವಿರ) ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವವರು 18 ರಿಂದ 55 ವರ್ಷದೊಳಗಿರಬೇಕು. ಅರ್ಜಿಯೊಂದಿಗೆ ಇತ್ತೀಚಿನ 2 ಭಾವಚಿತ್ರ, ಇಲಾಖೆಯಿಂದ ನೀಡಲಾದ ಗುರುತಿನ ಚೀಟಿ/ಯುಡಿಐಡಿ, ರಹವಾಸಿ, ವಯಸ್ಸಿನ ದಾಖಲಾತಿ, ಆಧಾರ ಕಾರ್ಡ್, ರೇಷನ್ ಕಾರ್ಡ್‌, ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ಬ್ಯಾಂಕ್ ಖಾತೆ ವಿವರ ಹಾಗೂ ಯೋಜನಾ ವರದಿಯೊಂದಿಗೆ ಅಕ್ಟೋಬರ್‌ 16 ರಂದು ಸಂಜೆ 5 ಗಂಟೆಯೊಳಗೆ ಆಯಾ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಚೇರಿಗೆ ಸಂಪರ್ಕಿಸಲು ಕೋರಲಾಗಿದೆ.

ಇದನ್ನೂ ಓದಿ :  ಉದ್ಯೋಗಿನಿ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಸ್ವಂತ ಉದ್ಯೋಗ ಕೈಗೊಳ್ಳಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಸಂಪೂರ್ಣ ಮಾಹಿತಿ ಈ ಮುಂದಿನ ಲಿಂಕ್ ಕ್ಲಿಕ್ ಮಾಡಿ. ಮಹಿಳೆಯರಿಗೆ ಸಂತಸದ ಸುದ್ದಿ- ಸ್ವ ಉದ್ಯೋಗ ಕೈಗೊಳ್ಳಲು 3 ಲಕ್ಷ ರೂಪಾಯಿಯವರೆಗೆ ಸಾಲ

ಇದನ್ನೂ ಓದಿ :ಕರ್ನಾಟಕ ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಕೆಳಕಂಡ ವಿವಿಧ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ನ್ನು ಕ್ಲಿಕ್ ಮಾಡಿ. ಸ್ವಯಂ ಉದ್ಯೋಗಕ್ಕಾಗಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ