1. ಸುದ್ದಿಗಳು

ಲಾಕ್‍ಡೌನ್ ವಿಸ್ತರಣೆ- ಮೇ ಹದಿನೇಳರವರೆಗೆ ಎಲ್ಲಾ ಚಟುವಟಿಕೆಗಳಿಗೆ ನಿರ್ಬಂಧ

ಕೋವಿಡ್ ವೈರಸ್ ಸಂಬಂಧಿತ ದೇಶವ್ಯಾಪಿ ಲಾಕ್ ಡೌನ್ ಅನ್ನು ಮೇ 4ರಿಂದ ಮೇ 17 ರವರೆಗೆ (ಎರಡು ವಾರಗಳ ಕಾಲ) ವಿಸ್ತರಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ.
ದೇಶವ್ಯಾಪಿ ಲಾಕ್‍ಡೌನ್ ಮೇ. 3 ಕ್ಕೆ ಮುಗಿಯಬೇಕಿತ್ತು. ಆದರೆ ಕೊರೋನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದರಿಂದ ಲಾಕ್‍ಡೌನ್ ಅವಧಿ ವಿಸ್ತರಿಸಲಾಗಿದೆ.
ಕೋವಿಡ್ ವೈರಸ್ ಹರಡುವಿಕೆಯ ತೀವ್ರತೆ ಹಾಗೂ ಕೋವಿಡ್ ಸೋಂಕಿತರ ಪ್ರಕರಣಗಳ ಆಧಾರದಲ್ಲಿ ದೇಶಾದ್ಯಂತ ಜಿಲ್ಲೆಗಳನ್ನು ಮೂರು ವಲಯಗಳನ್ನಾಗಿ ವಿಂಗಡಿಸಲಾಗಿದೆ. ಕೆಂಪು ವಲಯ (ರೆಡ್ ಝೋನ್), ಕಿತ್ತಳೆ ವಲಯ (ಆರೆಂರhÉï ಝೋನ್) ಹಾಗೂ ಹಸುರು ವಲಯ (ಗ್ರೀನ್ ಝೋನ್).
ಇದೀಗ ಮೇ 14ರವರೆಗೆ ವಿಸ್ತರಣೆಯಾಗಿರುವ ಲಾಕ್ ಡೌನ್ ಪರಿಸ್ಥಿತಿಯಲ್ಲಿ ಆರೆಂಜ್ ಹಾಗೂ ಗ್ರೀನ್ ಝೋನ್ ಗಳಿಗೆ ಕೆಲವೊಂದು ವಿನಾಯಿತಿ ನೀಡಲಾಗಿದ್ದರೂ ಕೆಲವು ನಿರ್ಬಂಧಗಳು ಈ ಮೂರೂ ವಲಯಗಳಿಗೆ ಸಾಮಾನ್ಯವಾಗಿರಲಿದೆ.

ಮೇ 14ರವರೆಗೆ ವಿಮಾನ ಸಂಚಾರ, ರೈಲು ಸಂಚಾರ , ಮೆಟ್ರೋ ಸೇವೆಗಳು ಹಾಗೂ ಅಂರ್ತ ರಾಜ್ಯ ರಸ್ತೆ ಸಂಚಾರಕ್ಕೆ ನಿರ್ಬಂಧ ಇರಲಿದೆ. ಇನ್ನು ದೇಶಾದ್ಯಂತ ಎಲ್ಲಾ ರಾಜ್ಯಗಳಲ್ಲಿ ಶಾಲೆ, ಕಾಲೇಜುಗಳು, ಇನ್ನಿತರ ಶಿಕ್ಷಣ/ತರಬೇತಿ ಹಾಗೂ ಕೋಚಿಂಗ್ ಸಂಸ್ಥೆಗಳು ಕಾರ್ಯನಿರ್ವಹಿಸುವಂತಿಲ್ಲ. ಇನ್ನು ಹೊಟೇಲ್ ಗಳು, ರೆಸ್ಟೋರೆಂಟ್ ಗಳು, ಪ್ರವಾಸೋದ್ಯಮ ಚಟುವಟಿಕೆಗಳಿಗೆ ನಿರ್ಬಂಧ ಇರಲಿದೆ.
ಇನ್ನು, ಸಾರ್ವಜನಿಕ ಸಮಾರಂಭಗಳು, ಶಾಪಿಂಗ್ ಮಾಲ್ ಗಳು, ಚಿತ್ರಮಂದಿರಗಳು, ಸ್ಪೋರ್ಟ್ ಕಾಂಪ್ಲೆಕ್ಸ್‍ಗಳು ಹಾಗೂ ಜಿಮ್‍ಗಳಲ್ಲಿ ಜನ ಸೇರುವಿಕೆಯನ್ನು ಕಡ್ಡಾಯವಾಗಿ ಮೇ 14ರವರೆಗೆ ನಿರ್ಬಂಧಿಸಲಾಗಿದೆ. ಮಾತ್ರವಲ್ಲದೇ ದೇಶಾದ್ಯಂತ ರಾಜಕೀಯ, ಸಾರ್ವಜನಿಕ, ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳ ನೆಪದಲ್ಲಿ ಜನ ಸೇರುವಂತಿಲ್ಲ.

Published On: 01 May 2020, 09:06 PM English Summary: Lockdown Extension - Restriction on all activities until May seventeen

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.