ಕರ್ನಾಟಕ ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಕೆಳಕಂಡ ವಿವಿಧ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮ ತಿಳಿಸಿದೆ.
ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವ-ಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಭೂ ಖರೀದಿ ಯೋಜನೆ ಹಾಗೂ ಬ್ಯಾಂಕ್‍ಗಳ ಸಹಯೋಗದೊಂದಿಗೆ ಸಾಲ ಮತ್ತು ಸಹಾಯಧನದ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ನಿಗಮದ ಆಯಾ ಜಿಲ್ಲಾ ಕಚೇರಿಯಿಂದ ಅಥವಾ ನಿಗಮದ ವೆಬ್‍ಸೈಟ್‍ದಿಂದ ಪಡೆದು ಭರ್ತಿ ಮಾಡಿ ಅರ್ಜಿದೊಂದಿಗೆ ಜಾತಿ, ಆದಾಯ ಪ್ರಮಾಣಪತ್ರ, ಆಧಾರ್ ಕಾರ್ಡ್, ಫೋಟೋ ಮತ್ತು ವಿದ್ಯಾರ್ಥಿಗಳ ವ್ಯಾಸಂಗದ ದಾಖಲಾತಿಗಳು, ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿದಾರರು ಹೊಂದಿರುವ ಜಮೀನಿನ ದಾಖಲಾತಿಗಳು, ಸಣ್ಣ ಮತ್ತು ಅತೀ ಸಣ್ಣ ರೈತರ ಪ್ರಮಾಣ ಪತ್ರಗಳನ್ನು ಮತ್ತು ಭೂ ಖರೀದಿಗೆ ಸಂಬಂಧಿಸಿದಂತೆ ಜಮೀನುದಾರರ ಕಂದಾಯ ದಾಖಲಾತಿಗಳೊಂದಿಗೆ ನಿಗಮದ www.dbcdc.karnataka.gov.in ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಅಭ್ಯರ್ಥಿಗಳು ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇದ್ದಲ್ಲಿ ಭರ್ತಿ ಮಾಡಿದ ಅರ್ಜಿಯೊಂದಿಗೆ ಅವಶ್ಯಕ ದಾಖಲಾತಿಗಳನ್ನು ಲಗತ್ತಿಸಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ ಕಚೇರಿಯಲ್ಲಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲುಅಕ್ಟೋಬರ್ 29 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಮತ್ತಿತರ ಹೆಚ್ಚಿನ ಮಾಹಿತಿಗಾಗಿ ನಿಗಮದ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
Share your comments